ಸಿದ್ದು ಪ್ರಶ್ನೆಗೆ ಜನರೇ ಉತ್ತರ: ಬಿವೈವಿ

| Published : Mar 18 2024, 01:47 AM IST

ಸಾರಾಂಶ

ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಜನ ಗೆಲ್ಲಿಸಲಿದ್ದು, ತನ್ಮೂಲಕ ‘ರಾಜ್ಯಕ್ಕೆ ಮೋದಿಯವರ ಕೊಡುಗೆ ಏನು’ ಎಂಬ ಸಿದ್ದರಾಮಯ್ಯನವರ ಪ್ರಶ್ನೆಗೆ ಉತ್ತರ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರುರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಜನ ಗೆಲ್ಲಿಸಲಿದ್ದು, ತನ್ಮೂಲಕ ‘ರಾಜ್ಯಕ್ಕೆ ಮೋದಿಯವರ ಕೊಡುಗೆ ಏನು’ ಎಂಬ ಸಿದ್ದರಾಮಯ್ಯನವರ ಪ್ರಶ್ನೆಗೆ ಉತ್ತರ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಭಾನುವಾರ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಚುನಾವಣಾ ಕಾರ್ಯಾಲಯಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಗಳಿಸಲಿದ್ದು, ಮತ್ತು ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಬಿಜೆಪಿ ಮತ್ತೆ ಗೆಲ್ಲುವುದು ಖಚಿತ. ಮೋದಿಯವರು ಮೂರನೇ ಬಾರಿ ಪ್ರಧಾನಿ ಆಗುವುದನ್ನು ಯಾವ ದುಷ್ಟ ಶಕ್ತಿಗಳೂ ತಡೆಯಲು ಸಾಧ್ಯವಿಲ್ಲ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮತ್ತು ಸಬ್ ಕಾ ಪ್ರಯಾಸ್ ಕೇ ಸಾಥ್ ಎಂಬ ಮಂತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.