ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ

| Published : Dec 04 2023, 01:30 AM IST

ಸಾರಾಂಶ

ದಾಬಸ್‌ಪೇಟೆ: ಹಿರಿಯ ನಟಿ ಲೀಲಾವತಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದ ಡಾ.ಎಂ.ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಿದರು.

ಈ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿ ಕನ್ನಡ ಚಿತ್ರರಂಗದಲ್ಲಿ ಲೀಲಾವತಿ ಅವರು ಸಲ್ಲಿಸಿರುವ ಸೇವೆ ಅಪಾರವಾದುದು. ನೂರಾರು ಚಿತ್ರರಂಗದಲ್ಲಿ ಅಭಿನಯಿಸಿ ಜನರ ಮನದಲ್ಲಿ ಉಳಿದಿದ್ದಾರೆ. ಅವರು ಚಿತ್ರರಂಗದ ಬಳಿಕ ಗ್ರಾಮೀಣ ಭಾಗದ ಜನರ ಸೇವೆಗೆ ಸಾಕಷ್ಟು ಯೋಜನೆಗಳನ್ನು ಕೈಗೊಂಡಿರುವುದು ಸಂತೋಷಕರ ಸಂಗತಿ ಮತ್ತು ಮಾದರಿ. ಲೀಲಾವತಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದಲ್ಲಿ ಚಿಕಿತ್ಸೆ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ಗೌಡ, ಮುಖಂಡ ಸಿ.ಎಂ.ಗೌಡ, ಖಲೀಉಲ್ಲಾ, ಸಂತೋಷ್‌ಕುಮಾರ್, ಮನುಕುಮಾರ್ ಮತ್ತಿತರರು ಹಾಜರಿದ್ದರು.ಪೋಟೋ 7 :

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಹಿರಿಯ ನಟಿ ಲೀಲಾವತಿ ಅವರ ಅವರ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆರೋಗ್ಯ ವಿಚಾರಿಸಿದರು.