ಹೊಸಕೋಟೆ: ಗ್ರಾಮೀಣ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಪ್ರತಿ ಗ್ರಾಪಂ ಮಟ್ಟದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುತ್ತಿದ್ದು ಮಹಿಳೆಯರು ಸ್ವಯಂ ಪ್ರೇರಿತವಾಗಿ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಪ್ರತಿಭಾ ಶರತ್ ತಿಳಿಸಿದರು.

ತಾಲೂಕಿನ ದೊಡ್ಡಹುಲ್ಲೂರು ಗ್ರಾಪಂ ಆಯೋಜಿಸಿದ್ದ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳೆಯರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳನ್ನು ಗ್ರಾಮೀಣ ಭಾಗದಲ್ಲಿ ಆಯೋಜಿಸುವ ಮೂಲಕ ಮಹಿಳೆಯರು ಸ್ವಯಂ ಪ್ರೇರಣೆಯಿಂದ ಮುನ್ನೆಲೆಗೆ ಬರುವ ಮೂಲಕ ಆರ್ಥಿಕವಾಗಿ, ಔದ್ಯೋಗಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಸಮಾಜದ ಮುನ್ನೆಲೆಗೆ ಬರುವ ಪ್ರಯತ್ನ ಮಾಡಬೇಕು ಎಂಬ ಶಾಸಕ ಶರತ್ ಬಚ್ಚೇಗೌಡರ ಆಶಯದಂತೆ ಗ್ರಾಪಂ ಮಟ್ಟದಲ್ಲಿ ಮಹಿಳೆಯರ ಕ್ರೀಡಾಕೂಟ ಆಯೋಜಿಸಿ ಒಂದೇ ವೇದಿಕೆಯಲ್ಲಿ ಎಲ್ಲಾ ಮಹಿಳೆಯರನ್ನು ಒಗ್ಗೂಡಿಸಲಾಗುತ್ತಿದೆ ಎಂದರು.

ಕಸಬಾ ಹೋಬಳಿಯ 4 ಗ್ರಾಮ ಪಂಚಾಯ್ತಿಗಳಲ್ಲಿ ಆಯ್ಕೆಯಾದ ಎಲ್ಲಾ ಮಹಿಳೆಯರಿಗೆ ಹೊಸಕೋಟೆಯಲ್ಲಿ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲಾ ಮಹಿಳೆಯರಿಗೂ ಬಹುಮಾನ ವಿತರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಇಒ ಪಿ.ಮುನಿಯಪ್ಪ, ಪ್ರಭಾರ ಪಿಡಿಒ ರವಿಕುಮಾರ್, ಎಸ್‌ಎಫ್‌ಸಿಎಸ್ ನಿರ್ದೆಶಕ ರಾಜಗೋಪಾಲ್, ಟಿಎಪಿಎಂಎಸ್ ನಿರ್ದೇಶಕಿ ಪಾರ್ವತಮ್ಮ, ಸಿ.ನಾರಾಯಣಸ್ವಾಮಿ, ಕಾರ್ಯದರ್ಶಿ ರಮೇಶ್, ನಾರಾಯಣಸ್ವಾಮಿ, ಪಿಳ್ಳೇಗೌಡ ಹಾಜರಿದ್ದರು.

ಫೋಟೋ: 23 ಹೆಚ್ ಎಸ್‌ಕೆ 1


ಹೊಸಕೋಟೆ ತಾಲೂಕಿನ ದೊಡ್ಡಹುಲ್ಲೂರು ಗ್ರಾಪಂ ಆವರಣದಲ್ಲಿ ಮಹಿಳಾ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಪ್ರತಿಭಾ ಶರತ್ ಭಾಗವಹಿಸಿ ಮಹಿಳೆಯರಿಗೆ ಬಹುಮಾನ ವಿತರಿಸಿದರು.