ಸಾರಾಂಶ
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ, ಎನ್ಎಸ್ಎಸ್, ಯೂತ್ ರೆಡ್‌ಕ್ರಾಸ್ ಘಟಕ ಮತ್ತು ಎಲ್ಲಾ ಸ್ನಾತಕೋತ್ತರ ವಿಭಾಗಗಳು, ಗ್ರಂಥಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ, ಎನ್ಎಸ್ಎಸ್, ಯೂತ್ ರೆಡ್‌ಕ್ರಾಸ್ ಘಟಕ ಮತ್ತು ಎಲ್ಲಾ ಸ್ನಾತಕೋತ್ತರ ವಿಭಾಗಗಳು, ಗ್ರಂಥಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಶಾಂತ ಎನ್., ‘ವಿವೇಕಾನಂದರ ಕನಸಿನ ಭಾರತ’ ವಿಷಯದ ಬಗ್ಗೆ ಮಾತನಾಡಿ, ೧೯ನೇ ಶತಮಾನದ ಸಮಾಜ ಸುಧಾರಕರಾಗಿ ಬಲು ವಿಶಿಷ್ಟವಾದ ವಿವೇಕಾನಂದರು ಸುಧಾರಿತ ಭಾರತೀಯ ಸಮಾಜ ಮತ್ತು ಸಂಸ್ಕೃತಿ ವಿಶ್ವಕ್ಕೆ ಮಾದರಿಯಾಗಬೇಕು ಎಂದರು.
ಸಾಮಾಜಿಕ ಅನಿಷ್ಟಗಳನ್ನು ಹೋಗಲಾಡಿಸಿ ವೈಚಾರಿಕತೆ ಮೈಗೂಡಿಸಿಕೊಂಡಾಗ ಮಾತ್ರ ವೈವಿಧ್ಯಮಯ ಭಾರತ ಇನ್ನಷ್ಟು ಪ್ರಕಾಶಿಸ ಬಲ್ಲುದು. ಶಾಂತಿ ಮತ್ತು ಅಹಿಂಸೆಯಿಂದ ದೇಶದ ಉನ್ನತಿ ಹಾಗೂ ರಾಷ್ಟ್ರೀಯ ಐಕ್ಯತೆ ಸಾಧ್ಯ ಎಂದರು.ಪ್ರಾಂಶುಪಾಲ ನಿತ್ಯಾನಂದ ವಿ. ಗಾವಂಕರ ಅಧ್ಯಕ್ಷೀಯ ಭಾಷಣದಲ್ಲಿ, ಇಂದಿನ ಯುವಕರು ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಉತ್ತಮ ಮತ್ತು ಸದೃಢ ಭಾತರ ನಿರ್ಮಾಣಕ್ಕೆ ಯುವ ಪೀಳಿಗೆಯ ಪಾತ್ರದ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಹೇಳಿದರು.
ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಘು ನಾಯ್ಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಸಂಯೋಜನಾಧಿಕಾರಿ ಡಾ. ಉದಯ ಶೆಟ್ಟಿ ಕೆ., ಗ್ರಂಥಪಾಲಕ ಕೃಷ್ಣ, ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಮಾಲಾ ಮತ್ತು ವಿವಿಧ ಸ್ನಾತಕೋತ್ತರ ವಿಭಾಗಗಳು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಇತಿಹಾಸ ವಿಭಾಗದ ಉಪನ್ಯಾಸಕ ಡಾ. ಮಹೇಶ್ ಕುಮಾರ್ ಕೆ.ಇ. ಸ್ವಾಗತಿಸಿದರು. ದ್ವಿತೀಯ ಎಂ.ಎ. ಇತಿಹಾಸದ ವಿದ್ಯಾರ್ಥಿ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.