ಕನ್ನಡಪ್ರಭ ವಾರ್ತೆ ಮೈಸೂರುರಾಜ್ಯ ಸರ್ಕಾರವು ಬೌದ್ಧ ಬಿಕ್ಕುಗಳಿಗೆ ಮಾಸಿಕ 6,000 ರೂ. ಗೌರವಧನ ನೀಡಲು ಆದೇಶ ಹೊರಡಿಸಿದ್ದು, ಇದಕ್ಕಾಗಿ ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.ಬೌದ್ಧ ಬಿಕ್ಕುಗಳ ಜೀವನ ನಿರ್ವಹಣೆಗೆ ಮಾಸಿಕ ಗೌರವಧನ ನೀಡುವಂತೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದ ಅವರು, ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುವ ಬೌದ್ಧ ಬಿಕ್ಕುಗಳ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಇದಕ್ಕಾಗಿ ಸರ್ಕಾರದಿಂದ ಯಾವುದೇ ಸಹಾಯಧನ ದೊರಕುತ್ತಿಲ್ಲ.ಡಾ.ಬಿ.ಆರ್. ಅಂಬೇಡ್ಕರ್ ಅವರ ಅಭಿಮಾನಿಗಳು ಸೇರಿದಂತೆ ಬೌದ್ಧ ಧರ್ಮವನ್ನು ಒಪ್ಪಿಕೊಂಡಿರುವ ಬಹಳಷ್ಟು ಅನುಯಾಯಿಗಳು ಸೇರಿ ಬುದ್ಧ ವಿಹಾರವನ್ನು ನಿರ್ವಹಣೆ ಮಾಡುತ್ತಿದ್ದಾರೆ. ಆದ್ದರಿಂದ ಬೌದ್ಧ ಬಿಕ್ಕುಗಳಿಗೆ ಸರ್ಕಾರವು ಗೌರವಧನ ನೀಡವುದರಿಂದ ಬುದ್ಧವಿಹಾರ ನಡೆಸಲು ಸಹಕಾರಿಯಾಗಲಿದೆ ಎಂದು ಮನವಿ ಮಾಡಿದ್ದರು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಬಜೆಟ್ ನಲ್ಲಿ ಘೋಷಿಸಿದ್ದರು. ಅದರಂತೆ ಮಂಗಳವಾರ ಸರ್ಕಾರವು ರಾಜ್ಯದಲ್ಲಿನ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಧಮ್ಮಾಚಾರಿಗಳ ದೈನಂದಿನ ಜೀವನ ನಿರ್ವಹಣೆಗೆ ಮಾಸಿಕ 6000 ರೂ. ಗೌರವಧನ ನೀಡುವುದಕ್ಕೆ ಆದೇಶ ಹೊರಡಿಸಿದೆ.ಈ ಹಿನ್ನೆಲೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.-------------------eom/mys/dnm/
ಬೌದ್ಧ ಬಿಕ್ಕುಗಳ ಗೌರವಧನಕ್ಕೆ ಆದೇಶ: ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಕೆ. ಶಿವಕುಮಾರ್
ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುವ ಬೌದ್ಧ ಬಿಕ್ಕುಗಳ ಜೀವನ ನಿರ್ವಹಣೆ ಕಷ್ಟಕರವಾಗಿದೆ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.