ಬಾವಿಗೆ ಬಿದ್ದ ಬಾಲಕ, ಬಾವಿಗಿಳಿದ ಯುವಕನ ರಕ್ಷಣೆ

| Published : May 03 2024, 01:01 AM IST

ಸಾರಾಂಶ

ಸಮೀಪದ ಅಜ್ಜರಕಾಡಿನಲ್ಲಿರುವ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾಲಕ ಮತ್ತು ಯುವಕನನ್ನು ಮೇಲೆತ್ತಿ ರಕ್ಷಣೆ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಮುಂಜಾನೆ ನಗರದ ಕಿನ್ನಿಮೂಲ್ಕಿ ಲೇಬರ್ ಕಾಲನಿಯಲ್ಲಿ ಬಾಲಕನೊಬ್ಬನನ್ನು ರಕ್ಷಿಸಲು ಹೋದ ಯುವಕ ಪ್ರಾಣಾಪಾಯಕ್ಕೆ ಸಿಲುಕಿದ ಘಟನೆ ಗುರುವಾರ ಮುಂಜಾನೆ ನಡೆದಿದೆ.

ಇಲ್ಲಿನ16 ವರ್ಷದ ಬಾಲಕ ಸಂಜಿತ್ ಮನೆ ಬಳಿಯ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದ. ತಕ್ಷಣ ಆತನ ರಕ್ಷಣೆಗಾಗಿ ಸತೀಶ್ (34) ಎಂಬ ಯುವಕ ಬಾವಿ ಇಳಿದರು. ಆಳವಿದ್ದರೂ ನೀರು ಕಡಿಮೆ ಇದ್ದ ಬಾವಿಯಲ್ಲಿ ಗಾಳಿಯ ಕೊರತೆಯಿಂದ ಉಸಿರಾಟಕ್ಕೆ ತೊಂದರೆಯಾಗಿ ಸತೀಶ್ ಬಾವಿಯಲ್ಲಿಯೇ ಅಸ್ವಸ್ಥರಾಗಿ ಮೇಲೆ ಬರಲು ಸಾಧ್ಯವಾಗಲಿಲ್ಲ.

ತಕ್ಷಣ ಇದನ್ನು ಗಮನಿಸಿದ ಸ್ಥಳೀಯರು ಉಡುಪಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಸಮೀಪದ ಅಜ್ಜರಕಾಡಿನಲ್ಲಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬಾಲಕ ಮತ್ತು ಯುವಕನನ್ನು ಮೇಲೆತ್ತಿ ರಕ್ಷಣೆ ಮಾಡಿದ್ದಾರೆ.------------------------------------------

ಸಿಎನ್ ಜಿ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ಯಶ್ಪಾಲ್ ಸುವರ್ಣ ಮನವಿಕನ್ನಡಪ್ರಭ ವಾರ್ತೆ ಉಡುಪಿಉಡುಪಿ ಜಿಲ್ಲೆಯಾದ್ಯಂತ ಸಿಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ ನಿರ್ಮಾಣವಾಗಿದ್ದು, ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಉಡುಪಿ ಜಿಲ್ಲೆಗೆ ನಿರಂತರ ಸಿ ಎನ್ ಜಿ ಪೂರೈಕೆಗೆ ಕ್ರಮ ವಹಿಸುವಂತೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.ಜಿಲ್ಲೆಯಲ್ಲಿ ಸಾವಿರಕ್ಕೂ ಮಿಕ್ಕಿ ಆಟೋಗಳು ಹಾಗೂ ಇತರ ವಾಹನಗಳು ಸಿ ಎನ್ ಜಿ ಇಂಧನವನ್ನೇ ಅವಲಂಬಿಸಿದ್ದು, ಪ್ರಸ್ತುತ 3 ಸಿಎನ್ ಜಿ ಸ್ಟೇಷನ್ ಗಳು ಕಾರ್ಯ ನಿರ್ವಹಿಸುತ್ತಿವೆ. ಆದರೆ ಅವುಗಳಲ್ಲಿ ಸಾಕಷ್ಟು ಇಂಧನ ಪೂರೈಕೆಯ ಇಲ್ಲ, ಆಟೋ ಚಾಲಕರು ಇಂಧನ ಕೊರತೆಯಿಂದ ಸಮಸ್ಯೆ ಎದುರಿಸುತ್ತಿದ್ದಾರೆ.ದಿನೇದಿನೇ ಸಿ ಎನ್ ಜಿ ಆಧಾರಿತ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದರೂ, ಸಿ ಎನ್ ಜಿ ತುಂಬುವ ಬಂಕ್ ಗಳ ಕೊರತೆಯಿಂದ ವಾಹನ ಮಾಲೀಕರು, ಆಟೋ ಚಾಲಕರು ಬಾಡಿಗೆ ಬಿಟ್ಟು ಬಂಕ್ ಗಳ ಮುಂದೆ ಕಾಯುವ ಪರಿಸ್ಥಿತಿ ಎದುರಾಗಿದೆ ಎಂದು ಟ್ವೀಟ್ ನಲ್ಲಿ ಶಾಸಕರು ವಿವರಿಸಿದ್ದಾರೆ.ಅಲ್ಲದೇ ಶೀಘ್ರದಲ್ಲಿಯೇ ಪೆಟ್ರೋಲಿಯಂ ಸಚಿವಾಲಯದ ಸಚಿವರು ಹಾಗೂ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.