ಕನ್ನಡಪ್ರಭ ವಾರ್ತೆ ಹುಕ್ಕೇರಿ ರಾಜ್ಯ ಸರ್ಕಾರಿ ನೌಕರರ ಹಿತಾಸಕ್ತಿ ಕಾಪಾಡಲು ರಾಜ್ಯ ಸರಕಾರಿ ನೌಕರರ ಸಂಘ ಸದಾ ಬದ್ಧವಾಗಿದ್ದು, ನೌಕರರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಂಘದ ರಾಜ್ಯ ಘಟಕವು ಅನೇಕ ಸರ್ಕಾರಿ ಆದೇಶಗಳನ್ನು ಜಾರಿಗೊಳಿಸುವಲ್ಲಿ ಸಫಲವಾಗಿ ನೌಕರರಿಗೆ ಸಾಕಷ್ಟು ಅನುಕೂಲಗಳನ್ನು ಕಲ್ಪಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅವಿನಾಶ ಹೊಳೆಪ್ಪಗೋಳ ಹೇಳಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ರಾಜ್ಯ ಸರ್ಕಾರಿ ನೌಕರರ ಹಿತಾಸಕ್ತಿ ಕಾಪಾಡಲು ರಾಜ್ಯ ಸರಕಾರಿ ನೌಕರರ ಸಂಘ ಸದಾ ಬದ್ಧವಾಗಿದ್ದು, ನೌಕರರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಂಘದ ರಾಜ್ಯ ಘಟಕವು ಅನೇಕ ಸರ್ಕಾರಿ ಆದೇಶಗಳನ್ನು ಜಾರಿಗೊಳಿಸುವಲ್ಲಿ ಸಫಲವಾಗಿ ನೌಕರರಿಗೆ ಸಾಕಷ್ಟು ಅನುಕೂಲಗಳನ್ನು ಕಲ್ಪಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅವಿನಾಶ ಹೊಳೆಪ್ಪಗೋಳ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ತಾಲೂಕು ಶಾಖೆಯ 2025-26ನೇ ಸಾಲಿನ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹುಕ್ಕೇರಿ ನೌಕರರ ಸಂಘಕ್ಕೆ ನಿವೇಶನದ ಅವಶ್ಯಕತೆಯಿದ್ದು, ಮುಂಬರುವ ದಿನಗಳಲ್ಲಿ ಈ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ರಾಜ್ಯಾಧ್ಯಕ್ಷರ ನೆರವಿನಿಂದ ಅಗತ್ಯ ನಿವೇಶನ ಮಂಜೂರಾತಿ ಪಡೆಯಲಾಗುವುದು. ಇದರೊಂದಿಗೆ ತಾಲೂಕಿನ ನೌಕರರ ಸಂಘಕ್ಕೆ ಸುಸಜ್ಜಿತ ಕಟ್ಟಡ ನಿರ್ಮಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ಈ ಸಂಘದ ನೌಕರರ ಪಾತ್ರ ಪ್ರಮುಖವಾಗಿದೆ. ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ಮಾರ್ಗದರ್ಶನದಲ್ಲಿ ನೌಕರರ ಪರವಾಗಿ ಅತೀ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘದ ಸದಸ್ಯರು ಮತ್ತು ನಿರ್ದೇಶಕರು ಈ ಸಂಘಟನೆಯಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಂಘಟನೆಯನ್ನು ಬಲಪಡಿಸಬೇಕು. ಈ ಮೂಲಕ ಮುಂಬರುವ ದಿನಗಳಲ್ಲಿ ಸಂಘದಿಂದ ನೌಕರ ಸ್ನೇಹಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ಹೊಳೆಪ್ಪಗೋಳ ವಿಶ್ವಾಸ ವ್ಯಕ್ತಪಡಿಸಿದರು.ತಾಲೂಕು ಪಂಚಾಯತಿ ಇಒ ಟಿ.ಆರ್.ಮಲ್ಲಾಡದ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಧ್ಯಕ್ಷ ಬಿ.ಎ.ಕುಂಬಾರ, ಜಿಲ್ಲಾ ಕಾರ್ಯದರ್ಶಿ ನಾಗರಾಜ ಕರನಿಂಗ, ಜಿಲ್ಲಾ ಖಜಾಂಚಿ ಶಿವಾಜಿ ಬೆಳಗಾವಿ, ತಾಲೂಕು ಕಾರ್ಯದರ್ಶಿ ರವೀಂದ್ರ ಕಂಕಣವಾಡಿ, ಖಜಾಂಚಿ ಸಿ.ಎ.ಪಾಟೀಲ, ರಾಜ್ಯ ಪರಿಷತ್ ಸದಸ್ಯ ಸುಭಾಷ ಝಂಡೆನ್ನವರ, ತಾಲೂಕು ಶಾಖೆಯ ಪದಾಧಿಕಾರಿಗಳು ಹಾಗೂ ಎಲ್ಲಾ ಇಲಾಖೆಯ ನಿರ್ದೇಶಕರು, ತಾಲೂಕಿನ ವಿವಿಧ ಇಲಾಖೆಗಳ ನೌಕರರು ಸಭೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಸ್ಕೃತಿಕ ವಿಭಾಗದಲ್ಲಿ ವಿಜೇತರಾದ ತಮ್ಮಣ್ಣ ಹಡಪದ, ಅಶ್ವಿನಿ.ಡಿ ಮತ್ತು ಭಾರತಿ ಹಿರೇಮಠ ಅವರನ್ನು ಸಭೆಯಲ್ಲಿ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.

ಸಂಘದ ವಾರ್ಷಿಕ ವರದಿ, ಲೆಕ್ಕಪತ್ರ, ಮುಂದಿನ ವರ್ಷದ ಆಯವ್ಯಯ ಮತ್ತು ಕ್ರಿಯಾ ಯೋಜನೆಯನ್ನು ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಯಿತು. ಎಚ್‌ಆರ್‌ಎಂಎಸ್ ತಂತ್ರಾಂಶದ ತಾಂತ್ರಿಕ ದೋಷ, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ, ಸರಕಾರಿ ನೌಕರರು ಮತ್ತು ಅವಲಂಬಿತರ ಸಮಸ್ಯೆಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆಯನ್ನು ನಡೆಸಲಾಯಿತು.