ಸಿರಿಬಾಗಿಲಲ್ಲಿ ತೆಂಕುತಿಟ್ಟು ಯಕ್ಷಮಾರ್ಗ ಪ್ರಾತ್ಯಕ್ಷಿಕೆ, ಪ್ರದರ್ಶನ ಸಂಪನ್ನ

| Published : Aug 28 2024, 12:58 AM IST

ಸಿರಿಬಾಗಿಲಲ್ಲಿ ತೆಂಕುತಿಟ್ಟು ಯಕ್ಷಮಾರ್ಗ ಪ್ರಾತ್ಯಕ್ಷಿಕೆ, ಪ್ರದರ್ಶನ ಸಂಪನ್ನ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಾಯೋಜಕತ್ವದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋಗದಲ್ಲಿ ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಎರಡು ದಿನಗಳ ಕಾಲ ತೆಂಕುತಿಟ್ಟು ಯಕ್ಷ ಮಾರ್ಗ- ಶಿಬಿರ- ಯಕ್ಷಗಾನ ಪ್ರದರ್ಶನ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಾಯೋಜಕತ್ವದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋಗದಲ್ಲಿ ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಎರಡು ದಿನಗಳ ಕಾಲ ತೆಂಕುತಿಟ್ಟು ಯಕ್ಷ ಮಾರ್ಗ- ಶಿಬಿರ- ಯಕ್ಷಗಾನ ಪ್ರದರ್ಶನ ನಡೆಯಿತು.

ತೆಂಕುತಿಟ್ಟು ಶಾಸ್ತ್ರೀಯ ನಾಟ್ಯ ಗುರು ಕರ್ಗಲ್ಲು ವಿಶ್ವೇಶ್ವರ ಭಟ್ ಅವರಿಂದ ಎರಡು ದಿನ ಪ್ರಾತ್ಯಕ್ಷಿಕೆಗಳು ನಡೆದವು. 50ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿ ಸದುಪಯೋಗ ಪಡೆದರು. ಯಕ್ಷಗಾನದ ಸಭಾ ವಂದನೆ- ಸಭಾ ಕಲಸು ತ್ತಿತ್ತಿತೈಯ ನಾಟ್ಯ ಕುಣಿತ ಇತ್ಯಾದಿಗಳ ಕುರಿತಾಗಿ ಮಾರ್ಗದರ್ಶನ ನೀಡಿದರು.

ಪ್ರಶಸ್ತಿ ಪ್ರದಾನ:

ಸಮಾರೋಪ ಸಮಾರಂಭಕ್ಕೆ ಮೊದಲು ಸಿರಿಬಾಗಿಲು ವೆಂಕಪ್ಪಯ್ಯ ಪ್ರಶಸ್ತಿಯನ್ನು ಯಕ್ಷಗಾನ ವಿದ್ವಾಂಸ, ಪ್ರಸಂಗಕರ್ತ, ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಶ್ರೀಧರ ಡಿಎಸ್ ಅವರಿಗೆ ನೀಡಿ ಗೌರವಿಸಲಾಯಿತು. ಸದಸ್ಯತ್ವ ನೋಂದಾವಣೆ ಅಭಿಯಾನದ ಅಂಗವಾಗಿ ಎಚ್. ಕೃಷ್ಣ ಭಟ್ ಮಂಗಳೂರು ಅವರಿಗೆ ಗೌರವ ನೀಡಲಾಯಿತು.

ಮುಖ್ಯ ಅತಿಥಿ, ಕಾಸರಗೋಡು ವಿಧಾನಸಭಾ ಸದಸ್ಯ ಎನ್.ಎ. ನೆಲ್ಲಿಕುನ್ನು ಮಾತನಾಡಿ, ಯಕ್ಷಗಾನ ಕ್ಷೇತ್ರಕ್ಕೆ ಸಿರಿಬಾಗಿಲು ಪ್ರತಿಷ್ಠಾನದ ಕೊಡು ಅಪಾರವಾದುದು. ಕೇರಳ ಸರ್ಕಾರದಿಂದಲೂ ಪ್ರತಿಷ್ಠಾನಕ್ಕೆ ಆರ್ಥಿಕ ಸಹಕಾರ ಸಿಗುವಂತೆ ವಿಧಾನಸಭೆಯಲ್ಲಿ ಪ್ರಸ್ಥಾಪಿಸಿ ಪ್ರಯತ್ನಿಸುವುದಾಗಿ ಹೇಳಿದರು.

ಯಕ್ಷಗಾನ ಅಕಾಡೆಮಿಯ ರಿಜಿಸ್ಟರ್ ನಮ್ರತಾ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಯಕ್ಷಗಾನ ಅಕಾಡೆಮಿ ಸದಸ್ಯ ಕೃಷ್ಣಪ್ಪ ಕಿನ್ಯಾ ಇದ್ದರು. ಅಕಾಡೆಮಿ ಸದಸ್ಯ ಸತೀಶ ಅಡಪ ಸಂಕಬೈಲು ನಿರೂಪಿಸಿದರು. ಜಗದೀಶ್ ಕೆ. ಕೂಡ್ಲು ಸಹಕರಿಸಿದರು.

ಇದಕ್ಕೂ ಮೊದಲು ಯಕ್ಷ ಬಳಗ ಹೊಸಂಗಡಿ ಅವರಿಂದ ಶರಸೇತು ಬಂಧನ ಯಕ್ಷಗಾನ ತಾಳಮದ್ದಲೆ ನಡೆಯಿತು. ಸಮರೋಪ ಸಮಾರಂಭದ ಬಳಿಕ ಸಿರಿಬಾಗಿಲು ಪ್ರತಿಷ್ಠಾನದ ನೇತೃತ್ವದಲ್ಲಿ ಪ್ರಸಿದ್ಧ ಕಲಾವಿದರಿಂದ ಭಕ್ತ ಪ್ರಹ್ಲಾದ ಯಕ್ಷಗಾನ ಪ್ರದರ್ಶನ ನಡೆಯಿತು.