ನುಡಿದಂತೆ ನಡೆದಿರುವ ಕಾಂಗ್ರೆಸ್‌ ಸರ್ಕಾರ: ಡಾ.ದೀಪಾ

| Published : Apr 21 2024, 02:27 AM IST

ನುಡಿದಂತೆ ನಡೆದಿರುವ ಕಾಂಗ್ರೆಸ್‌ ಸರ್ಕಾರ: ಡಾ.ದೀಪಾ
Share this Article
  • FB
  • TW
  • Linkdin
  • Email

ಸಾರಾಂಶ

ರಾಮನಗರ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನಾ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷೆ ಡಾ.ದೀಪಾ ಮುನಿರಾಜು ತಿಳಿಸಿದರು.

ರಾಮನಗರ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನಾ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷೆ ಡಾ.ದೀಪಾ ಮುನಿರಾಜು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸ್ವತಂತ್ರ್ಯ ಭಾರತದ ಇತಿಹಾಸದಲ್ಲಿ ನುಡಿದಂತೆ ನಡೆದ ಸರ್ಕಾರ ಎಂದು ಸಾಬೀತು ಪಡಿಸಿದೆ. ಸರ್ಕಾರದ ಐದು ಗ್ಯಾರಂಟಿಗಳು ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಇದನ್ನು ಸಹಿಸಲಾಗದ ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಬಡವರ, ಮಧ್ಯಮ ವರ್ಗದವರ ಬದುಕು ಸುಧಾರಿಸುವುದು ಮುಖ್ಯವಾಗಿಲ್ಲ ಎಂದು ಟೀಕಿಸಿದರು.

ಗ್ಯಾರಂಟಿ ಯೋಜನೆಗಳ ಅನುಕೂಲ: ಸ್ತ್ರೀ ಶಕ್ತಿ ಯೋಜನೆಯಿಂದಾಗಿ ರಾಜ್ಯದ ಮಹಿಳೆಯರು ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದಾಗಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ಸಿಗುತ್ತಿದೆ. ಅನ್ನಭಾಗ್ಯ ಯೋಜನೆಯಿಂದ ಪ್ರತಿ ತಿಂಗಳು 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಯ ಹಣವನ್ನು ಪ್ರತಿಕುಟುಂಬಕ್ಕೆ ತಲುಪುತ್ತಿದೆ. ಗೃಹ ಜ್ಯೋತಿ ಯೋಜನೆಯಿಂದ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಯುವ ನಿಧಿ ಯೋಜನೆ ಡಿಪ್ಲೊಮಾ ಪಡೆದವರಿಗೆ 1500, ಪದವಿ ಪಡೆದವರಿಗೆ 3 ಸಾವಿರ ರು. ನೀಡಲಾಗುತ್ತಿದೆ ಎಂದು ಹೇಳಿದರು.

ಮುಂದಿನ ಕಾಂಗ್ರೆಸ್‌ ಯೋಜನೆಗಳು:

ಲೋಕಸಭಾ ಚುನಾವಣೆಯ ಪ್ರಾಣಾಳಿಕೆಯನ್ನು ಪಂಚ ನ್ಯಾಯವನ್ನಾಗಿ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಮಹಿಳಾ ನ್ಯಾಯ ಪ್ರತಿವರ್ಷ 1 ಲಕ್ಷ ರು. ಗಳನ್ನು ಪ್ರತಿ ಬಡ ಕುಟುಂಬದ ಮಹಿಳೆಗೆ ನೀಡುವುದು. ಯುವ ನ್ಯಾಯದ ಯೋಜನೆಯಡಿ ಪ್ರತಿಯೊಬ್ಬ ವಿದ್ಯಾವಂತ ಯುವಕನಿಗೆ ಉದ್ಯೋಗದ ಗ್ಯಾರಂಟಿ ನೀಡುವುದು. ರೈತ ನ್ಯಾಯದಲ್ಲಿ ರೈತರ ಸಾಲಮನ್ನಾ ಮಾಡುವುದು ಮತ್ತು ಸ್ವಾಮಿನಾಥನ್ ಆಯೋಗದ ಸೂತ್ರದ ಪ್ರಕಾರ ಎಂಎಸ್ಪಿಗೆ ಕಾನೂನು ಸ್ಥಾನಮಾನ ನೀಡುವುದು. ಶ್ರಮಿಕ ವರ್ಗದ ನ್ಯಾಯದಲ್ಲಿ ದಿನಕ್ಕೆ 400 ನರೇಗಾ ಸೇರಿದಂತೆ ರಾಷ್ಟ್ರೀಯ ಕನಿಷ್ಠ ವೇತನ ನೀಡುವುದಾಗಿದೆ. ಪಾಲುದಾರಿಕೆ ನ್ಯಾಯ ಈ ಯೋಜನೆಯಡಿ ಜಾತಿಗಣತಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ರಾಷ್ಟ್ರವ್ಯಾಪಿ ಜನಗಣತಿಯಲ್ಲಿ ಪ್ರತಿಯೊಬ್ಬ ವ್ಯಕ್ತಿ ಮತ್ತು ಪ್ರತಿ ಸಮುದಾಯವನ್ನು ಪರಿಗಣಿಸಲಾಗುತ್ತದೆ ಎಂದು ಹೇಳಿದರು.

ಕ್ಷೇತ್ರದ ಅಭಿವೃದ್ಧಿಗೆ ಸುರೇಶ್‌ ಶ್ರಮ:

ಸಂಸರದರಾಗಿ ಡಿ.ಕೆ.ಸುರೇಶ್ ಅವರು ಸಾಕಷ್ಟು ಕೆಲಸ ಮಾಡಿದ್ದಾರೆ. ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಿದ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಚೆಕ್ ಡ್ಯಾಂ, ಬಸ್ ತಂಗುದಾಣ ನಿರ್ಮಾಣ, ಸತ್ತೇಗಾಲ, ನೆಟ್ಕಲ್ ಯೋಜನೆ ಜಾರಿ ಮಾಡಿದ್ದಾರೆ. ಹಾರೋಹಳ್ಳಿ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮಾಡಲು ಶಿಫಾರಸ್ಸು ಮಾಡಿದ್ದು, ಅಲ್ಲಿಯೂ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಎಂಸಿ ಪ್ರಧಾನ ಕಾರ್ಯದರ್ಶಿ ಪಾರ್ವತಮ್ಮ, ಉಪಾಧ್ಯಕ್ಷರಾದ ವನಜಾ, ರೇಣುಕಮ್ಮ, ಉಷಾರಾಣಿ, ಮಂಗಳಾ ಶಂಭುಗೌಡ, ಮಹಿಳಾ ಬ್ಲಾಕ್ ಅಧ್ಯಕ್ಷರಾದ ಶೋಭ ದೇವರಾಜ್, ರೇಣುಕಮ್ಮ, ನಾಗಮ್ಮ ಜಯಶೀಲಾ, ರೂಪಾ, ಜಯಲಕ್ಷ್ಮಮ್ಮ, ಆಯಿಷಾ ಬಾನು, ಗಿರಿಜಮ್ಮ ಇತರರಿದ್ದರು.ಕೋಟ್‌.............ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಮ್ಮ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎನ್ನುವ ಪದ ಬಳಕೆ ಮಾಡಿರುವುದು ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ ಅವರಿಗೆ ಶೋಭೆ ತರುವುದಿಲ್ಲ. ರಾಜ್ಯದ ಮಹಿಳೆಯ ಮನಗೆದ್ದಿರುವ ಗ್ಯಾರಂಟಿ ಯೋಜನೆಗಳನ್ನು ಕುಮಾರಸ್ವಾಮಿ ಅವರು ಹೀಯಾಳಿಸುವಂತೆ ಮಾತನಾಡುವುದು ಮಹಿಳೆಯರಿಗೆ ಮಾಡಿದ ಅಪಮಾನ.

-ಡಾ.ದೀಪಾ, ಜಿಲ್ಲಾಧ್ಯಕ್ಷೆ, ಮಹಿಳಾ ಕಾಂಗ್ರೆಸ್ ಸಮಿತಿ

20ಕೆಆರ್ ಎಂಎನ್ 5.ಜೆಪಿಜಿ

ರಾಮನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷೆ ಡಾ.ದೀಪಾ ಮುನಿರಾಜು ಹಾಗೂ ಶಾಸಕ ಇಕ್ಬಾಲ್ ಹುಸೇನ್ ಕಾಂಗ್ರೆಸ್ ಗ್ಯಾರಂಟಿ ನಾರಿನ್ಯಾಯ ಭಿತ್ತಿಪತ್ರ ಪ್ರದರ್ಶಿಸಿದರು.