ಸಾರಾಂಶ
ಮನಸ್ಸಿನ ಆಕರ್ಷಣೆಗಳು ತಾತ್ಕಾಲಿಕವಾಗಿವೆ. ಅವುಗಳ ಹಿಂದೆ ಹೋದವರು ಜೀವನದಲ್ಲಿ ನೊಂದಿರುವ ನಿದರ್ಶನಗಳು ಹೆಚ್ಚಾಗಿವೆ. ಕಾಲೇಜು ಶಿಕ್ಷಣದ ಸಂದರ್ಭದಲ್ಲಿ ಉತ್ತಮ ಸ್ನೇಹ ಗಳಿಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ವೆಂಕಟೇಶ ಬಾಬು ದಾವಣಗೆರೆಯಲ್ಲಿ ಹೇಳಿದ್ದಾರೆ.
- ಮಾಸಬ ಕಲಾ-ವಾಣಿಜ್ಯ ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ - - - ದಾವಣಗೆರೆ: ಮನಸ್ಸಿನ ಆಕರ್ಷಣೆಗಳು ತಾತ್ಕಾಲಿಕವಾಗಿವೆ. ಅವುಗಳ ಹಿಂದೆ ಹೋದವರು ಜೀವನದಲ್ಲಿ ನೊಂದಿರುವ ನಿದರ್ಶನಗಳು ಹೆಚ್ಚಾಗಿವೆ. ಕಾಲೇಜು ಶಿಕ್ಷಣದ ಸಂದರ್ಭದಲ್ಲಿ ಉತ್ತಮ ಸ್ನೇಹ ಗಳಿಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ವೆಂಕಟೇಶ ಬಾಬು ಹೇಳಿದರು.
ನಗರದ ಮಾಸಬ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ. ವಿದ್ಯಾರ್ಥಿಗಳಿಗೆ ನಡೆದ ಪುನಶ್ಚೇತನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಶಸ್ವಿ ವ್ಯಕ್ತಿಯು ಮುಖ್ಯ ಕೆಲಸಗಳನ್ನು ಆದ್ಯತೆ ಅನುಸಾರ ಸಮರ್ಪಕವಾಗಿ ಮಾಡಿ ಮುಗಿಸುತ್ತಾನೆ. ದಿನದ ಪ್ರತಿ ನಿಮಿಷಗಳ ಮಹತ್ವ ಅರಿತು ಸಮಯವನ್ನು ವಿಭಿನ್ನವಾಗಿ ಬಳಸಿಕೊಳ್ಳುತ್ತಾರೆ. ಅಂತಹ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.ಕಾಲೇಜಿನ ಪ್ರಾಚಾರ್ಯೆ ಪ್ರೊ. ಜಿ.ಸಿ. ನೀಲಾಂಬಿಕಾ ಅಧ್ಯಕ್ಷತೆ ವಹಿಸಿ ಮಾತನಾಡಿ, ವಾಣಿಜ್ಯ ಪದವೀಧರರಿಗೆ ಉದ್ಯೋಗ ಅವಕಾಶಗಳು ಹೇರಳವಾಗಿವೆ. ಅವರಿಗೆ ವಿವಿಧ ವೃತ್ತಿ ಮಾರ್ಗಗಳು ಲಭ್ಯವಿವೆ. ಹಣಕಾಸು ಮತ್ತು ಲೆಕ್ಕಪತ್ರ ನಿರ್ವಹಣೆ ಪ್ರತಿದಿನ ಪ್ರತಿಯೊಬ್ಬರ ಜೀವನದ ಭಾಗವಾಗಿದೆ ಎಂದರು.
ಈ ಸಂದರ್ಭ ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಎ.ಬಿ. ವಿಜಯಕುಮಾರ್, ಬೋಧಕ- ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಪ್ರೀತಿ, ರಾಧಾ ಪ್ರಾರ್ಥಿಸಿದರು. ಸೀಮಾ ಬಡಿಗೇರ್ ನಿರೂಪಿಸಿ, ಕೆ.ಸರಿತಾ ವಂದಿಸಿದರು.- - - -27ಕೆಡಿವಿಜಿ31ಃ:
ದಾವಣಗೆರೆಯ ಮಾಸಬ ಕಾಲೇಜಿನಲ್ಲಿ ನಡೆದ ಪುನಶ್ಚೇತನ ಕಾರ್ಯಕ್ರಮವನ್ನು ಡಾ.ವೆಂಕಟೇಶ ಬಾಬು ಉದ್ಘಾಟಿಸಿದರು.