ಸಾರಾಂಶ
ಕನ್ನಡಪ್ರಭ ವಾರ್ತೆ ಪುತ್ತೂರು
ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿಯ ನೇತೃತ್ವದಲ್ಲಿ ನಡೆಸಲ್ಪಡುತ್ತಿರುವ ೨೨ನೇ ವರ್ಷದ ಗಣಪತಿ, ಶಾರದೆ, ನವದುರ್ಗೆಯರ ಸಹಿತ ಪುತ್ತೂರು ದಸರಾ ಮಹೋತ್ಸವು ಸಂಪ್ಯ ವಿಷ್ಣುಮೂರ್ತಿ ಅನ್ನಪೂಣೇಶ್ವರಿ ಕ್ಷೇತ್ರದಲ್ಲಿ .೩ ರಿಂದ ೧೪ ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದೆ ಎಂದು ಪುತ್ತೂರು ದಸರಾ ಮಹೋತ್ಸವ ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ತಿಳಿಸಿದ್ದಾರೆ.ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅ.೩ರಂದು ಗಣಪತಿ ಮತ್ತು ನವದುರ್ಗೆಯರ ಪ್ರತಿಷ್ಠೆ ನಡೆಯಲಿದೆ. ಬಳಿಕ ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಅವರು ಪುತ್ತೂರು ದಸರಾವನ್ನು ಉದ್ಘಾಟಿಸಲಿದ್ದಾರೆ. ಆರ್ಯಾಪು ಗ್ರಾ.ಪಂ ಉಪಾಧ್ಯಕ್ಷ ಅಶೋಕ್ ನಾಯ್ಕ್, ಉದ್ಯಮಿ ರಮೇಶ್ ಪ್ರಭು ಉಪಸ್ಥಿತರಿರುವರು. ಅದೇ ದಿನ ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅಕ್ಷಯ ಕಾಲೇಜು ಸಂಚಾಲಕ ಜಯಂತ ನಡುಬೈಲು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಸೀತಾರಾಮ ರೈ ಕೈಕಾರ, ದ್ವಾರಕ ಕನ್‌ಸ್ಟ್ರಕ್ಷನ್‌ನ ಗೋಪಾಲಕೃಷ್ಣ ಭಟ್, ತುಡರ್ ಚಲನಚಿತ್ರದ ನಾಯಕ ನಟ ಸಿದ್ಧಾರ್ಥ್, ಆರಾಟ ಕನ್ನಡ ಚಲನಚಿತ್ರದ ಸುನೀಲ್ ನೆಲ್ಲಿಗುಡ್ಡೆ ವಿಶೇಷ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.
ಅ.೫ಕ್ಕೆ ಸಾಮೂಹಿಕ ಆಯುಧ ಪೂಜೆ, ಅ.೯ಕ್ಕೆ ಶಾರದಾ ಪ್ರತಿಷ್ಠೆ, ಅ.೧೪ರಂದು ಸಾಮೂಹಿಕ ಚಂಡಿಕಾಹವನ ನಡೆಯಲಿದೆ. ಅದೇ ದಿನ ಸಂಜೆ ಪುತ್ತೂರು ದಸರಾ ಮೆರವಣಿಗೆ ನಡೆಯಲಿದೆ. ಶೋಭಾಯಾತ್ರೆಯು ದರ್ಬೆ ಬೈಪಾಸ್ ರಸ್ತೆಯಿಂದ ಪೇಟೆಯಾಗಿ ಬೊಳುವಾರು ತನಕ ನಡೆಯಲಿದೆ. ಪ್ರತಿ ದಿನ ಬೆಳಿಗ್ಗೆ ವಿವಿಧ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ: ಅ.೩ರಂದು ಸಂಜೆ ಅಭಿನಯ ಆರ್ಟ್ಸ್ ಪುತ್ತೂರು ಇವರಿಂದ ಕುಸಲ್ದ ಪುಳಿಮುಂಚಿ ಮತ್ತು ಮೆಲೋಡಿಸ್ ನಡೆಯಲಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಪುತ್ತೂರು ದಸರಾ ಮಹೋತ್ಸವ ಸಮಿತಿ ಅಧ್ಯಕ್ಷ ಯು.ಲೋಕೇಶ್ ಹೆಗ್ಡೆ, ಕಾರ್ಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ, ಪ್ರಧಾನ ಕಾರ್ಯದರ್ಶಿ ನೇಮಾಕ್ಷ ಸುವರ್ಣ, ಉಪಾಧ್ಯಕ್ಷ ಜಯಂತ ಶೆಟ್ಟಿ ಕಂಬಳತ್ತಡ್ಡ ಇದ್ದರು.