ವಾಲ್ಮೀಕಿ ಕೇಸ್‌ ಸಿಎಂಗೆ ಗೊತ್ತಿದ್ದೇ ನಡೆದಿದೆ: ಎಚ್‌ಡಿಕೆ

| Published : Jun 07 2024, 12:31 AM IST

ವಾಲ್ಮೀಕಿ ಕೇಸ್‌ ಸಿಎಂಗೆ ಗೊತ್ತಿದ್ದೇ ನಡೆದಿದೆ: ಎಚ್‌ಡಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣವರ್ಗಾವಣೆ ಪ್ರಕರಣವು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಗೊತ್ತಿದ್ದೇ ನಡೆದಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

- ಇಷ್ಟೆಲ್ಲಾ ಹಣ ವರ್ಗಾವಣೆ ಒಬ್ಬ ಸಚಿವನಿಂದ ಆಗಿರುವುದಿಲ್ಲಕನ್ನಡಪ್ರಭ ವಾರ್ತೆ ಬೆಂಗಳೂರು

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣವರ್ಗಾವಣೆ ಪ್ರಕರಣವು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಗೊತ್ತಿದ್ದೇ ನಡೆದಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣದಲ್ಲಿ 80-85 ಕೋಟಿ ರು. ರವಾನೆ ಆಗಿರುವ ಮಾಹಿತಿ ಇದೆ. ರಾಜೀನಾಮೆ ನಿರ್ಧಾರ ಮೊದಲೇ ಆಗಬೇಕಿತ್ತು. ಇಷ್ಟೆಲ್ಲಾ ಕೇವಲ ಒಬ್ಬ ಸಚಿವರಿಂದ ಆಗಿರುವುದಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರೂ ಸೇರಿಯೇ ಮಾಡಿರುವುದು ಎಂದು ಕಿಡಿಕಾರಿದರು.

ರಾಜೀನಾಮೆ ಸಂಬಂಧ ಸಚಿವರಿಗೆ ನಾವು ಹೇಳಿಲ್ಲ ಎಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಇದು ಕೇವಲ ಡ್ರಾಮಾ ಮಾತ್ರ. ಸಚಿವರಿಗೆ ರಾಜೀನಾಮೆ ನೀಡಿ ಎನ್ನುವ ಧೈರ್ಯ ಇವರಿಗೆ ಇರಲಿಲ್ಲ. ಹಗರಣದಲ್ಲಿ ದೊಡ್ಡ ಮಟ್ಟದ ಕೈಗಳಿರುವುದೇ ಇದಕ್ಕೆ ಕಾರಣ. ಕಳೆದ ಮಾರ್ಚ್ ತಿಂಗಳಿನಲ್ಲಿಯೇ ಹಗರಣ ನಡೆದಿದ್ದು, ಇವರೆಲ್ಲರೂ ಸೇರಿ ಮುಚ್ಚಿಟ್ಟಿದ್ದಾರೆ. ಅಧಿಕಾರಿ ಸಾವಿನಿಂದ ಮತ್ತು ಮಾಧ್ಯಮಗಳ ಮೂಲಕ ಇದು ಹೊರ ಬಾರದಿದ್ದರೆ ಮುಚ್ಚಿ ಹಾಕುತ್ತಿದ್ದರು ಎಂದು ದೂರಿದರು.

ಹಗರಣ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಕೇವಲ ಒಂದು ಗಂಟೆಯಲ್ಲಿ ಹಣ ಬಿಡುಗಡೆಯಾಗಲು ಸಹಾಯ ಮಾಡಿದ್ದು ಯಾರು? ಅದೆಲ್ಲಾ ಹೊರಗೆ ಬರಬೇಕು. ತೆಲಂಗಾಣದ ಚುನಾವಣೆಗೆ ಹೋಗಿರುವ ಹಣ ಇದಾಗಿದೆ. ಹಗರಣದಲ್ಲಿ ಯಾರ, ಯಾರ ಪಾತ್ರ ಏನಿದೆ? ಎಲ್ಲವೂ ಹೊರಗೆ ಬರಬೇಕು. ವಾಲ್ಮೀಕಿ ನಿಗಮದ ಹಣ ತೆಲಂಗಾಣಕ್ಕೆ ಹೋಗಿದೆ ಎನ್ನುವುದು ತನಿಖೆ ಬಳಿಕ ಗೊತ್ತಾಗಲಿದೆ ಎಂದರು.