ಸಾರಾಂಶ
ಉದ್ಯಮಿಯಾಗಿ ದೇಶ, ವಿದೇಶಗಳನ್ನು ಸುತ್ತಿ ಅಲ್ಲಿನ ಅಭಿವೃದ್ಧಿ ಬಗ್ಗೆ ಪೂರ್ಣ ಮಾಹಿತಿ ಇರುವ ಎಂ.ಶ್ರೀನಿವಾಸ್ ಅವರಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ದೊರೆತಿರುವುದು ಸೂಕ್ತ ವಾಗಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಟಿ.ರಾಜೇಂದ್ರ ಹೇಳಿದರು.
ತಾಲೂಕು ಒಕ್ಕಲಿಗರ ಸಂಘದಿಂದ ಎಂ.ಶ್ರೀನಿವಾಸ್ ಅವರಿಗೆ ಸನ್ಮಾನ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರಉದ್ಯಮಿಯಾಗಿ ದೇಶ, ವಿದೇಶಗಳನ್ನು ಸುತ್ತಿ ಅಲ್ಲಿನ ಅಭಿವೃದ್ಧಿ ಬಗ್ಗೆ ಪೂರ್ಣ ಮಾಹಿತಿ ಇರುವ ಎಂ.ಶ್ರೀನಿವಾಸ್ ಅವರಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ದೊರೆತಿರುವುದು ಸೂಕ್ತ ವಾಗಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಟಿ.ರಾಜೇಂದ್ರ ಹೇಳಿದರು.
ಭಾನುವಾರ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಎಂ.ಶ್ರೀನಿವಾಸ್ ಅವರನ್ನು ತಾಲೂಕು ಒಕ್ಕಲಿಗರ ಸಂಘದಿಂದ ಸನ್ಮಾನಿಸಿ ಮಾತನಾಡಿ, ಎಂ.ಶ್ರೀನಿವಾಸ್ ಅವರಿಗೆ ಪ್ರವಾಸೋಧ್ಯಮ ನಿಗಮದ ಅಧ್ಯಕ್ಷ ಸ್ಥಾನ ನೀಡಿರುವ ಸಿಎಂ ಸಿದ್ದರಾಮಯ್ಯ ಅವರ ಆಯ್ಕೆ ನಿಜಕ್ಕೂ ಅಭಿನಂದನೀಯ. ತಮ್ಮ ಅಧಿಕಾರಾವಧಿಯಲ್ಲಿ ತಾಲೂಕು ಹಾಗೂ ಜಿಲ್ಲೆಯ ಪ್ರವಾಸಿ ತಾಣಗಳು ಹೆಚ್ಚೆಚ್ಚು ಅಭಿವೃದ್ಧಿ ಆಗಲಿ ಎಂದು ಹಾರೈಸಿದರು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್, ಹುಟ್ಟೂರಿನ ಋಣ ಹಾಗೂ ತಾಯಿಯ ಋಣ ಬಹಳ ಪವಿತ್ರ ಹಾಗೂ ಶ್ರೇಷ್ಠವಾದವು. ಸಿಎಂ ಸಿದ್ದರಾಮಯ್ಯ ಹಾಗೂ ಈ ಊರಿನ ಜನರ ಪ್ರೀತಿಗೆ ಚ್ಯುತಿ ಬಾರದ ಹಾಗೆ ಸೇವೆ ಸಲ್ಲಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಒಕ್ಕಲಿಗರ ಸಂಘದ ನಿಕಟ ಪೂರ್ವ ಅಧ್ಯಕ್ಷ ಡಿ.ಸಿ.ದಿವಾಕರ, ಉಪಾಧ್ಯಕ್ಷ ಎಲ್.ಎಂ. ಸತೀಶ್, ಕಾರ್ಯದರ್ಶಿ ಎಸ್.ಎಸ್.ಶಾಂತಕುಮಾರ್, ಜಂಟಿ ಕಾರ್ಯದರ್ಶಿ ಪಿ.ಕೆ.ಬಸವರಾಜ್, ಖಜಾಂಚಿ ಲೋಕೇಶ್, ಭದ್ರಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಪಿ.ಮೋಹನ, ಉಪಾಧ್ಯಕ್ಷ ಬಿ.ವಿ.ಉಪೇಂದ್ರ,ನಿರ್ದೇಶಕಿ ಮೀನಾಕ್ಷಿ ಕಾಂತರಾಜ್ ಮತ್ತು ನಿರ್ದೇಶಕರು ಇದ್ದರು.