ದೊಡ್ಡಬಳ್ಳಾಪುರ ಹೋರಾಟಗಾರರ ಕೊಡುಗೆ ಅಪಾರ

| Published : Aug 16 2024, 01:00 AM IST / Updated: Aug 16 2024, 01:01 AM IST

ಸಾರಾಂಶ

ನಗರದ ಸ್ವಾತಂತ್ರ್ಯ ಹೋರಾಟಗಾರರು ಸ್ವಾತಂತ್ರ್ಯ ಚಳವಳಿಯಲ್ಲಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ನಗರದ ಸ್ವಾತಂತ್ರ್ಯ ಹೋರಾಟಗಾರರು ಸ್ವಾತಂತ್ರ್ಯ ಚಳವಳಿಯಲ್ಲಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.

ಇಲ್ಲಿನ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಭಾರತದ ಸ್ವಾತಂತ್ರ್ಯ ಚಳವಳಿಗಳಾದ ವಿದುರಾಶ್ವತ್ಥ ಹೋರಾಟ, ಶಿವಪುರ ಧ್ವಜ ಸತ್ಯಾಗ್ರಹ, ಬೆಳಗಾವಿ ಕಾಂಗ್ರೆಸ್ ಅಧಿವೇಶನ, ದಂಡಿ ಉಪ್ಪಿನ ಸತ್ಯಾಗ್ರಹ ಹಲವಾರು ಮಹತ್ವದ ಹೋರಾಟಗಳಲ್ಲಿ ದೊಡ್ಡಬಳ್ಳಾಪುರ ಸ್ವಾತಂತ್ರ್ಯ ಹೋರಾಟಗಾರರು ಭಾಗವಹಿಸಿದ್ದರು.

ಟಿ.ಸಿದ್ದಲಿಂಗಯ್ಯ, ರುಮಾಲೆ ಚನ್ನಬಸವಯ್ಯ, ಎಚ್.ಮುಗುವಾಳಪ್ಪ ಅಪ್ರತಿಮ ದೇಶಭಕ್ತರಾಗಿದ್ದರು. ಸ್ವಾತಂತ್ರ್ಯ ನಂತರವೂ ಇವರು ಹಲವಾರು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ನಿರತರಾಗಿದ್ದರು. ರೈತರ ಮತ್ತು ದುರ್ಬಲರ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ, ಪ್ರತಿನಿಧಿಗಳಾದ ಮುನಿರಾಜು, ನಾಗರತ್ನಮ್ಮ, ಷಫೀರ್, ಕಸಬಾ ಹೋಬಳಿ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಸಾಸಲು ಹೋಬಳಿ ಅಧ್ಯಕ್ಷ ಜಿ.ನಾಗರಾಜು, ತೂಬಗೆರೆ ಹೋಬಳಿ ಕೋಶಾಧ್ಯಕ್ಷ ಉದಯರಾಧ್ಯ, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜ ಶಿರವಾರ, ದರ್ಗಾಜೋಗಿಹಳ್ಳಿ ಮಲ್ಲೇಶ್, ಕನ್ನಡ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನಾಗರಾಜ್, ತಾಲೂಕು ಅಧ್ಯಕ್ಷ ಶಶಿಧರ್, ಯುವಘಟಕದ ದರ್ಶನ್, ಮಂಜುನಾಥ ಕಲಾ ಸಂಘದ ಚಿತ್ರಲಿಂಗಯ್ಯ, ಮಂಜುನಾಥ್, ನಾಗದಳ ನಟರಾಜು ಭಾಗವಹಿಸಿದ್ದರು.