ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಬಿಜೆಪಿಗೆ ಸಹಿಸಲಾಗುತ್ತಿಲ್ಲ

| Published : Oct 10 2024, 02:25 AM IST

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಬಿಜೆಪಿಗೆ ಸಹಿಸಲಾಗುತ್ತಿಲ್ಲ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಜನಮಾನಸದಲ್ಲಿ ಉಳಿಯುವಂತಹ ಕೆಲಸಗಳನ್ನು ಮಾಡಿದ್ದು, ಸಿದ್ದರಾಮಯ್ಯನವರ ಜನಪರ ಯೋಜನೆಗಳು ಹಾಗೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ವಿರೋಧ ಪಕ್ಷಗಳು ಭಯದಿಂದ ಈ ರೀತಿಯ ಕೃತ್ಯಗಳನ್ನು ಮಾಡುತ್ತಿವೆ. ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಇಂತಹ ಕೃತ್ಯಗಳಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ತಾಲೂಕಿನ ಬಾಣಾವರದ ಕಾಂಗ್ರೆಸ್ ಮುಖಂಡ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಕುಮಾರ್ ಅವರ ಮನೆಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಧ್ಯಮದೊಡನೆ ಮಾತನಾಡಿದ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಮುಖ್ಯಮಂತ್ರಿಯ ಬದಲಾವಣೆ ವಿಚಾರವಾಗಿ, ರಾಜ್ಯದಲ್ಲಿ ಮುಖ್ಯಮಂತ್ರಿ ಪದವಿ ಖಾಲಿ ಇಲ್ಲ ಮುಖ್ಯಮಂತ್ರಿ ಕುರ್ಚಿ ಖಾಲಿಯಾದ ನಂತರ ಈ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಜನಮಾನಸದಲ್ಲಿ ಉಳಿಯುವಂತಹ ಕೆಲಸಗಳನ್ನು ಮಾಡಿದ್ದು, ಸಿದ್ದರಾಮಯ್ಯನವರ ಜನಪರ ಯೋಜನೆಗಳು ಹಾಗೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ವಿರೋಧ ಪಕ್ಷಗಳು ಭಯದಿಂದ ಈ ರೀತಿಯ ಕೃತ್ಯಗಳನ್ನು ಮಾಡುತ್ತಿವೆ. ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಇಂತಹ ಕೃತ್ಯಗಳಿಂದ ಏನು ಮಾಡಲು ಸಾಧ್ಯವಿಲ್ಲ. ಅಲ್ಲದೆ ಸಿದ್ದರಾಮಯ್ಯ ತಮ್ಮ ಜೀವಮಾನದಲ್ಲಿ ಎಂದಿಗೂ ಸಹ ಯಾವುದೇ ರೀತಿಯ ತಪ್ಪು ಮಾಡದೆ ಹೋರಾಟದ ಮೂಲಕ ಸಾರ್ವಜನಿಕರ ಧ್ವನಿಯಾಗಿ ಬಂದಂತಹವರು ಹಾಗೂ ಬಡವರ ಕಷ್ಟವನ್ನು ಅರಿತಂತವರು ಶ್ರೀಸಾಮಾನ್ಯನು ಸಹ ಸಮಾಜದಲ್ಲಿ ಎಲ್ಲರಂತೆ ಬದುಕಬೇಕೆಂಬ ಮಹದಾಸೆಯಿಂದ ಹಲವಾರು ಗ್ಯಾರಂಟಿ ಯೋಜನೆಗಳನ್ನು ನೀಡಿ ಜನಪರವಾದ ಆಡಳಿತವನ್ನು ನಡೆಸುತ್ತಿರುವಂತಹ ಅವರು ಇಂಥವರ ವಿರುದ್ಧ ವಿರೋಧ ಪಕ್ಷಗಳು ಮಾಡುತ್ತಿರುವಂತಹ ಟೀಕೆ ಹಾಗೂ ಆರೋಪಗಳಿಗೆ ಮುಂಬರುವ ದಿನಗಳಲ್ಲಿ ಸಾರ್ವಜನಿಕರು ಉತ್ತರ ನೀಡುವುದರ ಜೊತೆಗೆ ತಕ್ಕ ಪಾಠವನ್ನು ಕಲಿಸುತ್ತಾರೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿಳಿಚೌಡಯ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಹನುಮಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಸಿ ಶ್ರೀನಿವಾಸ್, ಬಗರ್‌ಹುಕುಂ ಕಮಿಟಿಯ ನಿರ್ದೇಶಕ ಪಿಎಂ ಜಯಣ್ಣ , ತಾಲೂಕು ಪಂಚಾಯತ್ ಮಾಜಿ ಸದಸ್ಯ ರವಿಶಂಕರ್ , ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಶ್ರೀಧರ್, ಕಾಚಿಘಟ್ಟ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಶಂಕರ್ ಸೋಮಣ್ಣ, ಕಾಂಗ್ರೆಸ್ ಯುವ ಮುಖಂಡರುಗಳಾದ ಭಾಸ್ಕರ ಕಿಟ್ಟಿ ಇಮ್ರಾನ್ ವಸೀಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು