ದೇಶಕ್ಕೆ ಅಂಬೇಡ್ಕರ್ ನೀಡಿರುವ ಸಂವಿಧಾನ ಇಡೀ ಪ್ರಪಂಚದಲ್ಲೇ ಬಲಿಷ್ಠ, ಸಂವಿಧಾನದ ಅಡಿಯಲ್ಲಿ ಭಾರತೀಯರಾದ ನಾವೆಲ್ಲರೂ ಕೆಲಸ ಮಾಡಬೇಕು. ಅಂಬೇಡ್ಕರ್ ಅತ್ಯಂತ ಜ್ಞಾನವುಳ್ಳವರಾಗಿದ್ದು ಅವರು ಪ್ರಧಾನಮಂತ್ರಿ ಆಗಬಾರದೆಂದು ಕಾಂಗ್ರೆಸ್ಸಿವರು ಲೋಕಸಭಾ ಚುನಾವಣೆಯಲ್ಲಿ ಎರಡು ಬಾರಿ ಸೋಲಿಸಿ ಅವಮಾನ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಮುಳಬಾಗಿಲು
ಎಲ್ಲ ಧರ್ಮ ಗ್ರಂಥಗಳಿಗಿಂತ ಡಾ.ಅಂಬೇಡ್ಕರ್ ಬರೆದ ಸಂವಿಧಾನ ಅತ್ಯಂತ ಶ್ರೇಷ್ಠ ಎಂದು ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.ನಗರದ ವಿಠಲ ನಾರಾಯಣಸ್ವಾಮಿ ದೇವಾಲಯದ ಸಮುದಾಯ ಭವನದಲ್ಲಿ ಸಂವಿಧಾನ ದಿನಾಚರಣೆ ಹಾಗೂ ಮುಂಬರುವ ಪದವೀಧರ ಕ್ಷೇತ್ರದ ಚುನಾವಣೆಯ ಸಂಬಂಧ ನಡೆಸಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ವಿಶ್ವದ ಬಲಿಷ್ಠ ಸಂವಿಧಾನ
ದೇಶಕ್ಕೆ ಅಂಬೇಡ್ಕರ್ ನೀಡಿರುವ ಸಂವಿಧಾನ ಇಡೀ ಪ್ರಪಂಚದಲ್ಲೇ ಬಲಿಷ್ಠ, ಸಂವಿಧಾನದ ಅಡಿಯಲ್ಲಿ ಭಾರತೀಯರಾದ ನಾವೆಲ್ಲರೂ ಕೆಲಸ ಮಾಡಬೇಕು. ಅಂಬೇಡ್ಕರ್ ಅತ್ಯಂತ ಜ್ಞಾನವುಳ್ಳವರಾಗಿದ್ದು ಅವರು ಪ್ರಧಾನಮಂತ್ರಿ ಆಗಬಾರದೆಂದು ಕಾಂಗ್ರೆಸ್ಸಿವರು ಲೋಕಸಭಾ ಚುನಾವಣೆಯಲ್ಲಿ ಎರಡು ಬಾರಿ ಸೋಲಿಸಿ ಅವಮಾನ ಮಾಡಿದ್ದಾರೆ. ಜೊತೆಗೆ ಅವರು ನಿಧನರಾದಾಗ ದೆಹಲಿಯಲ್ಲಿ ಅವರ ಅಂತ್ಯಸಂಸ್ಕಾರಕ್ಕೆ ಸ್ಥಳ ನೀಡದೆ ದ್ರೋಹ ಬಗ್ದಿದ್ದಾರೆಂದು ಆರೋಪಿಸಿದರು.ನರೇಂದ್ರ ಮೋದಿ ಪ್ರಧಾನ ಮಂತ್ರಿಯಾದ ಮೇಲೆ ಸಂವಿಧಾನ ದಿನಾಚರಣೆ ಜಾರಿಗೆ ತಂದರು. ಬಿಜೆಪಿ ಮತ್ತು ಆರ್‌ಎಸ್‌ಎಸ್ ಅಂಬೇಡ್ಕರ್ ಪರವಾಗಿ ಕೆಲಸ ಮಾಡಿದ ಕೀರ್ತಿ ಇದೆ. ಕಾಂಗ್ರೆಸ್ ನವರು ಈಗ ಅಂಬೇಡ್ಕರ್ ಪರವಾಗಿ ಮಾತನಾಡುತ್ತಿರುವರಲ್ಲಿ ಯಾವುದೇ ಅರ್ಥವಿಲ್ಲ ಅವರಿಗೆ ಅವಮಾನ ಮಾಡಿದವರು, ಈಗ ಉಲ್ಟಾ ಮಾತನಾಡುತ್ತಿದ್ದು ಇದನ್ನು ಜನ ನಂಬಬಾರದೆಂದು ಮನವಿ ಮಾಡಿದರು.ಜನಹಿತ ಕಾಪಾಡುವಲ್ಲಿ ಕೈ ವಿಫಲ
ಬಿಜೆಪಿ ಪರಾಜಿತ ಅಭ್ಯರ್ಥಿ ಸೀಗೆಹಳ್ಳಿ ಸುಂದರ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರಲ್ಲದೆ ಬಿಜೆಪಿ ಸರ್ಕಾರ ಇದ್ದಾಗ ರಾಜ್ಯದಲ್ಲಿ ಹಲವಾರು ಜನಪರ ಯೋಜನೆಗಳು ಜಾರಿಗೆ ತಂದು ಜನಸಾಮಾನ್ಯರಿಗೆ ಅನುಕೂಲ ಆಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಜನರ ಹಿತ ಕಾಪಾಡದೆ ನಿರ್ಲಕ್ಷ ವಹಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದರು.ಬಿಜೆಪಿ ಮುಖಂಡರಾದ ಎಂ ಕೆ ವಾಸುದೇವ್, ಪಿಎಂ ರಘುನಾಥ್, ಎಂ ವೆಂಕಟೇಶ್. ಮಮತಾ ಗೌಡ, ಗ್ರಾಮಾಂತರ ಅಧ್ಯಕ್ಷ ಸುರೇಶ್ ರಾಜು. ಅಶೋಕ್, ಕೆ.ಜೆ.ಮೋಹನ್, ಮೈಕ್ ಶಂಕರ್, ವಿಶ್ವನಾಥ್ ಕುಮಾರ್, ಬಾಲಕೃಷ್ಣೇಗೌಡ, ಗರಡಿ ಕಿರಣ್ ಇದ್ದರು.