ಸಾರಾಂಶ
ಮಾಗಡಿ: ರಾಮನಗರ ಮಾರ್ಗವಾಗಿ ಮಾಗಡಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸ್ಟೇರಿಂಗ್ ರಾಡ್ ಕಟ್ಟಾದ ಪರಿಣಾಮ ದಿಬ್ಬಕ್ಕೆ ಡಿಕ್ಕಿ ಹೊಡೆದು ಚಾಲಕ, ನಿರ್ವಾಹಕರು ಸೇರಿದಂತೆ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಬಸ್ಸಿನ ಸ್ಟೇರಿಂಗ್ ರಾಡ್ ಕಟ್ಟಾದ ಕಾರಣ ಚಾಲಕ ಬಸ್ಸನ್ನು ನಿಯಂತ್ರಿಸಲು ಸಾಧ್ಯವಾಗದೆ ತಾಲೂಕಿನ ಅತ್ತಿಂಗೆರೆ ಸಮೀಪದ ಚಂದಹಸಿ ಕಟೆಯ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ ವಿವಿಧ ಸರ್ಕಾರಿ ಇಲಾಖೆಗಳ ನೌಕರರಿಗೆ ಹಾಗೂ ಮಹಿಳೆಯರು ಸೇರಿ 19ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸೊಂಟ, ಮುಖ, ತಲೆ ಭಾಗಕ್ಕೆ ಗಾಯಗಳಾಗಿವೆ. ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು, ಓರ್ವ ಮಹಿಳೆಗೆ ತಲೆಗೆ ಗಂಭೀರ ಗಾಯವಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಡಿವೈಎಸ್ಪಿ ಪ್ರವೀಣ್, ಪೊಲೀಸ್ ಇನ್ಸ್‌ಪೆಕ್ಟರ್ ಗಿರಿರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.