ಸಾರಾಂಶ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸಿ, ಸರಳೀಕರಣ ಮಾಡುವ ಮೂಲಕ ದೇಶದ ಆರ್ಥಿಕ ಪ್ರಗತಿಗೆ ಮುನ್ನಡಿ ಬರೆದಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ.
ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸಿ, ಸರಳೀಕರಣ ಮಾಡುವ ಮೂಲಕ ದೇಶದ ಆರ್ಥಿಕ ಪ್ರಗತಿಗೆ ಮುನ್ನಡಿ ಬರೆದಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಜನಸಾಮಾನ್ಯರು, ರೈತರಿಗೆ ಜಿಎಸ್‌ಟಿ ಕಡಿತಗೊಳಿಸುವ ಮಾಡುವ ಭರವಸೆ ನೀಡಿದ್ದು, ಅದನ್ನೀಗ ಈಡೇರಿಸಲಾಗಿದೆ. ಈ ಹಿಂದೆ ಜಿಎಸ್‌ಟಿ ಜನಸಾಮಾನ್ಯರಿಗೆ ಹೊರೆ, ದರ ಏರಿಕೆ ಬಗ್ಗೆ ವ್ಯಾಪಕವಾಗಿ ಅಧಾರ ರಹಿತ ಟೀಕೆ ಮಾಡುತ್ತಿದ್ದ ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳು ಇದೀಗ ಕೇಂದ್ರ ಸರ್ಕಾರ ಜನಸಾಮಾನ್ಯರ ಪರವಾಗಿ ಜಿಎಸ್‌ಟಿ ಕಡಿತ ಮಾಡಿದ ಬಳಿಕ ನೀರಿನಿಂದ ಹೊರತೆಗೆದ ಮೀನಿನಂತೆ ಚಡಪಡಿಸುತ್ತಿವೆ ಎಂದು ಅವರು ನುಡಿದರು.ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿದ್ದ ಕಂದಾಯ ಸಚಿವರು ಜಿಎಸ್‌ಟಿ ತೆರಿಗೆ ಕಡಿತದಿಂದ ರಾಜ್ಯಕ್ಕೆ 15 ಸಾವಿರ ಕೋಟಿ ರು. ಆದಾಯ ನಷ್ಟವಾಗುತ್ತದೆ. ಅದನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಭರಿಸುವಂತೆ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಜಿಎಸ್‌ಟಿ ತೆರಿಗೆ ಕಡಿತವನ್ನು ವಿರೋಧಿಸುತ್ತಿರುವುದು ದುರದೃಷ್ಟಕರ. ರಾಜ್ಯ ಕಾಂಗ್ರೆಸ್ ಸರಕಾರ ತಕ್ಷಣ ಜಿಎಸ್‌ಟಿ ತೆರಿಗೆ ಕಡಿತದ ಬಗ್ಗೆ ತಮ್ಮ ನಿಲುವು ಕೂಡಲೇ ಸ್ಪಷ್ಟ ಪಡಿಸಬೇಕು ಎಂದು ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ.