ಕ್ಯಾಂಟರ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

| N/A | Published : Mar 28 2025, 01:21 AM IST / Updated: Mar 28 2025, 03:49 AM IST

jhalawar road accident

ಸಾರಾಂಶ

ಚನ್ನಪಟ್ಟಣ: ಕ್ಯಾಂಟರ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು ಕ್ಯಾಂಟರ್ ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಸಮೀಪ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.

ಪ್ರಕಾಶ್(37), ಪುಟ್ಟಗೌರಮ್ಮ(72) ಹಾಗೂ ಶಿವರತ್ನ(50) ಮೃತರು. ಕಾರಿನಲ್ಲಿದ್ದ ನಟರಾಜು ಮತ್ತು ಅವರ ಪತ್ನಿ ಸುಮಾ ಹಾಗೂ ಕ್ಯಾಂಟರ್ ಚಾಲಕ ನಾಗೇಶ್‌ಗೆ ಗಂಭೀರ ಗಾಯಗೊಂಡವರು.

ಮಂಗಾಡಹಳ್ಳಿ ಗ್ರಾಮದ ನಟರಾಜು ಕುಟುಂಬ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ವಾಸವಿದ್ದರು. ಮಂಡ್ಯ ಜಿಲ್ಲೆಯ ದೊಡ್ಡಬಾಣಸವಾಡಿ ಗ್ರಾಮದಲ್ಲಿ ಸಂಬಂಧಿಕರೊಬ್ಬರು ಮೃತಪಟ್ಟಿದ್ದು, ಅವರ ಅಂತಿಮ ದರ್ಶನಕ್ಕೆ ತೆರಳುವ ವೇಳೆ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಬೆಂ-ಮೈ ಎಕ್ಸ್‌ಪ್ರೆಸ್ ವೇ ಸರ್ವೀಸ್ ರಸ್ತೆಯಲ್ಲಿ ಎದುರುಗಡೆಯಿಂದ ಬಂದ ಕ್ಯಾಂಟರ್ ಹಾಗೂ ಮಾರುತಿ ೮೦೦ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಪ್ರಕಾಶ್, ಪುಟ್ಟಗೌರಮ್ಮ ಹಾಗೂ ಶಿವರತ್ನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಕ್ಯಾಂಟರ್ ಚಾಲಕ ನಾಗೇಶ್, ನಟರಾಜು, ಸುಮಾ ಅವರನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ಚನ್ನಪಟ್ಟಣ ಸಂಚಾರ ಪೊಲೀಸರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಿ ರಸ್ತೆ ತೆರವುಗೊಳಿಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.