ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಕಳ್ಳತನ ಮಾಡಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಾಗ ಕುಟುಂಬಸ್ಥರು ವಿರೋಧಪಡಿಸುವ ಸಮಯದಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಪೊಲೀಸ್ ಅಧಿಕಾರಿಗಳು ಪಿಸ್ತೂಲ್ ತೋರಿಸಿ ಆತನನ್ನು ಬಂಧಿಸಿದ ಘಟನೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಲ್ಲಿ ನಡೆದಿದೆ.ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಅವಿನಾಶ ಮಚ್ಚಾಳೆ ಎಂಬಾತ ಹುಬ್ಬಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ತಾಮ್ರದ ವೈರ್‌ಗಳನ್ನು ಕದ್ದು ಪರಾರಿಯಾಗಿದ್ದ. ಆರೋಪಿ ಅವಿನಾಶ ವಿಜಯಪುರದಲ್ಲಿದ್ದಾನೆ ಎಂಬ ಮಾಹಿತಿ ಮೇರೆಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಇಲ್ಲಿಗೆ ಆಗಮಿಸಿದ್ದರು. ಆರೋಪಿ ಅವಿನಾಶನನ್ನು ಬಂಧಿಸಲು ಮಫ್ತಿಯಲ್ಲಿ ಬಂದಿದ್ದ ಖಾಕಿಪಡೆ ಆತನ ಬಂಧನಕ್ಕೆ ಮುಂದಾಗುತ್ತಿದ್ದಂತೆ ಆರೋಪಿಯ ಕುಟುಂಬದ ಮಹಿಳೆಯರು ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನ ನಡೆಸಿದರು.ಈ ವೇಳೆ ಮಾತಿಗೆ ಮಾತು ಬೆಳೆದು, ಗಲಾಟೆ ಶುರುವಾದ ಕಾರಣ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದರು. ಇದೇ ಅವಕಾಶವನ್ನು ಬಳಸಿಕೊಂಡ ಆರೋಪಿ ಅವಿನಾಶ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ಪರಿಸ್ಥಿತಿ ಕೈಮೀರುವ ಸಂಭವ ಅರಿತ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್ಐ ಹೊನ್ನಪ್ಪನವರ ಎಂಬುವವರು ಪಿಸ್ತೂಲ್ ಹೊರ ತೆಗೆದು ಸಾರ್ವಜನಿಕವಾಗಿಯೇ ಪ್ರದರ್ಶಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಗೋಳಗುಮ್ಮಟ ಪೊಲೀಸ್ ಠಾಣೆಗೆ ಕರೆದೊಯ್ದು, ತಮ್ಮ ಹೆಸರು ವಿಳಾಸ ಹಾಗೂ ಇತರೆ ಮಾಹಿತಿ ನೀಡಿ, ಆರೋಪಿಯನ್ನು ಹುಬ್ಬಳ್ಳಿಗೆ ಕರೆದೊಯ್ದಿದ್ದಾರೆ.ಕನ್ನಡಪ್ರಭ ವಾರ್ತೆ ವಿಜಯಪುರಕಳ್ಳತನ ಮಾಡಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಾಗ ಕುಟುಂಬಸ್ಥರು ವಿರೋಧಪಡಿಸುವ ಸಮಯದಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಪೊಲೀಸ್ ಅಧಿಕಾರಿಗಳು ಪಿಸ್ತೂಲ್ ತೋರಿಸಿ ಆತನನ್ನು ಬಂಧಿಸಿದ ಘಟನೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಲ್ಲಿ ನಡೆದಿದೆ.