ಸಾರಾಂಶ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸುವ ಹಕ್ಕಿದೆ. ಆದರೆ, ಕಾನೂನು ಬಾಹಿರವಾಗಿ ಈ ರೀತಿಯ ಭಯೋತ್ಪಾದಕ ಕೃತ್ಯ ಖಂಡನೀಯ. ಸಂಸತ್ ಭವನದಲ್ಲಿನ ಗಲಾಟೆಯ ವಿಷಯವನ್ನು ಯಾರೂ ಒಪ್ಪುವುದಿಲ್ಲ, ಇದರ ಹಿಂದೆ ಕಾಂಗ್ರೆಸ್ ಕುತಂತ್ರ ಇರಬಹುದು.
ಕನ್ನಡಪ್ರಭ ವಾರ್ತೆ ಧಾರವಾಡ
ಸಂಸತ್ ಭವನದಲ್ಲಿ ನಡೆದ ಗಲಾಟೆ ಹಾಗೂ ಭಯೋತ್ಪಾದಕ ರೀತಿಯ ಕೃತ್ಯ ಆಘಾತಕಾರಿ. ಆರೋಪಿಗಳನ್ನು ಎನ್‌ಕೌಂಟರ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸುವ ಹಕ್ಕಿದೆ. ಆದರೆ, ಕಾನೂನು ಬಾಹಿರವಾಗಿ ಈ ರೀತಿಯ ಭಯೋತ್ಪಾದಕ ಕೃತ್ಯ ಖಂಡನೀಯ. ಸಂಸತ್ ಭವನದಲ್ಲಿನ ಗಲಾಟೆಯ ವಿಷಯವನ್ನು ಯಾರೂ ಒಪ್ಪುವುದಿಲ್ಲ, ಇದರ ಹಿಂದೆ ಕಾಂಗ್ರೆಸ್ ಕುತಂತ್ರ ಇರಬಹುದು. ಬುದ್ಧಿಜೀವಿಗಳ ಮೂಲಕ ಕಾಂಗ್ರೆಸ್ ಹೀಗೆ ಮಾಡಿಸಿರಬಹುದು. ಸಂಸದ ಪ್ರತಾಪ್ ಸಿಂಹ ಅವರನ್ನು ಇಲ್ಲಿ ಗುರಿಯಾಗಿಸಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದರು.
ಲೋಕಸಭೆ ಚುನಾವಣೆ ಹಿನ್ನೆಲೆ ಇಂಥ ಕೃತ್ಯ ಬಿಜೆಪಿ ಮಾಡುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಹಸಿಸುಳ್ಳು. ಇಂತಹ ಕೃತ್ಯ ಮಾಡಿದರೇ ಜನರು ಏಕೆ ಮತ ಹಾಕುತ್ತಾರೆ ಎಂದು ಪ್ರಶ್ನಿಸಿದರು. ಆರು ಜನ ಆರೋಪಿಗಳು ಬೇರೆ ಬೇರೆ ರಾಜ್ಯದವರು. ಇವರೆಲ್ಲ ಹೇಗೆ ಒಂದೆಡೆ ಸೇರಿದರು ಎಂಬುದು ಆಘಾತಕಾರಿ ವಿಷಯ. ಜೆಎನ್‌ಯುದಲ್ಲಿ ದೇಶದ್ರೋಹಿ ಘೋಷಣೆ ಕೂಗಿದರು. ಅದೇ ಮಾದರಿಯಲ್ಲಿ ಈ ಘಟನೆ ನಡೆದಿದೆ. ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುವ ಉದ್ದೇಶದಿಂದ ಈ ಘಟನೆ ನಡೆದಿದ್ದು ಸ್ಪಷ್ಟ ಎಂದು ತಿಳಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))