ಸಾರಾಂಶ
ಚಿಂತಾಮಣಿ: ತಾಲೂಕಿನ ದಂಡುಪಾಳ್ಯ ಗೇಟ್ ಸಮೀಪ ಟಿಟಿ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ೧೨ ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಟಿಟಿ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಟಿಟಿ ವಾಹನವು ನೆರೆಯ ಆಂಧ್ರಪ್ರದೇಶ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದು, ಬೆಂಗಳೂರಿನಿಂದ ಕಡಪ ಹೆದ್ದಾರಿಯ ರಸ್ತೆಯ ಮುಖಾಂತರ ಆಂಧ್ರಪ್ರದೇಶದ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿನ ನೆಲ್ಲೂರು ಜಿಲ್ಲೆಯ ಶ್ರೀಕಾಂತ, ಶ್ರೀನಿವಾಸಲು ಹಾಗೂ ಪುಷ್ಪ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು,ಗಾಯಗೊಂಡ ನಾಗೇಂದ್ರ, ಕಿಶೋರ್ ಕುಮಾರ್, ಗುರುಸ್ವಾಮಿ, ಬಿಂದು, ಆದ್ಯ, ಮನು, ತೇಜಸ್, ಹಿಮಶ್ರೀ, ಲವಕುಶ, ವಿ ವಿಹಾನ್, ರಮ್ಯಾ, ಜಗದೀಶ್ವರಿ, ಸೋಮೇಶ್ವರರಾವ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾ ಎಸ್‌ಪಿ ಕುಶಾಲ್ ಚೌಕ್ಷಿ, ಎಎಸ್‌ಪಿ ಖಾಸೀಂ ರಾಜ್ ಇಮಾಮ್, ಡಿವೈಎಸ್ಪಿ ಮುರಳೀಧರ್, ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.