ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ಅನುದಾನ ಬಿಡುಗಡೆಗೆ ಕಮ್ಯುನಿಸ್ಟ್ ಪಕ್ಷ ಆಗ್ರಹ

| Published : Feb 09 2024, 01:48 AM IST

ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ಅನುದಾನ ಬಿಡುಗಡೆಗೆ ಕಮ್ಯುನಿಸ್ಟ್ ಪಕ್ಷ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರಬೇಕಾದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರಬೇಕಾದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ ಅಡ್ಡಿಯಾಗಬಾರದು. ಈ ಹಿನ್ನೆಲೆಯಲ್ಲಿ ಬರಗಾಲದ ಪರಿಹಾರ ನೀಡಬೇಕು. ತನ್ನ ಮನಸ್ಸಿಗೆ ತೋಚಿದಂತೆ ರಾಜ್ಯ ಸರ್ಕಾರಗಳು ಸಾಲ ಪಡೆಯುವಂತೆ ಮಾಡುವುದನ್ನು ನಿಲ್ಲಿಸಬೇಕು. ಕೇಂದ್ರ ಪ್ರಾಯೋಜಿತ ಯೋಜನೆಗಳ ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಒಕ್ಕೂಟ ಸರ್ಕಾರ ಮಧ್ಯಪ್ರವೇಶ ಮಾಡಬಾರದು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಇಡಿ, ಸಿಬಿಐ, ಆದಾಯ ತೆರಿಗೆ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಬಾರದು. ರಾಜ್ಯಪಾಲರ ಹಸ್ತಕ್ಷೇಪ ರಾಜ್ಯದಲ್ಲಿ ಇರಬಾರದು. ವಿವಿಗಳ ಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರು ಹಸ್ತಕ್ಷೇಪ ಮಾಡು ವುದನ್ನು ತಡೆಯಬೇಕು. ರಾಜ್ಯ ಸರ್ಕಾರ ಅಂಗೀಕರಿಸಿದ ಶಾಸನ ಗಳನ್ನು ರಾಜ್ಯಪಾಲರು ತಡೆಯಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಎಂ.ನಾರಾಯಣ, ಕೆ.ಪ್ರಭಾಕರನ್, ಎಂ.ಅನಂತರಾಮ್, ಕೆ.ಮಂಜಣ್ಣ, ತುಳಸೀಪ್ರಭ, ಜಾರ್ಜ್ ಸಲ್ಡಾನಾ, ಅಬ್ದುಲ್ ಸುಭಾನ್, ರೇಣುಕಮ್ಮ, ಮುನಿರಾಜು ಇದ್ದರು.