ಟೆನ್ನಿಸ್‌: ಪಾಲಿಕೆ ಅಧಿಕಾರಿ ನಾಯಕ ರಾಷ್ಟ್ರಮಟ್ಟಕ್ಕೆ ಆಯ್ಕೆ

| Published : Sep 11 2024, 01:01 AM IST

ಟೆನ್ನಿಸ್‌: ಪಾಲಿಕೆ ಅಧಿಕಾರಿ ನಾಯಕ ರಾಷ್ಟ್ರಮಟ್ಟಕ್ಕೆ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ಬಿ.ಟಿ.ನಾಯಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿ ಲಾನ್ ಟೆನ್ನಿಸ್ ಸಿಂಗಲ್ಸ್ ಓಪನ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುವ ಪಾಲಿಕೆ ಅಧಿಕಾರಿ ಬಿ.ಟಿ.ನಾಯಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ.

ಕನ್ನಡಪ್ರಭ ವಾರ್ತೆ ವಿಜಯಪುರ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ಬಿ.ಟಿ.ನಾಯಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿ ಲಾನ್ ಟೆನ್ನಿಸ್ ಸಿಂಗಲ್ಸ್ ಓಪನ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುವ ಪಾಲಿಕೆ ಅಧಿಕಾರಿ ಬಿ.ಟಿ.ನಾಯಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಬಿ.ಟಿ.ನಾಯಕಗೆ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಉಪ ಆಯುಕ್ತ ಮಹಾವೀರ ಬೋರಣ್ಣವರ ಸನ್ಮಾನಿಸಿ ಗೌರವಿಸಿದರು. ಈ ವೇಳೆ ವಲಯ ಆಯುಕ್ತ ಸುನೀಲಕುಮಾರ ಪಾಟೀಲ್, ಅಧಿಕಾರಿಗಳಾದ ಬಿ.ಆರ್.ಶರಣಪ್ಪನವರ, ರವೀಂದ್ರ ಶಿರಶ್ಯಾಡ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.