ಕ್ರಿಸ್‌ಮಸ್ ವಿಶೇಷ ಬಲಿಪೂಜೆ ನೆರವೇರಿಸಿದ ಬಿಷಪ್

| Published : Dec 25 2024, 12:48 AM IST

ಕ್ರಿಸ್‌ಮಸ್ ವಿಶೇಷ ಬಲಿಪೂಜೆ ನೆರವೇರಿಸಿದ ಬಿಷಪ್
Share this Article
  • FB
  • TW
  • Linkdin
  • Email

ಸಾರಾಂಶ

ರೊಸಾರಿಯೋ ಕೆಥೆಡ್ರಲ್‍ನ ಪ್ರಧಾನ ಧರ್ಮಗುರು ಫಾ. ಆಲ್ಪ್ರೆಡ್ ಪಿಂಟೋ ಸೇರಿದಂತೆ ವಿವಿಧ ಚರ್ಚ್‌ಗಳ ಧರ್ಮಗುರುಗಳು ಭಾಗವಹಿಸಿದ್ದರು. ನಗರದ ವಿವಿಧ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ ನೆರವೇರಿತು.
ಕನ್ನಡಪ್ರಭ ವಾರ್ತೆ ಮಂಗಳೂರುಕ್ರಿಸ್‌ಮಸ್ ಅಂಗವಾಗಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ಅವರು ನಗರದ ರೊಸಾರಿಯೋ ಕೆಥೆಡ್ರಲ್‍ ಚರ್ಚ್‌ನಲ್ಲಿ ವಿಶೇಷ ಬಲಿಪೂಜೆ ನೆರವೇರಿಸಿದರು.

ಈ ವೇಳೆ ಆಶೀರ್ವಚನ ನೀಡಿದ ಅವರು, ಕ್ರೈಸ್ತ ಪವಿತ್ರ ಗ್ರಂಥಗಳಲ್ಲಿ ದೇವರು ದ್ವೇಷದ ಮಾತುಗಳನ್ನು ಆಡಿಲ್ಲ. ಪ್ರೀತಿಯ ಮಾತುಗಳನ್ನೇ ಹೇಳಿದ್ದಾರೆ. ಗೋದಲಿಯಲ್ಲಿ ಶ್ರೀಸಾಮಾನ್ಯರಂತೆ ಹುಟ್ಟಿದ ಯೇಸು ಜಗತ್ತಿನಲ್ಲಿ ತನ್ನ ಸರಳತೆಯ ಮೂಲಕ ಪ್ರೀತಿ, ಶಾಂತಿ, ನೆಮ್ಮದಿ ಜತೆಗೆ ಕ್ಷಮಿಸುವ ಗುಣವನ್ನು ಮೈಗೂಡಿಸಿಕೊಳ್ಳಲು ಸೂಚಿಸಿದರು. ಆ ಗುಣಗಳನ್ನು ಮೈಗೂಡಿಸಿಕೊಂಡು ಬಾಳೋಣ ಎಂದು ಕರೆ ನೀಡಿದರು.ದೇವರು ಪ್ರೀತಿಯ ಭಾಷೆಯಲ್ಲಿ ಮಾತನಾಡುತ್ತಾರೆ. ಪ್ರೀತಿಗೆ ಹೆಚ್ಚು ಮಹತ್ವ ಕೊಡುವ ಮೂಲಕ ನಾವು ಸಮಾಜದಲ್ಲಿರುವ ನೆರೆಹೊರೆಯವರ ಜತೆಗೆ ಪ್ರೀತಿಯನ್ನು ಹಂಚುವ ಕೆಲಸ ಮಾಡಬೇಕು ಎಂದು ಅವರು ಹೇಳಿದರು.

ರೊಸಾರಿಯೋ ಕೆಥೆಡ್ರಲ್‍ನ ಪ್ರಧಾನ ಧರ್ಮಗುರು ಫಾ. ಆಲ್ಪ್ರೆಡ್ ಪಿಂಟೋ ಸೇರಿದಂತೆ ವಿವಿಧ ಚರ್ಚ್‌ಗಳ ಧರ್ಮಗುರುಗಳು ಭಾಗವಹಿಸಿದ್ದರು. ನಗರದ ವಿವಿಧ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ ನೆರವೇರಿತು.