ಸಾರಾಂಶ
ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಮತ್ತು ಅನೇಕ ಸ್ವಾತಂತ್ರ್ಯ ಹೋರಾಟಗಾರರ ನೇತೃತ್ವದಲ್ಲಿ ನಡೆದ ಹೋರಾಟದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಪಡೆದು ಅಮೃತ ಮಹೋತ್ಸವವನ್ನು ದಾಟಿ ಮುನ್ನಡೆದಿದ್ದೇವೆ .
ಕನ್ನಡ ಪ್ರಭ ವಾರ್ತೆ ಮದ್ದೂರು
ಸ್ವಾತಂತ್ರ್ಯ ಸೇನಾನಿಗಳ ನಿರಂತರ ಹೋರಾಟ, ಸಕಾರಾತ್ಮಕ ದೃಷ್ಟಿಕೋನ ಮತ್ತು ಸಮರ್ಪಣಾ ಮನೋಭಾವದಿಂದಾಗಿ ಸ್ವಾತಂತ್ರ್ಯದ ನಂತರವೂ ನಮ್ಮ ದೇಶದ ಪ್ರಗತಿಗೆ ಪ್ರೇರಣೆ ನೀಡಿದೆ ಎಂದು ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಶುಕ್ರವಾರ ಹೇಳಿದರು.ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ನಡೆದ 79ನೇ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಹಲವು ಹೋರಾಟಗಾರರು ಹಾಗೂ ಕೋಟ್ಯಾಂತರ ಜನರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ ಸಿಕ್ಕಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ನಮ್ಮ ಸಂವಿಧಾನವು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ನಾಲ್ಕು ತತ್ವಗಳನ್ನು ಆಧರಿಸಿದೆ. ಈ ತತ್ವಗಳು ನಮ್ಮ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳಾಗಿವೆ. ಇವುಗಳು ಪ್ರತಿಯೊಬ್ಬ ನಾಗರಿಕನ ಘನತೆ ಮತ್ತು ಸಮಾನ ಹಕ್ಕನ್ನು ಎತ್ತಿ ಹಿಡಿಯುತ್ತವೆ ಎಂದು ಅಭಿಪ್ರಾಯಪಟ್ಟರು.ಶಾಸಕ ಕೆ.ಎಂ.ಉದಯ್ ಮಾತನಾಡಿ, ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಮತ್ತು ಅನೇಕ ಸ್ವಾತಂತ್ರ್ಯ ಹೋರಾಟಗಾರರ ನೇತೃತ್ವದಲ್ಲಿ ನಡೆದ ಹೋರಾಟದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಪಡೆದು ಅಮೃತ ಮಹೋತ್ಸವವನ್ನು ದಾಟಿ ಮುನ್ನಡೆದಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ವೆಂಕಟೇಗೌಡ, ಪಿಡಿಒ ಅಶ್ವಿನಿ, ಪತ್ರಕರ್ತರಾದ ರಾಘವೇಂದ್ರ, ಎಸ್.ಟಿ.ಕೃಷ್ಣ, ನಿವೃತ್ತ ಯೋಧ ಬಿ.ಡಿ.ಶ್ರೀನಿವಾಸ, ರಂಗಭೂಮಿ ಕಲಾವಿದ ಪಾಪಣ್ಣ, ಶಿಕ್ಷಣ ಕ್ಷೇತ್ರದಿಂದ ವಿ.ಆರ್.ಪವಿತ್ರ ಹಾಗೂ ಸಿ.ಎಸ್.ಶಿವಕುಮಾರ್ ರನ್ನು ಅಭಿನಂದಿಸಲಾಯಿತು. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ನಿವೃತ್ತ ಪ್ರಾಧ್ಯಾಪಕ ಪ್ರೊ, ಬಿ.ಎಸ್.ಬೋರೇಗೌಡ ಪ್ರಧಾನ ಭಾಷಣ ಮಾಡಿದರು.
ಈ ವೇಳೆ ತಾಪಂ ಇಒ ರಾಮಲಿಂಗಯ್ಯ, ಬಿಇಒ ಎಸ್. ಬಿ.ಧನಂಜಯ, ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಶ್ರೀಧರ್, ಅಧ್ಯಕ್ಷೆ ಕೋಕಿಲ ಅರುಣ, ಉಪಾಧ್ಯಕ್ಷ ಪ್ರಸನ್ನ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತ, ಪುರಸಭಾ ಸದಸ್ಯರು , ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಇದ್ದರು .