ಸಾರಾಂಶ
ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳು ಕಾನೂನು ದತ್ತ ಅಧಿಕಾರ ಚಲಾಯಿಸುತ್ತಿದ್ದರೂ ಸಹ ಸಾಕ್ಷಿಗಳ ಕೊರತೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತಿಲ್ಲ. ಸಂವಿಧಾನದಲ್ಲಿ ಪ್ರಜೆಗಳಿಗಾಗಿ ಅತ್ಯಮೂಲ್ಯ ವಾಗಿ ನೀಡಿರುವ ಮೂಲ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸಮುದಾಯದ ಕರ್ತವ್ಯವಾಗಿದೆ.
ಕನ್ನಡಪ್ರಭ ವಾರ್ತೆ ಮದ್ದೂರು
ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರವೂ ಸಹ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣ ಕೊನೆಯಾಗಿಲ್ಲ ಎಂದು ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್.ಹರಿಣಿ ವಿಷಾದಿಸಿದರು.ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದ ಸಂವಿಧಾನ ಎಲ್ಲಾ ಧರ್ಮಗಳಿಗೂ ಅನ್ವಯಿಸುವ ಸಂವಿಧಾನವಾಗಿದೆ. ಇಂತಹ ಸಂವಿಧಾನ ಜಾರಿಗೆ ಬಂದ ಬಳಿಕವೂ ಮಹಿಳೆಯರ ಮೇಲೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿದೆ ಎಂದರು.
ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳು ಕಾನೂನು ದತ್ತ ಅಧಿಕಾರ ಚಲಾಯಿಸುತ್ತಿದ್ದರೂ ಸಹ ಸಾಕ್ಷಿಗಳ ಕೊರತೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತಿಲ್ಲ. ಸಂವಿಧಾನದಲ್ಲಿ ಪ್ರಜೆಗಳಿಗಾಗಿ ಅತ್ಯಮೂಲ್ಯ ವಾಗಿ ನೀಡಿರುವ ಮೂಲ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸಮುದಾಯದ ಕರ್ತವ್ಯವಾಗಿದೆ ಎಂದರು.ದೇಶದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ, ಉದ್ಯೋಗ, ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆ ನೀಡುವ ಆಶಯ ಹೊಂದಿರುವ ಸಂವಿಧಾನವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಮುಂದೊಂದು ದಿನ ಪಶ್ಚಾತಾಪ ಪಡುವ ಸಂದರ್ಭ ಎದುರಾದರೂ ಸಹ ಆಶ್ಚರ್ಯವಿಲ್ಲ ಎಂದರು.
ಈ ವೇಳೆ ಅಪರ ಹಿರಿಯ ಸಿವಿಲ್ ನ್ಯಾಯಾಧೀಶೆ ಎನ್.ಬಿ.ಮೋಹನ್ ಕುಮಾರಿ, 1ನೇ ಅಪರ ಸಿವಿಲ್ ನ್ಯಾಯಾಧೀಶೆ ಎಸ್.ಸಿ. ನಳಿನ, 2ನೇನೇ ಅಪರ ನ್ಯಾಯಾಧೀಶ ವಿ.ಕೋನಪ್ಪ, 3ನೇ ಅಪರ ನ್ಯಾಯಾಧೀಶ ಎಸ್. ಪಿ.ಕಿರಣ್, ಸರ್ಕಾರಿ ಅಭಿಯೋಜಕರಾದ ಪ್ರೀತಂ ಡೇವಿಡ್, ಕಪನಿ ನಂಜೇಶ್ವರ, ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ, ಉಪಾಧ್ಯಕ್ಷ ಪುಟ್ಟರಾಜು, ಪ್ರಧಾನ ಕಾರ್ಯದರ್ಶಿ ಎಂ.ಜೆ.ಸುಮಂತ್, ಖಜಾಂಚಿ ಪ್ರಸನ್ನ, ಜಂಟಿ ಕಾರ್ಯದರ್ಶಿ ಸುವರ್ಣ ಮತ್ತು ಪದಾಧಿಕಾರಿಗಳು ಹಾಗೂ ನ್ಯಾಯಾಲಯದ ಸಿಬ್ಬಂದಿ ಇದ್ದರು.