ಕೇಂದ್ರ ಸರ್ಕಾರದ ಸಾಧನೆಯೇ ಶ್ರೀರಕ್ಷೆ: ಕೋಟಾ ಶ್ರೀನಿವಾಸ್‌ ಪೂಜಾರಿ

| Published : Mar 17 2024, 01:48 AM IST

ಕೇಂದ್ರ ಸರ್ಕಾರದ ಸಾಧನೆಯೇ ಶ್ರೀರಕ್ಷೆ: ಕೋಟಾ ಶ್ರೀನಿವಾಸ್‌ ಪೂಜಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಶನಿವಾರ ಬೆಳಿಗ್ಗೆ ಯಿಂದ ಸಂಜೆಯವರೆಗೆ ಚಿಕ್ಕಮಗಳೂರಿನಲ್ಲಿ ಸಂಚರಿಸಿದರು, ಒಂದರ ನಂತರ ಮತ್ತೊಂದು ಸಭೆ ನಡೆಸಿದರು. ಪದಗ್ರಹಣ ಸಮಾರಂಭದಲ್ಲೂ ಭಾಗಿಯಾಗಿದ್ದರು. ಈ ಎಲ್ಲಾ ಕಾರ್ಯದಲ್ಲಿ ಪಾಲ್ಗೊಳ್ಳುವ ಮುನ್ನ ಬೆಳಿಗ್ಗೆ ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಪಡೆದರು.

ದತ್ತಪೀಠಕ್ಕೆ ಭೇಟಿ, ಬೀದಿ ಬದಿ ವ್ಯಾಪಾರಿಗಳು- ಟ್ಯಾಕ್ಸಿ ಚಾಲಕರ ಭೇಟಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಶನಿವಾರ ಬೆಳಿಗ್ಗೆ ಯಿಂದ ಸಂಜೆಯವರೆಗೆ ಚಿಕ್ಕಮಗಳೂರಿನಲ್ಲಿ ಸಂಚರಿಸಿದರು, ಒಂದರ ನಂತರ ಮತ್ತೊಂದು ಸಭೆ ನಡೆಸಿದರು. ಪದಗ್ರಹಣ ಸಮಾರಂಭದಲ್ಲೂ ಭಾಗಿಯಾಗಿದ್ದರು. ಈ ಎಲ್ಲಾ ಕಾರ್ಯದಲ್ಲಿ ಪಾಲ್ಗೊಳ್ಳುವ ಮುನ್ನ ಬೆಳಿಗ್ಗೆ ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಪಡೆದರು.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಹೆಸರು ಘೋಷಣೆಯಾದ ನಂತರ ಇದೇ ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಆಗಮಿಸಿದ ಕೋಟಾ ಶ್ರೀನಿವಾಸ್‌ ಪೂಜಾರಿ ಬೆಳಿಗ್ಗೆ ದತ್ತಪೀಠಕ್ಕೆ ತೆರಳುವಾಗ ಇಲ್ಲಿನ ಹನುಮಂತಪ್ಪ ವೃತ್ತದಲ್ಲಿ ಬೀದಿ ಬದಿಯಲ್ಲಿ ನಿಂತಿರುವ ತಳ್ಳುವ ಗಾಡಿಯಲ್ಲಿ ಬನ್ಸ್‌ ತಿಂದರು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಸ್ವನಿಧಿ ಯೋಜನೆ ಬಗ್ಗೆ ತಿಳಿಸಿದರು. ನಂತರ ದತ್ತಪೀಠಕ್ಕೆ ತೆರಳಿ ಬಹುತೇಕ ಇಲ್ಲಿಂದಲೇ ತಮ್ಮ ಚುನಾವಣಾ ಪ್ರಚಾರ ಆರಂಭ ಎಂದು ಹೇಳಿದರು.ಚಿಕ್ಕಮಗಳೂರಿಗೆ ವಾಪಸ್‌ ಬಂದ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿಯ ಟ್ಯಾಕ್ಸಿ ಸ್ಟ್ಯಾಂಡ್‌ಗೆ ತೆರಳಿ ಚಾಲಕರ ಹಾಗೂ ಮಾಲೀಕರ ಸಮಸ್ಯೆ ಆಲಿಸಿದರು. ನಂತರ ಬಿಜೆಪಿ ಜಿಲ್ಲಾ ಕೋರ್‌ ಕಮಿಟಿ ಸಭೆಯಲ್ಲಿ ಪಾಲ್ಗೊಂಡರು. ಈ ಸಭೆ ಮುಕ್ತಾಯವಾಗುತ್ತಿದ್ದಂತೆ ಲೋಕಸಭಾ ಚುನಾವಣೆ ನಿರ್ವಹಣಾ ಸಮಿತಿ ಸಭೆಯಲ್ಲಿ ಭಾಗವಹಿಸಿದರು. ಬಳಿಕ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಚಿಕ್ಕಮಗಳೂರು ನಗರ ಬಿಜೆಪಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಸಿ.ಟಿ. ರವಿ, ಡಿ.ಎನ್‌. ಜೀವರಾಜ್‌, ವಿಧಾನಪರಿಷತ್‌ ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌, ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಎಚ್‌.ಸಿ. ಕಲ್ಮರುಡಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್‌ ಶೆಟ್ಟಿ ಉಪಸ್ಥಿತರಿದ್ದರು.ಶ್ರೀ ರಕ್ಷೆ:ಸಭೆಗಳ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ, ಕೇಂದ್ರದ ಸರ್ಕಾರದ ಸಾಧನೆಯನ್ನು ಮುಂದಿಟ್ಟು ಈ ಬಾರಿ ಲೋಕಸಭಾ ಚುನಾವಣೆ ಎದುರಿಸಲಾಗುವುದು. ತಮ್ಮ ಗೆಲುವಿಗೆ ಇದೇ ಶ್ರೀರಕ್ಷೆ ಎಂದು ಹೇಳಿದರು.ದೇಶದ ಐಕ್ಯತೆ ಹಾಗೂ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿದ್ದಾರೆ. ಬಡವರ ಮನೆಗಳಿಗೆ ವಿದ್ಯುತ್‌ ಸಂಪರ್ಕಕ್ಕಾಗಿ ದೀನ ದಯಾಳ್‌ ಯೋಜನೆ, ಸ್ವಚ್ಛ ಭಾರತ್‌ ಅಭಿಯಾನ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸೇರಿದಂತೆ ಹಲವು ಕೆಲಸ ಆಗಿವೆ. ಹೀಗಾಗಿ ಈ ಬಾರಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.ಸುದ್ದಿಗೋಷ್ಠಿ ಬಳಿಕ ಕೋಟಾ ಶ್ರೀನಿವಾಸ್ ಪೂಜಾರಿ ತರೀಕೆರೆಗೆ ತೆರಳಿದರು.------ ಬಾಕ್ಸ್‌ -----ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತೆ: ಪೂಜಾರಿಚಿಕ್ಕಮಗಳೂರು: ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದು, ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತದೆ ಎಂದು ಹೇಳಿದ್ದಾರೆ.ದತ್ತಪೀಠಕ್ಕೆಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕರು ಈಶ್ವರಪ್ಪ ಜೊತೆ ಮಾತುಕತೆ ನಡೆಸುತ್ತಾರೆ. ಗೊಂದಲಗಳು ಬಗೆಹರಿಯುತ್ತೆ ಎಂಬ ವಿಶ್ವಾಸ ಇದೆ. ಚರ್ಚೆಗೆ ಅವಕಾಶವಾಗಿರುವುದು ಸತ್ಯ ಎಂದರು. ಹಾವೇರಿ ಟಿಕೆಟ್ ಕಾಂತೇಶ್ ಗೆ ನೀಡಬೇಕೆಂಬುವುದು ಈಶ್ವರಪ್ಪನವರ ಬಯಕೆಯಾಗಿತ್ತು, ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ. ಎಲ್ಲವನ್ನು ಸಮನ್ವಯವಾಗಿಸಿಕೊಂಡು ಹೋಗುವುದು ಪಕ್ಷದ ಜವಾಬ್ದಾರಿ, ಪಾರ್ಟಿ ತೀರ್ಮಾನ ತೆಗೆದುಕೊಳ್ಳುವಾಗ ವ್ಯತ್ಯಾಸವಾಗಿರಬಹುದು ಎಂದ ಅವರು, ಈ ಸಮಸ್ಯೆಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತೆ ಎಂದು ಹೇಳಿದರು. 16 ಕೆಸಿಕೆಎಂ 3ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರು ಶನಿವಾರ ದತ್ತಪೀಠಕ್ಕೆ ಭೇಟಿ ನೀಡಿದ್ದರು.