ಸಾರಾಂಶ
ಚಿಕ್ಕೋಡಿ ಲೋಕಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿನ ದಡ್ಡಿ, ನಾಗನೂರ ಹಾಗೂ ಚನ್ಯಾನದಡ್ಡಿ ಚೆಕ್ ಪೋಸ್ಟ್ ಗಳಿಗೆ ಗುರುವಾರ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ್ ಶಿಂಧೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿದರು.
ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ಚಿಕ್ಕೋಡಿ ಲೋಕಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿನ ದಡ್ಡಿ, ನಾಗನೂರ ಹಾಗೂ ಚನ್ಯಾನದಡ್ಡಿ ಚೆಕ್ ಪೋಸ್ಟ್ ಗಳಿಗೆ ಗುರುವಾರ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ್ ಶಿಂಧೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿದರು. ಚೆಕ್ ಪೋಸ್ಟ್ ನಲ್ಲಿ ಸಂಚರಿಸುವ ವಾಹನಗಳನ್ನು ಪರಿಶೀಲಿಸಿ ವೀಕ್ಷಣೆ ನಡೆಸಿ ಅಗತ್ಯದ ಸಲಹೆ ಸೂಚನೆ ನೀಡಿದರು.ಚೆಕ್ ಪೋಸ್ಟ್ ಮುಖಾಂತರ ಹಾದು ಹೋಗುವ ಪ್ರತಿಯೊಂದು ವಾಹನಗಳನ್ನು ಕೂಲಂಕಶವಾಗಿ ಪರಿಶೀಲಿಸಿ ಯಾವುದೇ ಅಕ್ರಮಗಳಿಗೂ ಅವಕಾಶ ನೀಡದಂತೆ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಉಪ ವಿಭಾಗಾಧಿಕಾರಿ ಮೆಹಬೂಬಿ ತಹಸೀಲ್ದಾರ್ ಚಿದಂಬರ ಕುಲಕರ್ಣಿ, ಸಿ.ಪಿ.ಐ. ಗೋಪಾಲಕೃಷ್ಣ ಗೌಡರ, ತಾಪಂ ಣೊ ಜಗದೀಶ ಕಮ್ಮಾರ ಚೆಕ್ ಪೋಸ್ಟ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.