ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಆರ್.ರವಿ ಅವರನ್ನು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅಭಿನಂದಿಸಿ, ಶುಭ ಹಾರೈಸಿದ್ದಾರೆ.
- ಜಿಲ್ಲಾ ವರದಿಗಾರರ ಕೂಟ ನೂತನ ಅಧ್ಯಕ್ಷ ಆರ್.ರವಿಗೆ ಅಭಿನಂದಿಸಿದ ಸಚಿವ
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಆರ್.ರವಿ ಅವರನ್ನು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅಭಿನಂದಿಸಿ, ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾಧ್ಯಮ ಪ್ರತಿನಿಧಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಮಾಜದ ಸಮಸ್ಯೆಗಳನ್ನು ಜನಸಾಮಾನ್ಯರ ಗಮನಕ್ಕೆ ತರುವುದರ ಜತೆಗೆ, ಜನರ ಧ್ವನಿಯಾಗಿ ಕಾರ್ಯನಿರ್ವಹಿಸುವಲ್ಲಿ ಪತ್ರಕರ್ತರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ನೂತನ ಅಧ್ಯಕ್ಷ ಆರ್.ರವಿ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ವರದಿಗಾರರ ಕೂಟವು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ. ಪತ್ರಕರ್ತರ ಹಿತಾಸಕ್ತಿ ಕಾಪಾಡುವುದು, ವೃತ್ತಿಪರ ಬೆಳವಣಿಗೆಗೆ ಉತ್ತೇಜನ ನೀಡುವುದು ಹಾಗೂ ಅವರ ಹಕ್ಕುಗಳ ರಕ್ಷಣೆಗೆ ಪೂರಕವಾಗಿ ಕೆಲಸ ಮಾಡಲಿ ಎಂದು ಆಶಿಸಿದರು.ಈ ಸಂದರ್ಭದಲ್ಲಿ ವರದಿಗಾರರ ಕೂಟದ ಮಾಜಿ ಅಧ್ಯಕ್ಷರಾದ ಕೆ.ಏಕಾಂತಪ್ಪ, ಬಸವರಾಜ ದೊಡ್ಡಮನಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕೆ.ಚಂದ್ರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ವಿ. ಬದ್ರಿನಾಥ್, ಖಜಾಂಚಿ ಜೆ.ಎಸ್. ವೀರೇಶ್, ಪತ್ರಕರ್ತರಾದ ಮಧು ನಾಗರಾಜ್, ಪುನೀತ್ ಆಪ್ತಿ, ಮಲ್ಲಿಕಾರ್ಜುನ ಕೈದಾಳೆ, ನೂರುಲ್ಲಾ, ಪರಶುರಾಮ್, ಕಿರಣ್, ರಾಮ್ ಪ್ರಸಾದ್, ಫಕ್ರುದ್ದೀನ್, ಎ.ಎನ್.ನಿಂಗಪ್ಪ, ಡಿ.ರಂಗನಾಥ ರಾವ್, ಉಮೇಶ್, ಗೋವಿಂದರಾಜ್, ಕೆ.ಸಿ.ಮಂಜುನಾಥ್, ನಮ್ಮಗುರಿ ಮಂಜುನಾಥ್, ಶಿವಕುಮಾರ್, ಸಿ. ವರದರಾಜು ಸೇರಿದಂತೆ ಹಲವು ಪತ್ರಕರ್ತರು ಉಪಸ್ಥಿತರಿದ್ದರು.
- - -(ಕೋಟ್)
ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷರಾಗಿ ಆರ್. ರವಿ ಆಯ್ಕೆಯಾಗಿದ್ದು, ಅವರ ನೇತೃತ್ವದಲ್ಲಿ ವರದಿಗಾರರ ಕೂಟವು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ. ಪತ್ರಕರ್ತರ ಹಿತಾಸಕ್ತಿ ಕಾಪಾಡುವುದು, ವೃತ್ತಿಪರ ಬೆಳವಣಿಗೆಗೆ ಉತ್ತೇಜನ ನೀಡುವುದು ಹಾಗೂ ಅವರ ಹಕ್ಕುಗಳ ರಕ್ಷಣೆಗೆ ಪೂರಕವಾಗಿ ಕೆಲಸ ಮಾಡಲಿ. - ಎಸ್.ಎಸ್.ಮಲ್ಲಿಕಾರ್ಜುನ್, ಜಿಲ್ಲಾ ಉಸ್ತುವಾರಿ ಸಚಿವ.- - -
-24ಕೆಡಿವಿಜಿ36:ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ಆರ್.ರವಿ ಅವರಿಗೆ ಸಚಿವ ಕೆ.ಎಸ್.ಬಸವಂತಪ್ಪ ಅಭಿನಂದಿಸಿದರು.