ಕನ್ನಡಪ್ರಭ ವಾರ್ತೆ ಅಥಣಿ ನಮ್ಮ ಸಂವಿಧಾನದಡಿ ರೂಪಿಸಿರುವ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳು ದೇಶವನ್ನು ಸಮರ್ಥವಾಗಿ ಮುನ್ನಡೆಸಿ ಸರ್ವರಿಗೂ ಸಮಾನ ಅವಕಾಶ ಲಭ್ಯವಾಗುವಂತೆ ಮಾಡಿವೆ. ಪ್ರತಿಯೊಬ್ಬರೂ ಭಾರತದ ಸಂವಿಧಾನದ ಇತಿಹಾಸವನ್ನು ಅರಿಯುವ ಜೊತೆಗೆ ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು
ಕನ್ನಡಪ್ರಭ ವಾರ್ತೆ ಅಥಣಿ
ನಮ್ಮ ಸಂವಿಧಾನದಡಿ ರೂಪಿಸಿರುವ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳು ದೇಶವನ್ನು ಸಮರ್ಥವಾಗಿ ಮುನ್ನಡೆಸಿ ಸರ್ವರಿಗೂ ಸಮಾನ ಅವಕಾಶ ಲಭ್ಯವಾಗುವಂತೆ ಮಾಡಿವೆ. ಪ್ರತಿಯೊಬ್ಬರೂ ಭಾರತದ ಸಂವಿಧಾನದ ಇತಿಹಾಸವನ್ನು ಅರಿಯುವ ಜೊತೆಗೆ ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ತಾಲೂಕ ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ಕಲ್ಪಿಸಲಾಗಿದೆ. ಹಕ್ಕುಗಳನ್ನ ನಾವು ಕಾನೂನಾತ್ಮಕವಾಗಿ ಪಡೆಯುವ ಜೊತೆಗೆ ಕರ್ತವ್ಯಗಳನ್ನು ಕೂಡ ಪಾಲಿಸಬೇಕು. ಸಂವಿಧಾನದಲ್ಲಿನ ಕಾನೂನುಗಳನ್ನು ಪಾಲಿಸುವ ಮೂಲಕ ದೇಶವನ್ನು ಸಮರ್ಥವಾಗಿ ಮುನ್ನಡೆಸಲು ಪ್ರತಿಯೊಬ್ಬ ಭಾರತೀಯ ಕೈಜೋಡಿಸಬೇಕು ಎಂದು ಕರೆ ನೀಡಿದರು.ಆರಂಭದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ಅಂಬೇಡ್ಕರ್ ವೃತ್ತದಿಂದ ಆರಂಭವಾದ ಜಾಗೃತಿ ಜಾಥಾದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯ ವಿದ್ಯಾರ್ಥಿಗಳು, ಪಟ್ಟಣದ ವಿವಿಧ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪಟ್ಟಣದ ಬಸವೇಶ್ವರ ವೃತ್ತದ ಮೂಲಕ ಸಾಗಿ ತಾಲೂಕು ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಸಮರೋಪಗೊಂಡಿತು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಶಿವಲೀಲಾ ಬುಟಾಳಿ, ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ, ಪುರಸಭೆ ಸದಸ್ಯರಾದ ಕಲ್ಲೇಶ ಮಡ್ಡಿ, ವಿಲನರಾಜ್ ಯಲಮಲ್ಲೆ, ಮಲ್ಲಿಕಾರ್ಜುನ ಬುಟಾಳಿ, ಪುರಸಭೆ ಮುಖ್ಯ ಅಧಿಕಾರಿ ಅಶೋಕ ಗುಡಿಮನಿ, ದಲಿತ ಮುಖಂಡರಾದ ಶಶಿ ಸಾಲ್ವೆ, ಮಹಾಂತೇಶ್ ಬಾಡಗಿ, ವಕೀಲ ಮಿತೇಶ್ ಪಟ್ಟಣ, ಶಶಿ ಬಾಡಗಿ, ಶಿವಾನಂದ ಸೌದಾಗರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.