ಸಾರಾಂಶ
ತಾಲೂಕಿನ ತೆರಕಣಾಂಬಿ ಜೆಎಸ್ಎಸ್ ಪ್ರೌಢ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು. 1999-2000 ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸೇರಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಅಂದು ಶಿಕ್ಷಕರಾಗಿದ್ದ ಗುರುಗಳಿಗೆ 25ನೇ ವರ್ಷ ತುಂಬಿದ್ದಕ್ಕೆ ಗೌರವಿಸಿದರು.
ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಜೆಎಸ್ಎಸ್ ಪ್ರೌಢ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು. 1999-2000 ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸೇರಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಅಂದು ಶಿಕ್ಷಕರಾಗಿದ್ದ ಗುರುಗಳಿಗೆ 25ನೇ ವರ್ಷ ತುಂಬಿದ್ದಕ್ಕೆ ಗೌರವಿಸಿದರು.
ಜೆಎಸ್‌ಎಸ್ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ಶಿಕ್ಷಕರಾದ ಪುಟ್ಟಲಿಂಗಪ್ಪ, ನಾಗರಾಜು, ಸುರೇಶ್, ಸಿದ್ದಪ್ಪ, ಪುಟ್ಟಸ್ವಾಮಿ, ಶಿವಶಂಕರ್ ಮತ್ತು ಸುಧಾರನ್ನು ಹಿರಿಯ ವಿದ್ಯಾರ್ಥಿಗಳು ನೆನಪಿನ ಕಾಣಿಕೆ ನೀಡುವುದರೊಂದಿಗೆ ಸನ್ಮಾನಿಸಿದರು. ಜೆಎಸ್ಎಸ್ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಕಮಲಮ್ಮ ಮಾತನಾಡಿ, ಈ ಶಾಲೆ ಪ್ರಾರಂಭಗೊಂಡು ಆರು ದಶಕಗಳಾಗಿವೆ, ಗ್ರಾಮಾಂತರ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರತು ಹಲವಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದೆ ಎಂದರು. ಸುತ್ತೂರು ಮಠಾಧೀಶರಾದ ಶ್ರೀ ರಾಜೇಂದ್ರ ಮಹಾ ಸ್ವಾಮೀಜಿ ಅವರ ಆಶಯದಂತೆ ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಮಾರ್ಗದರ್ಶನದಲ್ಲಿ ಉತ್ತಮ ಶಿಕ್ಷಣ ನೀಡುತ್ತಿದೆ. ಹಿರಿಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಗುರುಗಳನ್ನು ನೆನಪಿಸಿಕೊಂಡು 25 ವರ್ಷಗಳ ಬಳಿಕ ಗುರುವಂದನೆ ಮೂಲಕ ಕೃತಜ್ಞತೆಗಳನ್ನು ಅರ್ಪಿಸುತ್ತಿರುವುದು ಅವರ ಉತ್ತಮ ಸಂಸ್ಕಾರ ಬಿಂಬಿಸುತ್ತದೆ ಎಂದರು.ಹಿರಿಯ ವಿದ್ಯಾರ್ಥಿಗಳು ಶಾಲೆಗೆ ಮೈಕ್ ಮತ್ತು ಧ್ವನಿವರ್ಧಕ ಮತ್ತಿತರೆ ಉಪಕರಣಗಳನ್ನು ಕೊಡುಗೆಯಾಗಿ ನೀಡಿದರು.