ಗ್ರಾಮ ಪಂಚಾಯಿತಿ ಹಂತದಲ್ಲಿ ಶುದ್ಧ ಕುಡಿಯುವ ನೀರಿನ ಪರೀಕ್ಷೆ

| Published : Jun 28 2024, 12:45 AM IST

ಗ್ರಾಮ ಪಂಚಾಯಿತಿ ಹಂತದಲ್ಲಿ ಶುದ್ಧ ಕುಡಿಯುವ ನೀರಿನ ಪರೀಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ಹೊಸಕೋಟೆ: ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಪ್ರತಿ ತಿಂಗಳು ಗ್ರಾಪಂ ಹಂತದಲ್ಲೇ ನೀರಿನ ತಪಾಸಣೆ ಮಾಡಲಾಗುತ್ತಿದೆ ಎಂದು ಪಿಡಿಒ ರವಿಕುಮಾರ್ ತಿಳಿಸಿದರು.

ಹೊಸಕೋಟೆ: ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಪ್ರತಿ ತಿಂಗಳು ಗ್ರಾಪಂ ಹಂತದಲ್ಲೇ ನೀರಿನ ತಪಾಸಣೆ ಮಾಡಲಾಗುತ್ತಿದೆ ಎಂದು ಪಿಡಿಒ ರವಿಕುಮಾರ್ ತಿಳಿಸಿದರು.

ತಾಲೂಕಿನ ಅನುಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಂಡಿದ್ದ ವಾಟರ್ ಮೆನ್‌ಗಳಿಗೆ ನೀರು ಪರೀಕ್ಷೆ ಕಾರ್ಯಾಗಾರದಲ್ಲಿ ಮಾತನಾಡಿದರು. ರಾಜ್ಯದ ಸಾಕಷ್ಟು ಕಡೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸಾಂಕ್ರಾಮಿಕ ರೋಗಗಳು ಪತ್ತೆಯಾದ್ದರಿಂದ ಸರ್ಕಾರಿ ಆದೇಶದ ಅನ್ವಯ ಜಿಲ್ಲಾ ಕುಡಿಯುವ ನೀರು ಸರಬರಾಜು ಇಲಾಖೆ ವತಿಯಿಂದ ಗ್ರಾಪಂ ವ್ಯಾಪ್ತಿಯ ಕೊಳವೆಬಾವಿಗಳ ನೀರನ್ನು ಪರೀಕ್ಷೆ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ ಅಲ್ಲಿನ ವಾಟರ್ ಮೆನ್‌ಗಳಿಗೆ ತರಬೇತಿ ನೀಡಿ ಪ್ರತಿ ತಿಂಗಳು ಕೊಳವೆಬಾವಿಗಳ ನೀರನ್ನು ತಪಾಸಣೆ ಮಾಡಿ ಶುದ್ಧ ಕುಡಿಯುವ ನೀರು ಸರಬರಾಜಿಗೆ ಮತ್ತಷ್ಟು ಆದ್ಯತೆ ನೀಡಲಾಗುತ್ತಿದೆ ಎಂದರು.

ನೀರು ಸರಬರಾಜು ಇಲಾಖೆಯ ಮಾನವ ಸಂಪನ್ಮೂಲ ಅಧಿಕಾರಿ ರಾಜೇಶ್ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವೆಬಾವಿಗಳು, ವಾಟರ್ ಫಿಲ್ಟರ್ ಗಳು, ಬೀದಿ ಬದಿಯ ನೀರು ಸೇರಿದಂತೆ ಒಟ್ಟು ಆರು ಕಡೆ ನೀರನ್ನು ಸಂಗ್ರಹಿಸಿ ಪ್ರತಿ ತಿಂಗಳು ಪರೀಕ್ಷೆ ಮಾಡಿ ನೀರಿನ ಗುಣಮಟ್ಟ ಕಾಪಾಡಲಾಗುವುದು. ಎರಡು ಮೂರು ಬಾರಿ ತಪಾಸಣೆ ಮಾಡಿದಾಗಲೂ ನೀರಿನ ಪರೀಕ್ಷೆಯಲ್ಲಿ ವ್ಯತ್ಯಾಸ ಕಂಡುಬಂದರೆ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದರು. ಜಿಪಂ ನೀರು ಸರಬರಾಜು ಇಲಾಖೆಯ ಮಾನವ ಸಂಪನ್ಮೂಲ ಅಧಿಕಾರಿ ಸುಮಾ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಜರಿದ್ದರು.