ಸಾರಾಂಶ
ಹಾವೇರಿ: ಸಂವಿಧಾನವು ಡಾ. ಬಿ.ಆರ್. ಅಂಬೇಡ್ಕರ್ ಅವರು ನಮಗೆ ನೀಡಿದ ವರದಾನವಾಗಿದೆ. ಸಂವಿಧಾನ ಸಮಾಜದ ಎಲ್ಲ ವರ್ಗದವರನ್ನು ಸಮಾನ ರೀತಿಯಲ್ಲಿ ಕಾಣುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಸಿ. ಸದಾನಂದಸ್ವಾಮಿ ಹೇಳಿದರು.ನಗರದ ಜಿಲ್ಲಾ ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ಮಂಗಳವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಅಭಿಯೋಜನಾ ಇಲಾಖೆ ಸಹಯೋಗದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ, ಸಂವಿಧಾನ ಪೀಠಿಕೆ ಬೋಧಿಸಿ ಅವರು ಮಾತನಾಡಿದರು.ಪ್ರತಿಯೊಬ್ಬರೂ ಸಂವಿಧಾನದಡಿ ಕಾರ್ಯನಿರ್ವವಹಿಸಿದರೆ ಸಮಾಜ ಉನ್ನತ ಮಟ್ಟಕ್ಕೆ ಹೋಗಲು ಸಾಧ್ಯ. ಕಾನೂನಿನ ನೆರವಿನ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಹಿರಿಯ ನ್ಯಾಯವಾದಿ ವಿ.ಕೆ. ಕುಲಕರ್ಣಿ ಅವರು ಸಂವಿಧಾನ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನ್ಯಾಯಾಧೀಶರಾದ ಜಿ.ಎಲ್. ಲಕ್ಷ್ಮೀನಾರಾಯಣ, ಎಂ.ಜಿ. ಶಿವಳ್ಳಿ, ನಿಂಗೌಡ ಪಾಟೀಲ, ಪ್ರಕಾಶ ವಿ., ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಆರ್. ಮುತಾಲಿಕದೇಸಾಯಿ, ನ್ಯಾಯಾಧೀಶ ರವಿಪ್ರಕಾಶ ಟಿ. ಅವಿನ್, ಬಿಪಿನ್ ಎಚ್.ಎಂ., ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಪಿ.ಎಸ್. ಹೆಬ್ಬಾಳ ಹಾಗೂ ಸರ್ಕಾರಿ ಅಭಿಯೋಜಕ ಸಿದ್ಧಾರೂಢ ಗೆಜ್ಜಿಹಳ್ಳಿ ಇದ್ದರು.