ಸಾರಾಂಶ
ಜಿಹಾದಿಗಳ ಅಟ್ಟಹಾಸಕ್ಕೆ ದೇಶದ ಅಮಾಯಕ ಜನರು ಬಲಿಯಾಗುತ್ತಿದ್ದು ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈ ಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಕನಕಪುರ: ಜಿಹಾದಿಗಳ ಅಟ್ಟಹಾಸಕ್ಕೆ ದೇಶದ ಅಮಾಯಕ ಜನರು ಬಲಿಯಾಗುತ್ತಿದ್ದು ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈ ಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಚನ್ನಬಸಪ್ಪ ವೃತ್ತದಲ್ಲಿ ತಾಲೂಕು ಬಿಜೆಪಿ ಹಾಗೂ ಶ್ರೀ ರಾಮಸೇನೆ ಘಟಕ ಕಾಶ್ಮೀರದ ಪೆಹಲ್ಗಾಂನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ ಅಮಾಯಕರಿಗೆ ಶ್ರದ್ಧಾಂಜಲಿ ಅರ್ಪಿಸಿದ ಪದಾಧಿಕಾರಿಗಳು ಮಾತನಾಡಿ, ದೇಶದಲ್ಲಿ ಸ್ವಾತಂತ್ರ್ಯ ಬಂದಾಗಿನಿಂದಲೂ ಒಂದಲ್ಲಾ ಒಂದು ರೀತಿ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಈಗ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಘಟನೆಗಳೇ ಇದಕ್ಕೆ ಸಾಕ್ಷಿಯಾಗಿದ್ದು ನಮ್ಮ ದೇಶದಲ್ಲೇ ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುವಂತ ಪರಿಸ್ಥಿತಿ ನಿರ್ಮಾಣವಾಗಿರುವುದು ಕಳವಳಕಾರಿ ಬೆಳವಣಿಗೆ. ಕೇಂದ್ರ ಸರ್ಕಾರ ಈ ಕೂಡಲೇ ಭಯೋತ್ಪಾದನೆಯ ಬೇರನ್ನು ಕಿತ್ತೊಗೆದು ಹಿಂದೂಗಳು ನೆಮ್ಮದಿಯ ಜೀವನ ನಡೆಸಲು ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದರು.ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಜೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಪಿ.ಕುಮಾರ್, ನಗರ ಮಂಡಲ ಅಧ್ಯಕ್ಷ ಮಂಜುನಾಥ್, ದಿಶಾ ಸಮಿತಿ ಸದಸ್ಯ ಡಿ. ಶ್ರೀನಿವಾಸ್,ಮುಖಂಡರಾದ ಆಟೋ ಕುಮಾರ್, ಕೃಷ್ಣಪ್ಪ ಹಾಗೂ ರಾಮನಗರ ಜಿಲ್ಲಾ ಶ್ರೀ ರಾಮ ಸೇನೆ ಘಟಕದ ಅಧ್ಯಕ್ಷ ನಾಗರ್ಜುನ್ ಗೌಡ ತಾಲೂಕು ಪದಾಧಿಕಾರಿಗಳಾದ ರಾಜಗೋಪಾಲ್, ನವೀನ್, ಹಿಂದೂ ಜಾಗರಣಾ ವೇದಿಕೆ ವೆಂಕಟೇಶ್, ಆನಂದ್ ಸೇರಿದಂತೆ ಬಿಜೆಪಿ ಪಕ್ಷದ ಮಹಿಳಾ ಘಟಕದ ಸದಸ್ಯರು, ಮುಖಂಡರ ಪದಾಧಿಕಾರಿಗಳು ದೀಪ ಹಚ್ಚಿ ಸಂತಾಪ ಸೂಚಿಸಿದರು.