ಸಾರಾಂಶ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ದೇಶದ ಕೋಟ್ಯಂತರ ಜನತೆಯ ಹಲವು ಶತಮಾನದ ಕನಸಾಗಿದೆ. ಇದೀಗ ನನಸಾಗುತ್ತಿರುವ ಈ ಸಂದರ್ಭದಲ್ಲಿ ಎಲ್ಲ ದೇವಾಲಯಗಳಲ್ಲಿ ಜ.22ರಂದು ಪೂಜೆ, ಭಜನೆ ಮತ್ತಿತರ ಧಾರ್ಮಿಕ ಕಾರ್ಯಗಳ ಮೂಲಕ ಪ್ರತಿಯೊಬ್ಬರೂ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಿಕಾರಿಪುರದಲ್ಲಿ ದೇಗುಲ ಸ್ವಚ್ಛತಾ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ, ಶಿಕಾರಿಪುರ
ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ದೇಶದ ಕೋಟ್ಯಂತರ ಜನತೆಯ ಹಲವು ಶತಮಾನದ ಕನಸಾಗಿದೆ. ಇದೀಗ ನನಸಾಗುತ್ತಿರುವ ಈ ಸಂದರ್ಭದಲ್ಲಿ ಎಲ್ಲ ದೇವಾಲಯಗಳಲ್ಲಿ ಜ.22ರಂದು ಪೂಜೆ, ಭಜನೆ ಮತ್ತಿತರ ಧಾರ್ಮಿಕ ಕಾರ್ಯಗಳ ಮೂಲಕ ಪ್ರತಿಯೊಬ್ಬರೂ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆ ಅಂಗವಾಗಿ ಭಾನುವಾರ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಹುಚ್ಚುರಾಯಸ್ವಾಮಿ ದೇವಸ್ಥಾನದಲ್ಲಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಡೆದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಖುದ್ದು ದೇವಸ್ಥಾನ ಸ್ವಚ್ಛತೆ ನಡೆಸಿ, ಅವರು ಮಾತನಾಡಿದರು. ರಾಮಮಂದಿರ ನಿರ್ಮಾಣಕ್ಕಾಗಿ ಹಲವರು ಹುತಾತ್ಮರಾಗಿದ್ದು, ಅವರ ತ್ಯಾಗ ಬಲಿದಾನ ಸಾರ್ಥಕವಾಗುತ್ತಿದೆ ಎಂದು ತಿಳಿಸಿದರು.
ಜ.22ರಂದು ದೇಶದ ಪ್ರತಿ ದೇವಸ್ಥಾನ, ಧಾರ್ಮಿಕ ಕೇಂದ್ರದಲ್ಲಿ ಶ್ರೀ ರಾಮಚಂದ್ರನ ಪೂಜೆ ಭಜನೆ ಮೂಲಕ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತಾಗಬೇಕು ಎಂಬುದು ಪ್ರದಾನಿ ಅಪೇಕ್ಷೆಯಾಗಿದೆ. ಪುಣ್ಯದ ಕಾರ್ಯದಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು. ಈ ದಿಸೆಯಲ್ಲಿ ದೇವಸ್ಥಾನದ ಸ್ವಚ್ಛತಾ ಕಾರ್ಯದ ಜತೆಗೆ ಎಲ್ಲ ರೀತಿಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ತಿಳಿಸಿದರು.ಈ ಸಂದರ್ಭ ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಮುಖಂಡ ಬೆಣ್ಣೆ ಪ್ರವೀಣ್, ಲಕ್ಷ್ಮಣ್ ಕೆ.ಎಚ್. ಮಧುಕೇಶ್ವರ, ರವಿಕಾಂತ, ಶುಭ ರಘು, ಸುಕನ್ಯಾ, ದೀಪ ದೀಕ್ಷಿತ್, ಸುಷ್ಮಾ ದೀಕ್ಷಿತ್, ಪಲ್ಲವಿ, ಪುರಸಭಾ ಆರೋಗ್ಯಾಧಿಕಾರಿ ರಾಜಕುಮಾರ್ ಮತ್ತಿತರರು ಹಾಜರಿದ್ದರು.
- - - -14ಕೆಎಸ್.ಕೆಪಿ1:ಶಿಕಾರಿಪುರದ ಶ್ರೀ ಹುಚ್ಚುರಾಯಸ್ವಾಮಿ ದೇವಸ್ಥಾನದಲ್ಲಿ ಶಾಸಕ ವಿಜಯೇಂದ್ರ ಭಾನುವಾರ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.