ಕನ್ನಡಪ್ರಭ ವಾರ್ತೆ ಪಾವಗಡ
ಶ್ರೀ ಶಾಲಾ ಇಂಟರ್ ರ್ನ್ಯಾಷನಲ್ ಸ್ಕೂಲ್‌ನಲ್ಲಿ ಭಾನುವಾರ ಯೋಗ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಉತ್ಸಾಹದಿಂದ ಆಚರಿಸಲಾಯಿತು.ಇದೇ ವೇಳೆ ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಮುಖ್ಯಸ್ಥ ಡಾ. ಜಿ. ವೆಂಕಟರಾಮಯ್ಯ ಮಾತನಾಡಿ, ಯೋಗದ ಮಹತ್ವ ಹಾಗೂ ಶಿಸ್ತು ಮತ್ತು ಭಕ್ತಿ ಬಗ್ಗೆ ವಿವರಿಸಿದರು. ಬಳಿಕ ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡುವ ಅತ್ಯುತ್ತಮ ಸಾಧನವಾಗಿದೆ. ವಿದ್ಯಾರ್ಥಿಗಳು ಯೋಗಭ್ಯಾಸ ರೊಡಿಸಿಕೊಳ್ಳುವಂತೆ ಕರೆ ನೀಡಿದರು. ಶ್ರೀ ಶಾಲಾ ಸ್ಕೂಲ್ ಸಮಿತಿಯ ನಿರ್ದೇಶಕರಾದ ಲಕ್ಷ್ಮಿ ವೆಂಕಟರಾಮಯ್ಯ ಅವರು ಮಾತನಾಡಿ, ವಿದ್ಯಾರ್ಥಿಗಳು ಪ್ರತಿದಿನ ಯೋಗಾಭ್ಯಾಸ ಮಾಡುವ ಮೂಲಕ ಉತ್ತಮ ಆರೋಗ್ಯ ಮತ್ತು ಏಕಾಗ್ರತೆಯನ್ನು ಬೆಳೆಸಿಕೊಳ್ಳಬೇಕು. ಆ ಮೂಲಕ ಸ್ವಾಸ್ಥ ಮತ್ತು ಪರಿಪೂರ್ಣವಾದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಸಲಹೆ ನೀಡಿದರು.ಶ್ರೀ ಶಾಲಾ ಇಂಟರ್ ನ್ಯಾಷನಲ್ ಸ್ಕೂಲ್‌ನ ಆಡಳಿತಾಧಿಕಾರಿಯಾದ ತಿರುಮಣಿ ನಾಗೇಂದ್ರಪ್ಪ ಮಾತನಾಡಿ, ಯೋಗವು ಉತ್ತಮ ಮಾನಸಿಕ ಹಾಗೂ ಆರೋಗ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದ್ದು ಯೋಗದ ಮಹತ್ವದ ಕುರಿತು ಅರಿವು ಮೂಡಿಸುವ ಸಂದೇಶ ನೀಡಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.
ಇದೇ ವೇಳೆ ವಿದ್ಯಾರ್ಥಿಗಳು ಆರೋಗ್ಯಕರ ಜೀವನಕ್ಕಾಗಿ ಪ್ರತಿದಿನ ಯೋಗಾಭ್ಯಾಸ ಮಾಡುವ ಸಂಕಲ್ಪ ಕೈಗೊಂಡಿದ್ದು ಯೋಗ ದಿನಾಚರಣೆ ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು. ನಂತರ ತರಬೇತುದಾರರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಧ್ಯಾನಾಭ್ಯಾಸಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಯೋಗ ಪ್ರದರ್ಶನವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.ಮುಖಂಡರಾದ ಬುಡ್ಡಾರೆಡ್ಡಿ ಹಳ್ಳಿ ಅಂಜಪ್ಪ ಸೇರಿದಂತೆ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರು,ಮುಖ್ಯೋಪಾದ್ಯಾಯರು ಹಾಗೂ ಶಿಕ್ಷಕರು ಮತ್ತು ಫೋಷಕರು ಇದ್ದರು.