ಸಾರಾಂಶ
ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ನಗರದ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಿಂದ ಜಿಲ್ಲಾಡಳಿತದವರಗೆ ಹಮ್ಮಿಕೊಂಡಿದ್ದ ಬೃಹತ್ ತಿರಂಗಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಆಪರೇಷನ್ ಸಿಂದೂರ ಯಶ್ವಸಿಗೊಳಿಸಿದ ಭಾರತೀಯ ಸೈನಿಕರಿಗೆ ಧನ್ಯವಾದ ಅರ್ಪಿಸಲು ಹಾಗೂ ಅವರಿಗೆ ಧೈರ್ಯ ತುಂಬಿ, ಬೆಂಬಲ ಸೂಚಿಸಿ ಎಂದು ಮರಿಯಾಲ ಮಠದ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ ಸಲಹೆ ನೀಡಿದರು.ಆಪರೇಷನ್ ಸಿಂದೂರ ಕಾರ್ಯಾಚರಣೆ ಯಶ್ವಸಿಯಾದ ಹಿನ್ನೆಲೆಯಲ್ಲಿ ನಾಗರಿಕರಿಂದ ರಾಷ್ಚ್ರ ರಕ್ಷಣೆಗಾಗಿ ನಾಗರಿಕರು ಎಂಬ ಧ್ಯೇಯದೊಂದಿಗೆ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ನಗರದ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಿಂದ ಜಿಲ್ಲಾಡಳಿತದವರಗೆ ಹಮ್ಮಿಕೊಂಡಿದದ ಬೃಹತ್ ತಿರಂಗಾಯಾತ್ರೆಗೆ ನಗರದ ಸಿದ್ದಮಲ್ಲೇಶ್ವರ ಮಠದ ಚನ್ನಬಸವ ಸ್ವಾಮೀಜಿಯೊಂದಿಗೆ ಚಾಲನೆ ನೀಡಿ ಮಾತನಾಡಿದರು,
ನಾವೆಲ್ಲರೂ ಸಂತಸದಿಂದ, ನೆಮ್ಮದಿಯಿಂದ ಇದ್ದೇವೆ ಎಂದರೆ ಅದು ದೇಶದ ಗಡಿ ಕಾಯುವ ವೀರಯೋಧರಿಂದ ಅಂತಹ ವೀರಯೋಧರು ಪ್ರಾಣವನ್ನು ಒತ್ತೆಯಿಟ್ಟು ಉಗ್ರರನ್ನು ಸೆದೆಬಡಿದು ನಮ್ಮೆಲ್ಲರನ್ನು ರಕ್ಷಣೆ ಮಾಡಿದ್ದಾರೆ, ಅವರಿಗೆ ನಾವೆಲ್ಲರೂ ಜಾತ್ಯತೀತವಾಗಿ, ಪಕ್ಷಾತೀತವಾಗಿ ಬೆಂಬಲ ನೀಡಬೇಕಿದೆ. ಎಂದರು. ನಮ್ಮ ಸೈನಿಕರ ಶೌರ್ಯ ಮತ್ತು ತ್ಯಾಗವನ್ನು ನಾವೆಲ್ಲರೂ ಮೆಚ್ಚಬೇಕು. ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ಸೈನ್ಯದಲ್ಲಿರುವ ಎಲ್ಲರಿಗೂ ಇಂತಹ ಯಾತ್ರೆಗಳ ಮೂಲಕ ಕಳುಹಿಸೋಣ ಎಂದರು. ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಆರಂಭವಾದ ಯಾತ್ರೆಯು ರಥಬೀದಿ, ದೊಡ್ಡಂಗಡಿ ಬೀದಿ, ಚಿಕ್ಕಂಗಡಿ ಬೀದಿ. ಡಿ.ವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದ ಮುಂಭಾಗಕ್ಕೆ ತೆರಳಿ ಮುಕ್ತಾಯಗೊಂಡಿತು.ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಎಬಿವಿಪಿ, ವಿವಿಧ ಸಂಘ, ಸಂಸ್ಥೆಗಳ ಪ್ರಮುಖರು, ಬಿಜೆಪಿ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗವಹಿಸಿದ್ದರು. ಯಾತ್ರೆಯುದ್ದಕ್ಕೂ ಭಾರತ್ ಮಾತಾ ಕಿ ಜೈ, ಜಮ್ಮು ಕಾಶ್ಮೀರ ಭಾರತ ದೇಶದ ಸಿಂದೂರ ಎಂಬ ಘೋಷಣೆಗಳನ್ನು ಕೂಗಿದರು. ಹಿಂದೂ ಜಾಗರಣಾ ವೇದಿಕೆಯ ಪ್ರಾಂತ್ಯ ಸಹ ಸಂಚಾಲಕ ಮಹೇಶ್, ಎಬಿವಿಪಿ ರಾಜ್ಯ ಉಪಾಧ್ಯಕ್ಷೆ ಡಾ.ನಿರ್ಮಲಾ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಮಾತನಾಡಿದರು.
ಯಾತ್ರೆಯಲ್ಲಿ ಮಾಜಿ ಶಾಸಕ ಎಸ್.ಬಾಲರಾಜು, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ನಗರಸಭಾ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷೆ ಮಮತ, ಮಾಜಿ ಜಿಲ್ಲಾಧ್ಯಕ್ಷರಾದ ನಾರಾಯಣ ಪ್ರಸಾದ್,ಚೂಡಾ ಮಾಜಿ ಅಧ್ಯಕ್ಷರಾದ ಶಾಂತಮೂರ್ತಿ ಕುಲಗಾಣ, ಆರ್ ಸುಂದರ್, ಬಾಲಸುಬ್ರಹ್ಮಣ್ಯ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪಿ.ವೃಷಬೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್, ಡಾ.ಎ.ಆರ್.ಬಾಬು, ನೂರೊಂದುಶೆಟ್ಟಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಬಾಲರಾಜು, ಸುದರ್ಶನ್ ಗೌಡ, ಜಿಲ್ಲಾ ಉಪಾಧ್ಯಕ್ಷ ಶಿವುವಿರಾಟ್, ಜಿಲ್ಲಾ ಕಾರ್ಯದರ್ಶಿ ನಟರಾಜು, ಜಿಲ್ಲಾ ಸಹ ಮಾಧ್ಯಮ ಪ್ರಮುಖ್ ಶಿವಣ್ಣ , ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸುಂದ್ರಪ್ಪ, ನಗರ ಮಂಡಲ ಅಧ್ಯಕ್ಷ ಶಿವರಾಜ್, ಮಹದೇವ ಪ್ರಸಾದ್, ಅರಕಲವಾಡಿ ಮಹೇಶ್, ಅನಿಲ್, ವೃಷಭೇಂದ್ರಸ್ವಾಮಿ, ನಾಗೇಶ್, ರಾಜು, ಪ್ರಧಾನ ಕಾರ್ಯದರ್ಶಿ ಮಹೇಶ್, ಕೂಸಣ್ಣ, ಜಿಲ್ಲಾ ಮಹಿಳಾ ಅಧ್ಯಕ್ಷೆ ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲಜಾ, ನಗರಸಭಾ ಸದಸ್ಯ ಮನೋಜ್ ಪಟೇಲ್, ಗಾಯತ್ರಿ ಚಂದ್ರಶೇಖರ್, ಆಶಾ ನಟರಾಜು, ಕುಮುದ, ಮಂಜುನಾಥ್, ಬುಲೆಟ್ ಚಂದ್ರು, ಮಾಜಿ ನಗರಸಭಾ ಸದಸ್ಯ ಶಿವಣ್ಣ ಅರಕಲವಾಡಿ ನಾಗೇಂದ್ರ ಭಾಗವಹಿಸಿದ್ದರು.