ತೆಂಕುತಿಟ್ಟು ಯಕ್ಷಗಾನದ ಶಾಸ್ತ್ರೀಯ ನಾಟ್ಯಗುರು ಕರ್ಗಲ್ಲು ವಿಶ್ವೇಶ್ವರ ಭಟ್ ಅವರ ಕರ್ಗಲ್ಲು ಯಕ್ಷ ಮಾರ್ಗದ ಪ್ರಾಥಮಿಕ ಹಂತವನ್ನು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ದಾಖಲೀಕರಿಸಿದೆ.
ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಶಾಸ್ತ್ರೀಯ ನಾಟ್ಯಗುರು ಕರ್ಗಲ್ಲು ವಿಶ್ವೇಶ್ವರ ಭಟ್ ಅವರ ಕರ್ಗಲ್ಲು ಯಕ್ಷ ಮಾರ್ಗದ ಪ್ರಾಥಮಿಕ ಹಂತವನ್ನು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ದಾಖಲೀಕರಿಸಿದೆ.
ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ಯಕ್ಷ ಗುರು ಕರ್ಗಲ್ಲು ವಿಶ್ವೇಶ್ವರ ಭಟ್ ಅವರು ದಾಖಲೀಕರಣದ ಕಿರುಭಾಗವನ್ನು ಮಾಧ್ಯಮಕ್ಕೆ ಬಿಡುಗಡೆಗೊಳಿಸಿದರು. ಕಲಾವಿದರಾದ ಶಂಭಯ್ಯ ಕಂಜರ್ಪಣೆ, ಕಲಾವಿದ ಉಪನ್ಯಾಸಕ ಡಾ.ಶ್ರುತಕೀರ್ತಿರಾಜ ಉಜಿರೆ, ಪ್ರತಿಷ್ಠಾನದ ಅಧ್ಯಕ್ಷರಾದ ರಾಮಕೃಷ್ಣ ಮಯ್ಯ, ಸುಮಿತ್ರ ಆರ್.ಮಯ್ಯ, ಶ್ರೀಮುಖ ಎಸ್. ಆರ್.ಮಯ್ಯ, ರಾಜ ಎಸ್.ಆರ್.ಮಯ್ಯ ಇದ್ದರು.ಹಿಂದಿನ, ಇಂದಿನ ಯಕ್ಷಗಾನದ ನಾಟ್ಯ ಪ್ರಸ್ತುತಿಯನ್ನು ಗಮನಿಸಿ, ಅಂದಾಜು ನಾಲ್ಕು ದಶಕಗಳಿಗೂ ಹೆಚ್ಚು ವರುಷ ನಿರಂತರವಾಗಿ ಯಕ್ಷಗಾನ ಅಧ್ಯಯನ, ಅಧ್ಯಾಪನದೊಂದಿಗೆ ವಿಶೇಷವಾದ ಅನುಭವವನ್ನು ಹೊಂದಿರುವ ತೆಂಕು ತಿಟ್ಟಿನ ಏಕೈಕ ಕಲಾವಿದರಾಗಿರುವ ಕರ್ಗಲ್ಲು ವಿಶ್ವೇಶ್ವರ ಭಟ್‌ರ ಅಮೂಲ್ಯ ನಾಟ್ಯ ಸಂಪತ್ತನ್ನು ಸಂರಕ್ಷಿಸುವ ಉದ್ದೇಶದಿಂದ ಮುಂದಿನ ಪೀಳಿಗೆಗೆ ಹಸ್ತಾಂತರಿಸು ಕಾಯಕದಂತೆ ಸಿರಿಬಾಗಿಲು ಪ್ರತಿಷ್ಠಾನ ದಾಖಲಿಕರಣಗೊಳಿಸಿ ಪ್ರಸ್ತುತಪಡಿಸುತಿದೆ. ಹೆಚ್ಚಿನ ಮಾಹಿತಿಗಾಗಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನವನ್ನು ಸಂಪರ್ಕಿಸಬಹುದಾಗಿದೆ.
ಈ ಯೋಜನೆಗೆ ಕೆ.ಕೆ.ಶೆಟ್ಟಿ ಅಹಮದ್ ನಗರ, ವಾಸುದೇವ ಐತಾಳ ಪಣಂಬೂರು, ಮಹಾಬಲೇಶ್ವರ ಭಟ್ ಎಡಕ್ಕಾನ, ಮಧುರ ಉಪಾಧ್ಯ ಬೆಂಗಳೂರು ಆರ್ಥಿಕ ಸಹಕಾರ ನೀಡಿದ್ದಾರೆ.ದಾಖಲೀಕರಣಕ್ಕೆ ಕಲಾವಿದರಾದ ಶಂಭಯ್ಯ ಕಂಜರ್ಪಣೆ, ಮಧೂರು ಗೋಪಾಲಕೃಷ್ಣ ನಾವಡ, ಲಕ್ಷ್ಮಣ ಕುಮಾರ್ ಮರಕಡ, ಶಿವಾನಂದ ಪೆರ್ಲ ಸಹಕರಿಸಿದ್ದು, ಚಿತ್ರೀಕರಣವನ್ನು ಶ್ರೀಮುಖ ಮಯ್ಯ ಎಸ್.ವಿ.ವಿಷನ್, ಕಾರ್ತಿಕ ಕರ್ಗಲ್ಲು ದಾಖಲಿಸಿದ್ದಾರೆ. ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಆಸಕ್ತರಿಗೆ ಅಧ್ಯಯನಕ್ಕೆ ಮುಂದಿನ ದಿನಗಳಲ್ಲಿ ಈ ದಾಖಲೀಕರಣ ಲಭ್ಯವಾಗಲಿದೆ.