ನಮ್ಮ ಭಾರತದ ಸಂವಿಧಾನವು ಎಲ್ಲಾ ನಾಗರಿಕರಿಗೆ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಒದಗಿಸುವ ಪವಿತ್ರವಾದ ಗ್ರಂಥವಾಗಿದ್ದು, ಜಾತಿ, ಧರ್ಮ, ಭಾಷೆ ಮತ್ತು ಲಿಂಗದ ಆಧಾರದ ಮೇಲೆ ಭೇದ, ಭಾವಗಳನ್ನು ಮಾಡದೆ ಸಮಾನತೆಯನ್ನು ಸಾರುವ ಗ್ರಂಥ ಎಂದು ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸೌಭಾಗ್ಯ ಭೂಷೇರ್ ಹೇಳಿದರು.
ಚನ್ನಗಿರಿ: ನಮ್ಮ ಭಾರತದ ಸಂವಿಧಾನವು ಎಲ್ಲಾ ನಾಗರಿಕರಿಗೆ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಒದಗಿಸುವ ಪವಿತ್ರವಾದ ಗ್ರಂಥವಾಗಿದ್ದು, ಜಾತಿ, ಧರ್ಮ, ಭಾಷೆ ಮತ್ತು ಲಿಂಗದ ಆಧಾರದ ಮೇಲೆ ಭೇದ, ಭಾವಗಳನ್ನು ಮಾಡದೆ ಸಮಾನತೆಯನ್ನು ಸಾರುವ ಗ್ರಂಥ ಎಂದು ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸೌಭಾಗ್ಯ ಭೂಷೇರ್ ಹೇಳಿದರು.
ಅವರು ಗುರುವಾರ ಇಲ್ಲಿನ ತಾಲೂಕು ಪಂಚಾಯಿತಿ ಕಚೇರಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ, ರಕ್ಷಣಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಸಮಾರಂಭದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಅವರು, ಭಾರತ ದೇಶದ ಪ್ರತಿಯೊಬ್ಬ ಪ್ರಜೆಯು ಸಂವಿಧಾನದ ಚೌಕಟ್ಟಿನಲ್ಲಿ ಜೀವಿಸುತ್ತಿದ್ದು, ಇಂತಹ ಸಂವಿಧಾನವನ್ನು ರಚನೆ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಆ ಸಮಿತಿಯ ಸದಸ್ಯರುಗಳನ್ನು ಸ್ಮರಿಸಿಕೊಂಡರು.ಸಮಾರಂಭದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎಚ್.ಮೋಹನ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ತಹಸೀಲ್ದಾರ್ ಎನ್.ಜೆ.ನಾಗರಾಜ್, ತಾ.ಪಂ ಕಾರ್ಯನಿರ್ವಾಣಾಧಿಕಾರಿ ಎಂ.ಆರ್.ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ, ಪುರಸಭೆಯ ಮುಖ್ಯಾಧಿಕಾರಿ ಜೆ.ವಿ.ಮಂಜುನಾಥ, ಸಿಡಿಪಿಓ ನಿರ್ಮಲಾ, ಸಮಾಜ ಕಲ್ಯಾಣಾಧಿಕಾರಿ ಪಿ.ಸಿ.ಅಶೋಕ್, ಸರ್ಕಾರಿ ಅಭಿಯೋಜಕಿ ಸರಿತಾ, ವಕೀಲರ ಸಂಘದ ಉಪಾಧ್ಯಕ್ಷ ಸಿ.ತಿಪ್ಪೇಶ್, ಕಾರ್ಯದರ್ಶಿ ಮೋಹನ್, ಪ್ರತಿಭಾ, ಹಿರಿಯ ಆರೋಗ್ಯ ನಿರೀಕ್ಷಕ ಲೋಕೇಶ್ ಉಪಸ್ಥಿತರಿದ್ದರು.ಸಮಾರಂಭಕ್ಕೂ ಮುನ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಲಾಯಿತು.