ಮಕ್ಕಳ ವಿದ್ಯಾಭ್ಯಾಸ ಮತ್ತು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಮೇಲಿನ ದಿನಮಘಟ್ಟನ ಹಳ್ಳಿ ಗ್ರಾಮಸ್ಥರು ಹಳೆ ಶಾಲಾ-ಕೊಠಡಿ ಸಂಪೂರ್ಣ ಶಿಥಿಲವಾಗಿದೆ ಅದನ್ನು ಸರಿಪಡಿಸಲು ಸಾಧ್ಯವಿಲ್ಲ ಆದ ಕಾರಣ ನೂತನ ಕೊಠಡಿ ನಿರ್ಮಾಣ ಮಾಡಿಕೊಡಬೇಕೆಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸುಮಾರು 14.50 ಲಕ್ಷ ವೆಚ್ಚದ ಯೋಜನೆಗೆ ಭೂಮಿ ಪೂಜೆ ನೆರವೇರಿಸಲಾಗಿದೆ.
ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಇಂದಿನ ಮಕ್ಕಳೇ ನಾಳಿನ ನಾಗರಿಕರು ಮಾತ್ರವಲ್ಲ ಮಕ್ಕಳೇ ದೇಶದ ಸಂಪತ್ತು. ಮಕ್ಕಳ ಸರ್ವಾಗೀಣ ವಿಕಾಸ ಪ್ರತಿಯೊಬ್ಬರ ಹೊಣೆಯಾಗಬೇಕು ಎಂದು ಶಾಸಕ ಕೆಎಚ್ ಪುಟ್ಟಸ್ವಾಮಿಗೌಡ ತಿಳಿಸಿದರು ಗೌರಿಬಿದನೂರು ತಾಲೂಕಿನ ಮೇಲಿನ ದಿನಮಘಟ್ಟನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದುದರಿಂದ ಗ್ರಾಮದ ಅಂಗನವಾಡಿ ಕೇಂದ್ರದ ಪಕ್ಕದಲ್ಲಿ ಗ್ರಾಮ ಪಂಚಾಯಿತಿ ನಿವೇಶನದಲ್ಲಿ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಶಾಸಕರು ಮಾತನಾಡಿದರು. ಗ್ರಾಮಸ್ಥರ ಬೇಡಿಕೆಗೆ ಸ್ಪಂದನೆಬಹಳ ದಿನಗಳ ಬೇಡಿಕೆ ಮಕ್ಕಳ ವಿದ್ಯಾಭ್ಯಾಸ ಮತ್ತು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಮೇಲಿನ ದಿನಮಘಟ್ಟನ ಹಳ್ಳಿ ಗ್ರಾಮಸ್ಥರು ಹಳೆ ಶಾಲಾ-ಕೊಠಡಿ ಸಂಪೂರ್ಣ ಶಿಥಿಲವಾಗಿದೆ ಅದನ್ನು ಸರಿಪಡಿಸಲು ಸಾಧ್ಯವಿಲ್ಲ ಆದ ಕಾರಣ ನೂತನ ಕೊಠಡಿ ನಿರ್ಮಾಣ ಮಾಡಿಕೊಡಬೇಕೆಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸುಮಾರು 14.50 ಲಕ್ಷ ವೆಚ್ಚದ ಯೋಜನೆಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಿದರು.
ಅತಿ ಶೀಘ್ರದಲ್ಲಿ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಉತ್ತಮ ಆಟದ ಮೈದಾನ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಬಡವರ ಮಕ್ಕಳು ಹೆಚ್ಚಾಗಿ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ. ಅವರಿಗೆ ಉತ್ತಮ ಮತ್ತು ಗುಣಮಟ್ಟದ ಶಿಕ್ಷಣ ನೀಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಶಾಸಕರು ಹೇಳಿದರು.ಗುಣಮಟ್ಟದ ಶಿಕ್ಷಣ ನೀಡಬೇಕು
ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಮತ್ತು ಕಲಿಕಾ ಗುಣಮಟ್ಟ ಜಾಸ್ತಿ ಆಗಬೇಕು ಎಂಬುದು ನನ್ನ ಆಶಯವಾಗಿದೆ. ಹಾಗಾಗಿ ಶಿಕ್ಷಕರು ಈ ಬಗ್ಗೆ ಹೆಚ್ಚಿನ ಗಮನವಿಟ್ಟು ಉತ್ತಮ ಶಿಕ್ಷಣ ನೀಡುವ ಮೂಲಕ ಜವಾಬ್ದಾರಿ ವಹಿಸಬೇಕು ಸರ್ಕಾರಿ ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಹಾಜರಾಗಬೇಕು ಮಕ್ಕಳ ಕಲಿಕೆಯ ಬಗ್ಗೆ ಶಿಕ್ಷಕರು ಅತಿ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದು ತಿಳಿಸಿದರು ಬಳಿಕ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರೆಡ್ಡಿ ರವರನ್ನು ಕರೆಸಿ, ಶಾಲೆಯ ಕೊಠಡಿ ಕಾಮಗಾರಿಯು ಪೂರ್ಣಗೊಂಡ ನಂತರ ನರೇಗಾ ಅಡಿಯಲ್ಲಿ ಅಡುಗೆ ಕೋಣೆ, ಶೌಚಾಲಯ ಮತ್ತು ಸುತ್ತಲೂ ಕಾಂಪೌಂಡ್ ನಿರ್ಮಿಸುವಂತೆ ಪುಟ್ಟಸ್ವಾಮಿಗೌಡ ಸೂಚಿಸಿದರುಈ ಸಂದರ್ಭದಲ್ಲಿ ಕೆ.ಹೆಚ್.ಪಿ. ಆಪ್ತ ಸಹಾಯಕ ಶ್ರೀನಿವಾಸಗೌಡ, ಶಾಲೆ ಮುಖ್ಯೋಪಾಧ್ಯಾಯನಿ ಪದ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಗ್ರಾಮಸ್ಥರು ಭಾಗವಹಿಸಿದ್ದರು.