ಸಾರಾಂಶ
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75) ಹಾಗೂ ರಮ್ಯಾ (23) ದಾರುಣವಾಗಿ ಮೃತಪಟ್ಟವರು.
ಗಾಯಾಳುಗಳನ್ನು ಸುಶೀಲಾ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದ್ದು, ಚಿಂತಾಜಕನಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.ಶನಿವಾರ ಮುಂಜಾನೆ ಸುಮಾರು 4.40 ರ ಸುಮಾರಿಗೆ, ಬೆಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕರ ನಿಯಂತ್ರಣ ತಪ್ಪಿ ನಾರಾಯಣಗುರು ವೃತ್ತಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಹೊಡೆತಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.ಕಾರಿನಲ್ಲಿ ಒಟ್ಟು 9 ಮಂದಿ ಸಂಬಂಧಿಕರು ಪ್ರಯಾಣಿಸುತ್ತಿದ್ದರು. ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ:
ಅಪಘಾತ ಸ್ಥಳಕ್ಕೆ ದ.ಕ. ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಸಿ.ಸಿ.ಕ್ಯಾಮರಾವಿದ್ದು, ಚಾಲಕ ನೇರವಾಗಿ ಬಂದು ಡಿಕ್ಕಿ ಹೊಡೆಯುವ ದೃಶ್ಯ ದಾಖಲಾಗಿದೆ. ಘಟನೆ ಹೇಗೆ ನಡೆದಿದೆ ಎಂಬುದು ತನಿಖೆಯ ಬಳಿಕ ತಿಳಿಯುತ್ತದೆ. ಸರ್ಕಲ್‌ನಲ್ಲಿ ಹೈಮಾಸ್ಟ್ ದೀಪ ಅಳವಡಿಸಲಾಗಿದ್ದರೂ ಅದು ಉರಿಯುತ್ತಿಲ್ಲ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಬರೆಯಲಾಗುತ್ತದೆ. ಭಾರಿ ಚರ್ಚೆಗೆ ಗ್ರಾಸವಾಗಿರುವ ಸರ್ಕಲ್ ಬಗ್ಗೆ ಸಂಬಂಧಿಸಿದ ಎಂಜಿನಿಯರ್‌ಗಳ ಜೊತೆಯೂ ಮಾತನಾಡುವುದಾಗಿ ಎಸ್.ಪಿ. ತಿಳಿಸಿದರು.ಈ ಸಂದರ್ಭ ಬಂಟ್ವಾಳ ಪೋಲೀಸ್ ಇನ್ಸ್‌ಪೆಕ್ಟರ್ ಅನಂತಪದ್ಮನಾಭ ಮತ್ತು ಟ್ರಾಫಿಕ್ ಎಸ್.ಐ.ಸುತೇಶ್ ಜೊತೆಗಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))