ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತಿರುವುದಕ್ಕೆ ಕೈ ಕೆಂಡ

| Published : Sep 28 2024, 01:33 AM IST / Updated: Sep 28 2024, 09:17 AM IST

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತಿರುವುದಕ್ಕೆ ಕೈ ಕೆಂಡ
Share this Article
  • FB
  • TW
  • Linkdin
  • Email

ಸಾರಾಂಶ

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯಾವುದೇ ಪಾತ್ರವಿಲ್ಲ. ಅವರ ವಿರುದ್ಧ ಷಡ್ಯಂತ್ರ ನಡೆಸಿದ್ದು, ವಿರೋಧ ಪಕ್ಷಗಳು ವಿನಾಕಾರಣ ಆರೋಪಗಳನ್ನು ಮಾಡುತ್ತಾ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ -ಕಾಂಗ್ರೆಸ್

  ಬಾಗಲಕೋಟೆ : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯಾವುದೇ ಪಾತ್ರವಿಲ್ಲ. ಅವರ ವಿರುದ್ಧ ಷಡ್ಯಂತ್ರ ನಡೆಸಿದ್ದು, ವಿರೋಧ ಪಕ್ಷಗಳು ವಿನಾಕಾರಣ ಆರೋಪಗಳನ್ನು ಮಾಡುತ್ತಾ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್‌ ಪಕ್ಷಗಳು ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿರುವುದನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟಿಸಿದ ಕಾರ್ಯಕರ್ತರು, ಬಿಜೆಪಿ-ಜೆಡಿಎಸ್ ಪಕ್ಷದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮಾತನಾಡಿದರು. ಯುವ ಮುಖಂಡ ಸಂತೋಷ ಹೊಕ್ರಾಣಿ ಮಾತನಾಡಿ, ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವವರು ಮೊದಲ ತಮಗೆ ನೈತಿಕತೆ ಇದೆ ಎನ್ನುವುದು ತಿಳಿದುಕೊಳ್ಳಬೇಕು. ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಲವು ಭಾಗ್ಯಗಳನ್ನು ನೀಡಿ ಜನಪರ ಆಡಳಿತ ನಡೆಸುತ್ತಿದ್ದಾರೆ. ವಿನಾಕಾರಣ ಬಿಜೆಪಿಯವರು ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿರುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಇಲ್ಲಿವರೆಗೂ ಬಿಜೆಪಿ ಸರ್ಕಾರ ಬಲದಿಂದ ಆಡಳಿತ ನಡೆಸಿಲ್ಲ. ಹಿಂಬಾಗಿಲಿನಿಂದ ಬಂದು ಆಡಳಿತ ನಡೆಸಿ, ಐದು ವರ್ಷ ರಾಜ್ಯದಲ್ಲಿ ಒಮ್ಮೆ ಆಡಳಿತ ನಡೆಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಹಲವು ಯೋಜನೆಗಳನ್ನು ನೀಡಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಸಿಎಂ ಅವರು ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ. ಮುಖ್ಯಮಂತ್ರಿಯವರು ಐದು ವರ್ಷಗಳ ಕಾಲು ಮುಂದುವರೆಯಬೇಕು ಎಂದು ಹೇಳಿದರು.

ಬಿಜೆಪಿ ವಕ್ತಾರ ಚಂದ್ರಶೇಖರ ರಾಠೋಡ ಮಾತನಾಡಿ, ಬಿಜೆಪಿ-ಜೆಡಿಎಸ್ ಪಕ್ಷಗಳಿಂದ ವಿಷಯಗಳು ಇಲ್ಲದ ಕಾರಣ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿದ್ದಾರೆ. ತಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ಮಾಡಿದ ಪರಿಣಾಮ ಹಲವು ನಾಯಕರು ಜೈಲಿಗೆ ಹೋಗಿ ಬಂದಿದ್ದಾರೆಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಜಿ.ಪಂ. ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ದ್ಯಾಮಣ್ಣ ಗಾಳಿ, ನಾಗರಾಜ್ ಹದ್ಲಿ, ಎಸ್.ಎನ್.ರಾಂಪೂರ, ರೇಣುಕಾ ನ್ಯಾಮಗೌಡ, ಉಮೇಶ ಮೇಟಿ, ರಾಜು ಮನ್ನಿಕೇರಿ, ಹಣಮಂತ ರಾಕುಂಪಿ, ವಿರೇಶ ಹುಂಡೇಕಾರ, ಚಿಟ್ಟು ನೀಲನಾಯಕ, ಅನಿಲ ದಡ್ಡಿ, ತಿಪ್ಪಣ್ಣ ನೀಲನಾಯಕ, ಹಾಜಿಸಾಬ ದಂಡಿ ನ, ರಜಾಕ ಬೆನ್ನೂರ ಸೇರಿ ದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.