ಸಂವಿಧಾನದ ಆಧಾರದ ಮೇಲೆ ನ್ಯಾಯಾಲಯಗಳು ಕಾನೂನು ಅಡಿ ಕಾರ್ಯನಿರ್ವಹಣೆ ಜೊತೆಗೆ ಕಾನೂನು ಸೇವೆಗಳ ಸಮಿತಿಯಿಂದ ಸಂವಿಧಾನ ಕಾನೂನುಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದೆ. ಕಾನೂನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಸಂವಿಧಾನ ಮೂಲಭೂತ ಹಕ್ಕುಗಳನ್ನು ನೀಡಿದೆ. ಅದರ ಜೊತೆಗೆ ಕರ್ತವ್ಯಗಳನ್ನು ನೆನೆಪಿಸಿದ್ದು, ಕಾನೂನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಜೆಎಂಎಫ್ಸಿ ನ್ಯಾಯಾಲಯ ಸಿವಿಲ್ ನ್ಯಾಯಾಧೀಶರಾದ ಎಂ.ಮಹೇಂದ್ರ ತಿಳಿಸಿದರು.ಪಟ್ಟಣದ ಪ್ರವಾಸಿ ಮುಂಭಾಗ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತದಿಂದ ನಡೆದ ಸಂವಿಧಾನ ದಿನಾಚರಣೆ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದ ನಂತರ ಮಾತನಾಡಿದರು.
ಸಂವಿಧಾನದ ಆಧಾರದ ಮೇಲೆ ನ್ಯಾಯಾಲಯಗಳು ಕಾನೂನು ಅಡಿ ಕಾರ್ಯನಿರ್ವಹಣೆ ಜೊತೆಗೆ ಕಾನೂನು ಸೇವೆಗಳ ಸಮಿತಿಯಿಂದ ಸಂವಿಧಾನ ಕಾನೂನುಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.ತಹಸೀಲ್ದಾರ್ ಡಾ.ಲೋಕೇಶ್ ಮಾತನಾಡಿ, ಸ್ವಾತಂತ್ರ್ಯ ನಂತರ ಸದೃಢ ಭಾರತ ನಿರ್ಮಾಣದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿಕೊಟ್ಟ ವಿಶ್ವ ಶ್ರೇಷ್ಠ ಸಂವಿಧಾನ ದೇಶದ ತಳಪಾಯವಾಗಿದೆ. ಇದು ದೇಶದ ಪ್ರತಿಯೊಬ್ಬರ ಬದುಕು ಆತ್ಮವಾಗಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಡಿ.ಎಂ ಸುಂದರ್ ಮಾತನಾಡಿ, ಸಂವಿಧಾನ ಯಥಾವತ್ತಾಗಿ ಸಂಪೂರ್ಣ ಜಾರಿಗೊಂಡಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು, ಸಂವಿಧಾನವನ್ನು ಪ್ರತಿಯೊಬ್ಬರು ಅರಿತು ಅನುಸರಿಸಿದಾಗ ಶಾಂತಿಯುತ ಸದೃಢ ಭಾರತ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕೆಂದು ನೀಡಿದರು.ಇದೇ ವೇಳೆ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು. ಕಾರ್ಯಕ್ರಮದಲ್ಲಿ ಎಪಿಪಿ ಶಂಕರ್ ಸ್ವಾಮಿ, ಶಿವಕುಮಾರ್, ವಕೀಲರ ಸಂಘದ ಕಾರ್ಯದರ್ಶಿ ನಟೇಶ್, ಬಿಇಒ ಉಮಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ್, ಕುಮಾರ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಸಿಡಿಪಿಒ ನಂಜಮ್ಮಣಿ ಸೇರಿದಂತೆ ವಕೀಲರು, ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಇದ್ದರು.