ಸಂವಿಧಾನದಿಂದ ಎಲ್ಲರಿಗೂ ಸಮಾನತೆ, ಗೌರವ ದಕ್ಕಿದೆ: ಮಾತೋಶ್ರೀ

| Published : Jan 27 2024, 01:18 AM IST

ಸಾರಾಂಶ

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಡಿಯಲ್ಲಿ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಕಲಬುರಗಿ

ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯ, ಪರಸ್ಪರ ಗೌರವ, ಶಿಕ್ಷಣ ಎಲ್ಲಾ ನಾಗರಿಕರ ಹಕ್ಕಿಗೆ ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಹೇಳಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಡಿಯಲ್ಲಿ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರೊಂದಿಗೆ 75ನೇ ಗಣರಾಜ್ಯೋತ್ಸವದ ಸ್ಮರಣಾರ್ಥ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕಾಲದ ಪರೀಕ್ಷೆಯಲ್ಲಿ ನಿಂತಿರುವ ಸಂವಿಧಾನವು ಸರ್ವಜನರ ಪವಿತ್ರ ಗ್ರಂಥವೆಂದರಲ್ಲದೆ, ಆಡಳಿತದ ಪ್ರತಿಯೊಂದು ಅಂಶ ಒಳಗೊಂಡಿರುವುದನ್ನು ಖಚಿತಪಡಿಸಿಕೊಳ್ಳಲು ಅಂಬೇಡ್ಕರ್ ಅಪಾರ ಕೊಡುಗೆ ನೀಡಿದ್ದಾರೆಂದರು.

ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣ ಪತ್ರ, ಪದಕಗಳನ್ನು ವಿತರಿಸಿದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ, ಶಿವಾನಿ, ಭವಾನಿ, ಮಹೇಶ್ವರಿ, ಸಮಕುಲಪತಿ ವಿ.ಡಿ.ಮೈತ್ರಿ ಹಾಗೂ ಎನ್.ಎಸ್.ದೇವರಕಲ್, ಕುಲಸಚಿವ ಡಾ.ಅನಿಲಕುಮಾರ ಬಿಡವೆ, ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ, ಹಣಕಾಸು ಅಧಿಕಾರಿ ಪ್ರೊ. ಕಿರಣ ಮಾಕಾ ಇದ್ದರು.