ಕಾರು ಪಲ್ಟಿ; ಓರ್ವ ಸಾವು, ಮತ್ತಿಬ್ಬರಿಗೆ ಗಾಯ

| Published : Jan 15 2025, 12:48 AM IST

ಸಾರಾಂಶ

ತಾಲೂಕಿನ ಮಲೆಮಾದೇಶ್ವರ ಬೆಟ್ಟಕ್ಕೆ ಕುಟುಂಬ ಸಮೇತ ವಾಹನದಲ್ಲಿ ತೆರಳುತ್ತಿದ್ದಾಗ ರಸ್ತೆಯಲ್ಲಿ ಹಾವು ಅಡ್ಡಲಾಗಿ ಬಂದ ಪರಿಣಾಮ ತಪ್ಪಿಸಲು ಹೋಗಿ ಕಾರ್ ಪಲ್ಟಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪತಿ ಹಾಗೂ ಸಂಬಂಧಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಮಲೆಮಾದೇಶ್ವರ ಬೆಟ್ಟಕ್ಕೆ ಕುಟುಂಬ ಸಮೇತ ವಾಹನದಲ್ಲಿ ತೆರಳುತ್ತಿದ್ದಾಗ ರಸ್ತೆಯಲ್ಲಿ ಹಾವು ಅಡ್ಡಲಾಗಿ ಬಂದ ಪರಿಣಾಮ ತಪ್ಪಿಸಲು ಹೋಗಿ ಕಾರ್ ಪಲ್ಟಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪತಿ ಹಾಗೂ ಸಂಬಂಧಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ತಾಲೂಕಿನ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಟಿ.ದೊಡ್ಡಿ ಗ್ರಾಮದ ಬಳಿ ಕೌಲಂದೆ ಗ್ರಾಮದ ಸಮೀಪ ಬರುವ ಕೆ.ಆರ್.ಪುರಂ ನಿವಾಸಿ ಪ್ರಕಾಶ್ ಹಾಗೂ ಆತನ ಪತ್ನಿ ಮಂಜುಳಾ ಮತ್ತು ಸಹೋದರನ ಪುತ್ರ ಸಚಿನ್ ಕಾರಿನಲ್ಲಿ ಮಲೆಮಾದೇಶ್ವರ ಬೆಟ್ಟಕ್ಕೆ ಪೂಜೆಗೆ ತೆರಳುತ್ತಿದ್ದಾಗ ಎಂ.ಟಿ. ದೊಡ್ಡಿ ಗ್ರಾಮದ ಬಳಿ ರಸ್ತೆಗೆ ಅಡ್ಡಲಾಗಿ ಭಾರಿ ಗಾತ್ರದ ಹಾವು ಬಂದಾಗ ಅದನ್ನು ತಪ್ಪಿಸಲು ಹೋಗಿ ಕಾರ್ ಕಲ್ಲು ಬಂಡೆಗೆ ಡಿಕ್ಕಿಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಪ್ರಕಾಶ್ ಪತ್ನಿ ಮಂಜುಳಾ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪತಿ ಪ್ರಕಾಶ್ ಹಾಗೂ ಸಹೋದರನ ಪುತ್ರ ಸಚಿನ್‌ಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆ ಕೊಳ್ಳೇಗಾಲದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ಸಂಬಂಧ ರಾಮಪುರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಪಿಎಸ್ಐ ಲೋಕೇಶ್ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.