ಸಾರಾಂಶ
ಕೊಲ್ಯ ಎಂಬಲ್ಲಿರುವ ವಿಗ್ರಹ ವಿಸರ್ಜನೆ ಮಾಡುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಪುತ್ತೂರು: ನಗರದಲ್ಲಿ ಅಟೋ ಚಾಲಕರಾಗಿರುವ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಮದ್ಯಾಹ್ನ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯದಲ್ಲಿ ನಡೆದಿದೆ.
ಮೂಲತಃ ಪುತ್ತೂರು ತಾಲೂಕಿನ ನರಿಮೊಗ್ರು ಗ್ರಾಮದ ಪರುಷರಕಟ್ಟೆ ಪಾಪೆತ್ತಡ್ಕ ಎಂಬಲ್ಲಿನ ನಿವಾಸಿ ದಿ. ಅಬೂಬಕ್ಕರ್ ಎಂಬವರ ಪುತ್ರ ಮಹಮ್ಮದ್ (೪೮) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಮಹಮ್ಮದ್ ಅವರು ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಮಕ್ಕಳೊಂದಿಗೆ ವಾಸವಾಗಿದ್ದರು. ಮಂಗಳವಾರ ಮದ್ಯಾಹ್ನ ಸುಮಾರು ೧ ಗಂಟೆಯ ವೇಳೆಗೆ ತನ್ನ ಬಾಡಿಗೆ ಮನೆಯಿಂದ ಸ್ಪಲ್ಪ ದೂರದಲ್ಲಿನ ಕೊಲ್ಯ ಎಂಬಲ್ಲಿರುವ ವಿಗ್ರಹ ವಿಸರ್ಜನೆ ಮಾಡುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸಂಪ್ಯ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.