ನಗರದ ಸಾರ್ವಜನಿಕರ ಆಸ್ಪತ್ರೆಯು ಅವ್ಯವಸ್ಥೆಯ ಆಗರ

| Published : Oct 23 2024, 12:52 AM IST / Updated: Oct 23 2024, 12:53 AM IST

ಸಾರಾಂಶ

ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಸಾವು ಪ್ರಕರಣ: ಸಿಂಧನೂರಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ನಮ್ಮ ಕರ್ನಾಟಕ ಸೇನೆಯಿಂದ ಮಂಗಳವಾರ ಅನಿರ್ದಿಷ್ಠಾವಧಿ ಧರಣಿ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಸಿಂಧನೂರು

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗಾಗಿ ದಾಖಲಾಗಿದ್ದ ತಾಲ್ಲೂಕಿನ ಆರ್.ಎಚ್.ಕ್ಯಾಂಪ್ ನಂ.3ರ ಗರ್ಭಿಣಿ ಮೌಸಂಬಿ ಮಂಡಲ್ ಹೆರಿಗೆ ನಂತರ ಸೋಮವಾರ ಮೃತಪಟ್ಟಿದ್ದು, ಇದಕ್ಕೆ ವೈದ್ಯರ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ, ಕರ್ತವ್ಯಲೋಪ ಎಸಗಿದ ವೈದ್ಯರು ಹಾಗೂ ಸಿಬ್ಬಂದಿಯನ್ನು ಕೂಡಲೇ ಅಮಾನತುಗೊಳಿಸುವಂತೆ ಒತ್ತಾಯಿಸಿ ನಮ್ಮ ಕರ್ನಾಟಕ ಸೇನೆಯಿಂದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರ ಅನಿರ್ದಿಷ್ಟಾವಧಿ ಧರಣಿ ನಡೆಸಲಾಯಿತು.ವಾಗಿದ್ದು, ಇಲ್ಲಿನ ಕೆಲ ವೈದ್ಯರು ಕರ್ತವ್ಯಕ್ಕೆ ಸರಿಯಾಗಿ ಹಾಜರಾಗುವುದಿಲ್ಲ. ಕರ್ತವ್ಯದ ಅವಧಿಯಲ್ಲಿ ಖಾಸಗಿ ಕ್ಲಿನಿಕ್ಗೆ ಹೋಗುತ್ತಾರೆ. ಪದೇ ಪದೇ ಈ ರೀತಿ ಮಾಡುತ್ತಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಚಿಕಿತ್ಸೆ ದೊರೆಯದೇ ಪರದಾಡುತ್ತಿದ್ದಾರೆ. ಇನ್ನೂ ಗರ್ಭಿಣಿಯರು, ತೀವ್ರ ಆನಾರೋಗ್ಯದಿಂದ ಬಳಲುತ್ತಿರುವವರು ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.ಆರ್.ಎಚ್.ಕ್ಯಾಂಪ್ನ ಮೌಸಂಬಿ ಮಂಡಲ್ ಗಂಡ ಮಹೇಶ್ವರ ಮಂಡಲ್ ಅವರ ಸಾವಿಗೆ ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ. ಹೆರಿಗೆ ನಂತರ ಮಹಿಳೆಗೆ ಉತ್ತಮ ಚಿಕಿತ್ಸೆ ದೊರೆತಿದ್ದರೆ ಆಕೆ ಉಳಿಯುತ್ತಿದ್ದಳು ಎಂದು ಆಕೆಯ ಸಂಬಂಧಿಕರೇ ಹೇಳುತ್ತಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ನಿರ್ಲಕ್ಷದ ಸಾವುಗಳು ಹೆಚ್ಚುತ್ತಿದ್ದು, ಪದೇ ಪದೆ ಅವಘಡಗಳು ನಡೆಯುತ್ತಿದ್ದರೂ ಜಿಲ್ಲಾಡಳಿತ ಮೌನ ತಾಳಿದೆ ಎಂದು ಸಂಘಟನೆಯ ಕಾರ್ಯಕರ್ತರು ಆಪಾದಿಸಿದರು.ಸೇನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ರಾಘವೇಂದ್ರ, ಜಿಲ್ಲಾ ಸಂಚಾಲಕ ಹುಸೇನ್ ಭಾμÁ ಇಂದಿರಾನಗರ, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬೂದೇಶ ಮರಾಠ, ತಾಲೂಕು ಉಪಾಧ್ಯಕ್ಷ ಗದ್ದೆಪ್ಪ, ಸದ್ದಾಂ, ಎಂ.ಡಿ.ನಬಿ, ಮಲ್ಲಿಕಾರ್ಜುನ, ಅಬ್ದುಲ್ ನಬಿ, ಮಹ್ಮದ್ ಸಾಬ್ ಚಿಟಗಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀದೇವಿ ಹನುಮಂತ ಸೇರಿದಂತೆ ರವಿಕುಮಾರ ಉಪ್ಪಾರ, ಆನಂದ್, ಅವಿನಾಶ ದೇಶಪಾಂಡೆ, ಆದನಗೌಡ ಜವಳಗೇರಾ, ಅಯ್ಯಪ್ಪ, ಸೈಯ್ಯದ್ ರಬ್ಬಾನಿ ಜಾಗೀರದಾರ ಇದ್ದರು.-

ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ: ಆರೋಪ

ಸಿಂಧನೂರು: ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗಾಗಿ ದಾಖಲಾಗಿದ್ದ ತಾಲ್ಲೂಕಿನ ಆರ್.ಎಚ್.ಕ್ಯಾಂಪ್-3ರ ಗರ್ಭಿಣಿಯೊಬ್ಬರು ಹೆರಿಗೆ ನಂತರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.ಆರ್.ಎಚ್.ಕ್ಯಾಂಪ್ ನಂ.3ರ ಮೌಸಂಬಿ ಮಹೇಶ್ವರ ಮಂಡಲ್ ಮೃತ ಮಹಿಳೆಯಾಗಿದ್ದಾಳೆ. ಸೋಮವಾರ ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ ನಂತರ ಬಾಣಂತಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದಾಗ ಮಹಿಳೆ ಮೃತ ಪಟ್ಟಿರುವ ಘಟನೆ ನಡೆದಿದೆ.ಮೌಸಂಬಿ ಮಂಡಲ್ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಆರ್.ಎಚ್.ಕ್ಯಾಂಪ್ 3 ರಲ್ಲಿರುವ ಅವರ ಸಂಬಂಧಿಕರು ರಾತ್ರಿ 10 ಗಂಟೆ ಸುಮಾರು ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜಮಾಯಿಸಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆಸಿದರು. ‘ಸರಿಯಾದ ಸಮಯಕ್ಕೆ ಚಿಕಿತ್ಸೆ ಕೊಟ್ಟಿದ್ದರೆ ಮೌಸಂಬಿ ಉಳಿಯುತ್ತಿದ್ದಳು, ನಿಮ್ಮ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆ. ಇಲ್ಲಿಗೆ ನಾವು ಬಿಡುವುದಿಲ್ಲ, ಈ ವಿಷಯವನ್ನು ಕೋರ್ಟ್‌ನಲ್ಲಿ ದಾವೆ ಹೂಡುತ್ತೇವೆ. ಇನ್ನು ಎಷ್ಟು ಜನರು ಇಲ್ಲಿ ಬಲಿಯಾಗಬೇಕಿದೆ’ ಎಂದು ಪೋಷಕರು ಆರೋಪಿಸಿದರು.‘ಹೆರಿಗೆಗಾಗಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆತಂದಾಗ ವೈದ್ಯರು ಇರಲಿಲ್ಲ. ನರ್ಸ್‌ಗಳೇ ಹೆರಿಗೆ ಮಾಡಿಸಿದರು. ಹೆರಿಗೆಯೇನೋ ಆಯಿತು. ನಂತರ ಬಾಣಂತಿಗೆ ಆರೋಗ್ಯದಲ್ಲಿ ಏರುಪೇರಾಯಿತು. ವೈದ್ಯರು ಇಲ್ಲದೇ ಇರುವುದರಿಂದ ನರ್ಸ್‌ಗಳೇ ಚಿಕಿತ್ಸೆ ನೀಡಿದರು. ರಾತ್ರಿ 9 ಗಂಟೆಗೆ ಮೈಯೆಲ್ಲಾ ಸಂಪೂರ್ಣ ತಣ್ಣಗಾದ ನಂತರ, ಅವಸರವಸರದಿಂದ ಚಿಕಿತ್ಸೆ ಕೊಟ್ಟವರಂತೆ ಮಾಡಿ, ಸೀರಿಯಸ್ ಇದೆ ನೀವು ರಾಯಚೂರಿನ ಆಸ್ಪತ್ರೆಗೆ ಹೋಗಿ ಎಂದು ಹೇಳಿದರು. ಅಷ್ಟೊತ್ತಿಗಾಗಲೇ ನಮ್ಮ ಮಗಳು ಪ್ರಾಣಬಿಟ್ಟಿದ್ದಳು. ಸರ್ಕಾರಿ ಆಸ್ಪತ್ರೆಯಲ್ಲಿ ಒಳ್ಳೆ ಚಿಕಿತ್ಸೆ ಸಿಗುತ್ತದೆ ಎಂದು ನಂಬಿ ನಮ್ಮ ಮಗಳನ್ನು ಕೈಯ್ಯಾರೆ ಕಳೆದುಕೊಂಡೆವು’ಎಂದು ಮೃತ ಮೌಸಂಬಿ ಮಂಡಲ್ ಸಂಬಂಧಿಕರು ಕಣ್ಣೀರು ಹಾಕಿದರು.