ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಕೊಡುಗೆ ಅನನ್ಯ

| Published : Nov 21 2024, 01:01 AM IST

ಸಾರಾಂಶ

ತಿಪಟೂರು ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಅತ್ಯಮೂಲ್ಯ ಕೊಡುಗೆ ನೀಡಿದ್ದು, ಗ್ರಾಮೀಣ ಭಾಗದ ಜನತೆಯ ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಒಕ್ಕೂಟಗಳು ಹೆಚ್ಚು ಶ್ರಮಿಸುವ ಮೂಲಕ ಬಹು ಸೇವಾ ಕೇಂದ್ರಗಳಾಗಿ ಮಾರ್ಪಟ್ಟಿವೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಿ. ವೆಂಕಟೇಗೌಡ ತಿಳಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಅತ್ಯಮೂಲ್ಯ ಕೊಡುಗೆ ನೀಡಿದ್ದು, ಗ್ರಾಮೀಣ ಭಾಗದ ಜನತೆಯ ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಒಕ್ಕೂಟಗಳು ಹೆಚ್ಚು ಶ್ರಮಿಸುವ ಮೂಲಕ ಬಹು ಸೇವಾ ಕೇಂದ್ರಗಳಾಗಿ ಮಾರ್ಪಟ್ಟಿವೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಿ. ವೆಂಕಟೇಗೌಡ ತಿಳಿಸಿದರು. ನಗರದ ಗೊರಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿ ಸಹಕಾರ ಸಂಘದ ಆವರಣದಲ್ಲಿ ಬುಧವಾರ ನಡೆದ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಹಾಲು ಒಕ್ಕೂಟ, ಸಹಕಾರ ಇಲಾಖೆ ಹಾಗೂ ತಾಲೂಕಿನ ಎಲ್ಲಾ ಸಹಕಾರ ಸಂಘ ಸಂಸ್ಥೆಗಳ ಸಹಯೋಗದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಉತ್ತಮ ವಿಶ್ವ ನಿರ್ಮಾಣ ಹಾದಿಗಾಗಿ ಹಾಗೂ ಸುಸ್ಥಿರ ಅಭಿವೃದ್ದಿ ಗುರಿ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನ.೧೪ರಿಂದ ೨೦ರವರೆಗೆ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆ ನಡೆಸಿಕೊಂಡು ಬರಲಾಗುತ್ತಿದೆ. ಏಳು ದಿನಗಳ ಕಾಲ ನಡೆಯುವ ಸಹಕಾರ ಸಪ್ತಾಹ ಆಚರಣೆಯಲ್ಲಿ ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರು ಭಾಗವಹಿಸಬೇಕು. ಸಹಕಾರ ಸಂಘಗಳಿಗೆ ನಬಾರ್ಡ್ ಮೂಲಕ ಈ ಹಿಂದೆ ಶೇ.೮೦ರಷ್ಟು ಹೆಚ್ಚು ಸಾಲ ನೀಡಲಾಗುತ್ತಿದ್ದು. ಆದರೆ ಈಗ ಕಡಿಮೆ ಮಾಡಲಾಗಿದೆ. ಇದರಿಂದ ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರ ಬ್ಯಾಂಕುಗಳಿಗೆ ತೊಂದರೆಯಾಗುತ್ತಿದೆ. ರಾಷ್ಟ್ರ ಮಟ್ಟದ ಸಹಕಾರಿ ನಿಯೋಗದ ವತಿಯಿಂದ ಪ್ರದಾನ ಮಂತ್ರಿ ಹಾಗೂ ಕೇಂದ್ರ ಸಹಕಾರ ಸಚಿವರಾದ ಅಮಿತ್‌ಶಾರನ್ನು ಭೇಟಿ ಮಾಡಲಾಗುತ್ತಿದೆ ಎಂದ ಅವರು ನ.೨೯ರಂದು ಹೆಗ್ಗೆರೆಯ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕೆಂದರು.ಕಾರ್ಯಕ್ರಮದಲ್ಲಿ ಗೊರಗೊಂಡನಹಳ್ಳಿ ಸಂಘದ ಅಧ್ಯಕ್ಷ ಎಚ್.ಸಿ. ರಾಜಶೇಖರಯ್ಯ, ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ್ ಹಿರೇಮಠ, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಟಿ.ಪಿ. ಉಮಾಶಂಕರ್ , ಮಂಜುನಾಥ್, ಟಿಎಪಿಸಿಎಂಎಸ್ ಅಧ್ಯಕ್ಷ ನಾಗರಾಜು, ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ದಿವಾಕರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್.ಎಸ್. ನಾಗರಾಜು, ಸಂಘದ ಅಧ್ಯಕ್ಷೆ ಕಲಾವತಿ, ಮಾಜಿ ಅಧ್ಯಕ್ಷ ಮಹಾಲಿಂಗಪ್ಪ, ನಿರ್ದೇಶಕರಾದ ದೇವರಾಜು, ವಿಶ್ವೇಶ್ವರಯ್ಯ, ಗಾಲ್, ಪಿಎಲ್‌ಡಿ ಬ್ಯಾಂಕ್ ವ್ಯವಸ್ಥಾಪಕ ದಯಾನಂದ್, ಸಹಕಾರಿ ಹಾಲು ಒಕ್ಕೂಟದ ತಾ. ಮುಖ್ಯಸ್ಥೆ ಶಶಿಕಲಾ, ವಿಸ್ತರಣಾಧಿಕಾರಿ ಲಕ್ಷ್ಮೀ, ಸುನೀಲ್, ಅಭಿಷೇಕ್, ಸುಪ್ರಿತಾ, ಬಿಂದು, ಸಹಕಾರಿಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್‌ಕುಮಾರ್, ಮನು ಮತ್ತಿತರರಿದ್ದರು.