ಕುಂಬಾರಿಕೆ ಕಲೆ ಉಳಿಸಿ, ಬೆಳೆಸಬೇಕು

| Published : Jul 30 2024, 12:31 AM IST

ಸಾರಾಂಶ

ಪ್ರತಿಭಾ ಪುರಸ್ಕಾರ ಕೇವಲ ಪ್ರತಿಭಾವಂತರಿಗೆ ಮಾತ್ರವಲ್ಲ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಮೂಲಕ ಶೈಕ್ಷಣಿಕವಾಗಿ ಪ್ರೋತ್ಸಾಹಿಸುವುದರ ಜೊತೆಗೆ ಇತರ ವಿದ್ಯಾರ್ಥಿಗಳಿಗೆ ಉತ್ತೇಜಿಸಿದಂತಾಗುತ್ತದೆ. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಆದಾಗ ಮಾತ್ರ ಅವರ ಭವಿಷ್ಯಉಜ್ವಲ.

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ಗೌರವಯುತವಾಗಿ ಜೀವನ ನಡೆಸಲು ಶಿಕ್ಷಣ ಅಗತ್ಯ. ಹಣದಿಂದಲೇ ಬದುಕಲು ಸಾಧ್ಯವಿಲ್ಲ, ಶಿಕ್ಷಣದಿಂದ ಹಣ ಗಳಿಸಬಹುದಾಗಿದೆ. ಯಾವುದೇ ಕ್ಷೇತ್ರವಿದ್ದರೂ ಜ್ಞಾನ ಮುಖ್ಯ. ಶಿಕ್ಷಣ ಕೇವಲ ಉದ್ಯೋಗಕ್ಕಾಗಿ ಮಾತ್ರವಲ್ಲ ಜೀವನ ರೂಪಿಸಿಕೊಳ್ಳಲು ಇದೊಂದು ಅದ್ಭುತ ಅಸ್ತ್ರ ಎಂದು ಮಾಜಿ ಸಚಿವ ಎನ್.ಹೆಚ್. ಶಿವಶಂಕರರೆಡ್ಡಿ ಹೇಳಿದರು.

ನಗರ ಹೊರವಲಯದಲ್ಲಿರುವ ಶ್ರೀ ಸಾಯಿಕೃಷ್ಣ ಕನ್ವೆನ್ಷನ್ ಹಾಲ್ ನಲ್ಲಿ ತಾಲೂಕು ಕುಂಬಾರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮದಲ್ಲಿ ಅ‍ರು ಮಾತನಾಡಿದರು.

ಕುಂಬಾರಿಕೆ ಕಲೆ ಉಳಿಸಬೇಕು

ಮಡಿಕೆ ಮಾಡುವುದು ಒಂದು ಕಲೆ ಕುಂಬಾರರು ಈ ಕಲೆಯನ್ನು ಕರಗತ ಮಾಡಿಕೊಂಡು ಸುಂದರವಾದ ಮಡಿಕೆಗಳನ್ನು ತಯಾರು ಮಾಡಿ ಜನರಿಗೆ ನೀಡುವಂತಹ ಕೆಲಸ ಮಾಡುತ್ತಿದ್ದಾರೆ. ಆದರೆ ಆಧುನಿಕತೆಯಲ್ಲಿ ಇಂತಹ ಕಲೆ ನಶಿಸುವ ಅಂತ ತಲುಪಿದ್ದು, ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳಾಗಬೇಕು. ನಮ್ಮ ಸಂಸ್ಕೃತಿ ಕುಲಕಸುಬನ್ನ ಮುಂದಿನ ಪೀಳಿಗೆಗೂ ತಿಳಿಸುವ ಹಾಗೂ ಉಳಿಸುವ ಕಾರ್ಯವಾಗಬೇಕು. ಸರ್ಕಾರ ಕುಂಬಾರ ಸೇರಿದಂತೆ ಇತರೆ ಕೌಶಲ ಕಸುಬುಗಳಿಗೆ ನಾನಾ ಯೋಜನೆಗಳನ್ನು ರೂಪಿಸಿದ್ದು, ಅದನ್ನು ಬಳಸಿಕೊಳ್ಳಬೇಕು ಎಂದರು. ಜನಾಂಗ ಶಿಕ್ಷಣಕ್ಕೆ ಒತ್ತು ನೀಡಲಿ

ಕುಂಬಾರ ಸಮುದಾಯವು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದು ಪೋಷಕರು ನಿಮ್ಮ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಕ್ಕೆ ಮೊದಲ ಆದ್ಯತೆ ನೀಡಬೇಕು. ಈ ಪುರಸ್ಕಾರ ಕೇವಲ ಪ್ರತಿಭಾವಂತರಿಗೆ ಮಾತ್ರವಲ್ಲ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಮೂಲಕ ಶೈಕ್ಷಣಿಕವಾಗಿ ಪ್ರೋತ್ಸಾಹಿಸುವುದರ ಜೊತೆಗೆ ಇತರ ವಿದ್ಯಾರ್ಥಿಗಳಿಗೆ ಉತ್ತೇಜಿಸಿದಂತಾಗುತ್ತದೆ. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಆದಾಗ ಮಾತ್ರ ನಿಮ್ಮ ಮುಂದಿನ ಉಜ್ವಲ ಭವಿಷ್ಯ ವೃದ್ಧಿಸಿಕೊಳ್ಳಲು ಸಾಧ್ಯ ಎಂದರು ಈ ಕಾರ್ಯಕ್ರಮದಲ್ಲಿ ಕುಂಬಾರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ ಎನ್ ನಾಗರಾಜಪ್ಪ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್ ಮಹಿಳಾ ಸರ್ವಾಧ್ಯಕ್ಷೆ ಪ್ರೇಮ ಲೀಲಾ ವೆಂಕಟೇಶ್ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.